ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡುವೆ; ಬಾಕಿ ಜಿಎಸ್​ಟಿ ಬಗ್ಗೆಯೂ ಕೇಳುತ್ತೇನೆ: ಸಿಎಂ ಬೊಮ್ಮಾಯಿ

ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನದ ಬಗ್ಗೆ ಕೇಳುತ್ತೇನೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯಕ್ಕೆ ಬರಬೇಕಾದ ಬಾಕಿ ಜಿಎಸ್​ಟಿ ಬಗ್ಗೆಯೂ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡುವೆ; ಬಾಕಿ ಜಿಎಸ್​ಟಿ ಬಗ್ಗೆಯೂ ಕೇಳುತ್ತೇನೆ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9kannada Web Team

| Edited By: sandhya thejappa

Jul 31, 2021 | 9:30 AM

ದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಅಲ್ಲಿ ವರಿಷ್ಠರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಗೆ ಕೆಲ ಸಲಹೆಗಳನ್ನು ಪಡೆದಿದ್ದಾರೆ. ಅಲ್ಲದೇ ಇವತ್ತು (ಜುಲೈ 31) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರಬೇಕಾದ ಅನುದಾನದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನದ ಬಗ್ಗೆ ಕೇಳುತ್ತೇನೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯಕ್ಕೆ ಬರಬೇಕಾದ ಬಾಕಿ ಜಿಎಸ್​ಟಿ ಬಗ್ಗೆಯೂ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಸಚಿವ ಸಂಪುಟ ರಚನೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದೇನೆ. ನಾಯಕರು ಕರೆದರೆ ಹೋಗಿ ಈ ಬಗ್ಗೆ ಚರ್ಚಿಸುತ್ತೇನೆ. ಮಧ್ಯಾಹ್ನದೊಳಗೆ ಲಿಸ್ಟ್ ಬರುತ್ತೋ ಇಲ್ವೋ ಗೊತ್ತಿಲ್ಲ. ಹೈಕಮಾಂಡ್ನಿಂದ ನನಗೆ ಇನ್ನೂ ಕರೆಯೇ ಬಂದಿಲ್ಲ. ಕರೆ ಬಂದ ಕೂಡಲೇ ಪಟ್ಟಿಯ ಬಗ್ಗೆ ಚರ್ಚೆ ಮಾಡುವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಭೇಟಿಯಾಗುತ್ತೇನೆ. ಹಲವು ವಿಚಾರಗಳ ಬಗ್ಗೆ ಜೋಶಿಯವರ ಜತೆ ಚರ್ಚಿಸಬೇಕಿದೆ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ದೆಹಲಿಗೆ ಹಾರಿದ ಸಿಎಂ ಬಸವರಾಜ ಬೊಮ್ಮಾಯಿ; ವರಿಷ್ಠರ ಭೇಟಿ, ಧನ್ಯವಾದ ಸಲ್ಲಿಕೆ ನೆಪದಲ್ಲಿ ಸಂಪುಟ ಫೈನಲ್?

ಕೊರೊನಾ ಆತಂಕ: ಕೇರಳ-ಕರ್ನಾಟಕ ಗಡಿಯಲ್ಲಿ ಕಠಿಣ ಕ್ರಮ ಜಾರಿ; ಇಂದು ಸಂಜೆ ಜಿಲ್ಲಾಡಳಿತಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

(Basavaraj Bommai said he would meet Finance Minister Nirmala Sitharaman and discuss GST)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada