ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ರಕ್ಗೆ ಆ್ಯಂಬುಲೆನ್ಸ್ (Ambulance) ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಆಸ್ಪತ್ರೆಗೆ ಚೆಕ್ಅಪ್ಗೆಂದು ಹೋಗಿದ್ದ 6 ಮಂದಿ ಆ್ಯಂಬುಲೆನ್ಸ್ನಲ್ಲಿ ಮನೆಗೆ ವಾಪಾಸ್ ತೆರಳುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಚಾಲಕ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಬರೇಲಿಯ ಫತೇಗಂಜ್ ಥಾನಾ ಪ್ರದೇಶದಲ್ಲಿ ಟ್ರಕ್ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ಏಳು ಜನರು ಸಾವನ್ನಪ್ಪಿದ್ದಾರೆ. ರಾಮಮೂರ್ತಿ ಆಸ್ಪತ್ರೆಯ ಆಂಬ್ಯುಲೆನ್ಸ್ ದೆಹಲಿಯಿಂದ ಬರೇಲಿಗೆ ಬರುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯ ಸಂಖಾ ಸೇತುವೆ ಬಳಿ ಅಪಘಾತ ಸಂಭವಿಸಿದೆ ಎಂದು ಫತೇಗಂಜ್ ಪಶ್ಚಿಮ ವಲಯ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿಎಂ ಕಚೇರಿಯ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಈ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಬರೇಲಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುವ ಮುಖ್ಯಮಂತ್ರಿಗಳು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ.
#UPCM @myogiadityanath ने जनपद बरेली में सड़क दुर्घटना में हुई जनहानि पर गहरा शोक प्रकट किया है।
मुख्यमंत्री जी ने दिवंगत आत्माओं की शांति की कामना करते हुए शोक संतप्त परिजनों के प्रति संवेदना व्यक्त की है।
— CM Office, GoUP (@CMOfficeUP) May 31, 2022
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:26 am, Tue, 31 May 22