AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಾರ್ ಕುಟುಂಬದಲ್ಲಿ ಭುಗಿಲೆದ್ದ ಎಫ್‌ಐಆರ್ ಜಟಾಪಟಿ: ಅಣ್ಣನ ಸಾವಿಗೆ ನ್ಯಾಯ ಕೇಳಿದ ಸುಳೆ, ರಾಜಕೀಯ ಮಾಡಬೇಡಿ ಎಂದ ಸುನೇತ್ರಾ

ಬಾರಾಮತಿ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವಿನ ಕುರಿತು ಪವಾರ್ ಕುಟುಂಬದಲ್ಲಿ ತೀವ್ರ ರಾಜಕೀಯ ಜಟಾಪಟಿ ಭುಗಿಲೆದ್ದಿದೆ. ಸಂಸದೆ ಸುಪ್ರಿಯಾ ಸುಳೆ ಎಫ್‌ಐಆರ್ ದಾಖಲಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರೆ, ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ರಾಜಕೀಯ ಮಾಡದಂತೆ ಮನವಿ ಮಾಡಿ, ತನಿಖಾ ಸಂಸ್ಥೆಗಳಿಗೆ ಕಾಲಾವಕಾಶ ನೀಡಲು ಕೇಳಿದ್ದಾರೆ. ಈ ಆರೋಪ-ಪ್ರತ್ಯಾರೋಪಗಳು ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿವೆ.

ಪವಾರ್ ಕುಟುಂಬದಲ್ಲಿ ಭುಗಿಲೆದ್ದ ಎಫ್‌ಐಆರ್ ಜಟಾಪಟಿ: ಅಣ್ಣನ ಸಾವಿಗೆ ನ್ಯಾಯ ಕೇಳಿದ ಸುಳೆ, ರಾಜಕೀಯ ಮಾಡಬೇಡಿ ಎಂದ ಸುನೇತ್ರಾ
ಸುಪ್ರಿಯಾ-ಸುನೇತ್ರImage Credit source: The week
ನಯನಾ ರಾಜೀವ್
|

Updated on: Sep 04, 2026 | 12:09 PM

Share

ಪುಣೆ, ಸೆಪ್ಟೆಂಬರ್ 04: ಮಹಾರಾಷ್ಟ್ರ ಮಾಡಿ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತದ ಕುರಿತು ಎಫ್‌ಐಆರ್ ದಾಖಲಾಗಿಲ್ಲ ಎಂದು ಸಂಸದೆ ಸುಪ್ರಿಯಾ ಸುಳೆ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಅಜಿತ್ ಪವಾರ್ ಪತ್ನಿ ಹಾಗೂ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಭಾವುಕ ಪ್ರತಿಕ್ರಿಯೆ ನೀಡಿದ್ದಾರೆ.

ಅಜಿತ್ ಅವರ ಅಗಲಿಕೆಯ ನೋವು ಅವರ ತಾಯಿ, ಮಕ್ಕಳು ಮತ್ತು ನನಗಿಂತ ಬೇರೆ ಯಾರಿಗೂ ಹೆಚ್ಚು ಕಾಡಲು ಸಾಧ್ಯವಿಲ್ಲ ಎಂದಿರುವ ಅವರು, ಈ ಸೂಕ್ಷ್ಮ ಸಾವಿನ ವಿಚಾರದಲ್ಲಿ ಯಾರೂ ಕೀಳು ರಾಜಕೀಯ ಮಾಡಬಾರದು ಮತ್ತು ತನಿಖಾ ಸಂಸ್ಥೆಗಳಿಗೆ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುನೇತ್ರಾ ಪವಾರ್, ಈ ದುರಂತದ ನಂತರ ಕುಟುಂಬವು ನಿರ್ದಿಷ್ಟ ತೀರ್ಮಾನವನ್ನು ನಿರೀಕ್ಷಿಸುತ್ತಿದೆ ಮತ್ತು ಆ ನಿಟ್ಟಿನಲ್ಲಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಾಗಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ವಿಧಾನಸಭೆಯಲ್ಲಿ ನೀಡಿದ ಮಾತಿನಂತೆ ತನಿಖೆ ನಡೆಸಲು ಪ್ರಯತ್ನಿಸುತ್ತಿದ್ದು, ತನಿಖಾ ಸಂಸ್ಥೆಗಳಿಗೆ ತಮ್ಮ ಪ್ರಕ್ರಿಯೆ ಪೂರ್ಣಗೊಳಿಸಲು ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು.

ಮತ್ತಷ್ಟು ಓದಿ:

ಫಡ್ನವಿಸ್ ಸಂಪುಟ ಸಭೆಗೆ ಏಕನಾಥ್ ಶಿಂಧೆ ಗೈರು, ದಿಢೀರ್ ದೆಹಲಿ ಪ್ರವಾಸ: ಮಹಾರಾಷ್ಟ್ರ ಮೈತ್ರಿಕೂಟದಲ್ಲಿ ಬಿರುಕಿನ ಊಹಾಪೋಹ

ಸಂವಿಧಾನ ಮತ್ತು ದೇಶದ ಕಾನೂನಿನ ಮೇಲೆ ತಮಗೆ ಅಪಾರ ನಂಬಿಕೆಯಿದೆ ಎಂದು ಸ್ಪಷ್ಟಪಡಿಸಿದ ಸುನೇತ್ರಾ, ರಾಜಕೀಯ ಲಾಭಕ್ಕಾಗಿ ಹೇಳಿಕೆಗಳನ್ನು ನೀಡುವವರು ಅಜಿತ್ ದಾದಾ ಅವರ ವೃದ್ಧ ತಾಯಿ ಹಾಗೂ ಮಕ್ಕಳ ದುಃಖವನ್ನು ಗಮನದಲ್ಲಿಟ್ಟುಕೊಂಡು ಸಂವೇದನಾಶೀಲವಾಗಿ ನಡೆದುಕೊಳ್ಳಬೇಕು ಎಂದು ಕಿಡಿಕಾರಿದರು.

ಇದಕ್ಕೂ ಮುನ್ನ ತೀವ್ರ ವಾಗ್ದಾಳಿ ನಡೆಸಿದ್ದ ಸಂಸದೆ ಸುಪ್ರಿಯಾ ಸುಳೆ, ಅಜಿತ್ ಪವಾರ್ ಸಾವನ್ನಪ್ಪಿ ತಿಂಗಳುಗಳೇ ಕಳೆದರೂ ಪೊಲೀಸರು ಈವರೆಗೂ ಎಫ್‌ಐಆರ್ ದಾಖಲಿಸದಿರುವುದು ಆಶ್ಚರ್ಯ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಮಹಾಯುತಿ ಸರ್ಕಾರದಲ್ಲಿರುವ ಅಜಿತ್ ಪವಾರ್ ಬಣದ 40 ಶಾಸಕರು ಮತ್ತು ಸಚಿವರು ತಮ್ಮ ನಾಯಕನ ಸಾವಿಗೆ ನ್ಯಾಯ ಕೇಳುವ ಬದಲು ಅಧಿಕಾರವನ್ನು ಅನುಭವಿಸುತ್ತಿದ್ದಾರೆ ಎಂದು ಅವರು ಕಟುವಾಗಿ ಆರೋಪಿಸಿದ್ದರು. ಈ ಆರೋಪ-ಪ್ರತ್ಯಾರೋಪಗಳು ಪವಾರ್ ಕುಟುಂಬ ಹಾಗೂ ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಮತ್ತೆ ಭಾರಿ ಸಂಚಲನ ಸೃಷ್ಟಿಸಿವೆ ಎಂದಿದ್ದರು.

ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ನಾಯಕ ಅಮಿತ್ ಠಾಕ್ರೆ ವಿರುದ್ಧ ಕ್ಷಿಪ್ರವಾಗಿ ಎಫ್‌ಐಆರ್ ದಾಖಲಿಸುವ ಪೊಲೀಸರು, ಮಾಜಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿ ತಿಂಗಳುಗಳೇ ಕಳೆದರೂ ಇನ್ನೂ ಎಫ್‌ಐಆರ್ ದಾಖಲಿಸಿಲ್ಲವೇಕೆ ಎಂದು ಸುಳೆ ಪ್ರಶ್ನಿಸಿದ್ದರು.

ಬಾರಾಮತಿ ವಿಮಾನ ಅಪಘಾತ: ಜನವರಿ 28 ರಂದು ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಲಿಯರ್‌ಜೆಟ್ 45 ಎಕ್ಸ್‌ಆರ್ (Learjet 45 XR) ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಕಳಪೆ ಗೋಚರತೆಯಿಂದ ಮರಗಳಿಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿತ್ತು. ಈ ದುರಂತದಲ್ಲಿ ಅಜಿತ್ ಪವಾರ್ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದರು.

ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಸಹ ಈ ಪ್ರಕರಣದಲ್ಲಿ ವಿಎಸ್ಆರ್ ಏವಿಯೇಷನ್ ಪಾತ್ರವನ್ನು ತನಿಖೆ ಮಾಡಬೇಕು ಹಾಗೂ ತನಿಖೆಯನ್ನು ತಕ್ಷಣ ಸಿಬಿಐಗೆ ಒಪ್ಪಿಸಬೇಕು ಎಂದು ಸತತವಾಗಿ ಒತ್ತಾಯಿಸುತ್ತಿದ್ದಾರೆ. ವಿಮಾನ ಅಪಘಾತ ತನಿಖಾ ಬ್ಯೂರೋ ವರದಿ ಬರುವವರೆಗೆ ಕಾಯಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More