ಉಪವಾಸ ಬೇಕಾದ್ರೂ ಮಾಡಲಿ, ಇಲ್ಲ ಊಟ ಮಾಡಲಿ; ನಾವಂತೂ ಮೇಕೆದಾಟು ಮಾಡೇ ಮಾಡ್ತೀವಿ: ಅಣ್ಣಾಮಲೈಗೆ ಸಿಎಂ ಬೊಮ್ಮಾಯಿ ಟಾಂಗ್

Basavaraj Bommai: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ವಿರೋಧಿಸಿ ಆಗಸ್ಟ್ 5ಕ್ಕೆ ತಮಿಳುನಾಡಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ತಮ್ಮ ನಿಲುವನ್ನು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಉಪವಾಸ ಬೇಕಾದ್ರೂ ಮಾಡಲಿ, ಇಲ್ಲ ಊಟ ಮಾಡಲಿ; ನಾವಂತೂ ಮೇಕೆದಾಟು ಮಾಡೇ ಮಾಡ್ತೀವಿ: ಅಣ್ಣಾಮಲೈಗೆ ಸಿಎಂ ಬೊಮ್ಮಾಯಿ ಟಾಂಗ್
ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್; ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ: ಸಿಎಂ ಬೊಮ್ಮಾಯಿ
TV9kannada Web Team

| Edited By: ganapathi bhat

Jul 31, 2021 | 2:57 PM

ದೆಹಲಿ: ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ ಅಣ್ಣಾಮಲೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುವ ಬಗ್ಗೆ ತಿಳಿದುಬಂದಿದೆ. ಮೇಕೆದಾಟು ಯೋಜನೆ ವಿರೋಧಿ ಧರಣಿ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಜುಲೈ 31) ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಉಪವಾಸ ಬೇಕಾದ್ರೂ ಮಾಡಲಿ, ಊಟ ಬೇಕಾದ್ರು ಮಾಡಲಿ. ಮೇಕೆದಾಟು ಡ್ಯಾಂ ನಿರ್ಮಾಣ ಮಾಡಲು ನಮಗೆ ಹಕ್ಕಿದೆ. ನಾವು ಮೇಕೆದಾಟು ಅಣೆಕಟ್ಟು ನಿರ್ಮಿಸಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ವಿರೋಧಿಸಿ ಆಗಸ್ಟ್ 5ಕ್ಕೆ ತಮಿಳುನಾಡಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ತಮ್ಮ ನಿಲುವನ್ನು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಮೇಕೆದಾಟು ಯೋಜನೆ ಮಾಡೇ ಮಾಡುತ್ತೇವೆ ಎಂಬ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿ ಪ್ರವಾಸದ ವೇಳೆ ಯಡಿಯೂರಪ್ಪಗೆ ಸಿಎಂ ಕರೆ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿ.ಎಸ್. ಯಡಿಯೂರಪ್ಪಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ಮೋದಿ ಭೇಟಿ ಬಳಿಕ ಯಡಿಯೂರಪ್ಪಗೆ ಬೊಮ್ಮಾಯಿ ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬೊಮ್ಮಾಯಿ ಭೇಟಿ ವೇಳೆ ಪ್ರಧಾನಿ ಮೋದಿ, ಯಡಿಯೂರಪ್ಪರನ್ನು ಶ್ಲಾಘಿಸಿದ್ದರು. ಬಿ.ಎಸ್. ಯಡಿಯೂರಪ್ಪ ಜನ ಬೆಂಬಲವನ್ನು ಮುಂದುವರಿಸಿಕೊಂಡು ಹೋಗಿ ಎಂದು ಮೋದಿ ಸಲಹೆ ನೀಡಿದ್ದರು ಎಂದು ತಿಳಿದುಬಂದಿದೆ. ಬೊಮ್ಮಾಯಿ ಭೇಟಿ ವೇಳೆ ಮೋದಿ ಶ್ಲಾಘನೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದೂ ತಿಳಿದುಬಂದಿದೆ.

ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪ ರಾಜ್ಯದಲ್ಲಿ ಆಗಬೇಕಿರುವ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ ಎಂದು ದೆಹಲಿ ಭೇಟಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ (ಜುಲೈ 30) ಮಾತನಾಡಿದ್ಧರು. ಈ ವೇಳೆ ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿರುವುದನ್ನು ತಿಳಿಸಿದ್ದರು. ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ, ಕೃಷ್ಣಾ ಮೇಲ್ದಂಡೆ ಯೋಜನೆ 2ನೇ ಹಂತದ ಯೋಜನೆಗೆ ಒತ್ತಾಯಿಸಿ ಸಚಿವರಿಗೆ ಮನವಿ ಮಾಡಲಾಗಿದೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್​ ಶೇಖಾವತ್​ಗೆ ಮನವಿ ಮಾಡಿದ್ದೇನೆ. ಎತ್ತಿನಹೊಳೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಆಗ್ರಹಿಸಿ ಮನವಿ ಮಾಡಲಾಗಿದೆ. ಕಳಸಾ-ಬಂಡೂರಿ ಯೋಜನೆ ಜಾರಿಗೆ ಒತ್ತಾಯ ಮಾಡಿದ್ದೇನೆ. ಬೆಂಗಳೂರಿನಲ್ಲಿ ಕೇಂದ್ರದ ಯೋಜನೆಗಳ ಜಾರಿಗೆ ಸಮಿತಿ, ಸ್ಮಾಲ್​ ವರ್ಕಿಂಗ್​ ಗ್ರೂಪ್ ಮಾಡಲು ತೀರ್ಮಾನಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಇದನ್ನೂ ಓದಿ: ಜಿಎಸ್​ಟಿ ಬಾಕಿ ಹಣ 11,400 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ; ಕೊರೊನಾ ಲಸಿಕೆ ಪೂರೈಕೆ ಹೆಚ್ಚಿಸುವ ಭರವಸೆ: ಸಿಎಂ ಬೊಮ್ಮಾಯಿ

ಕೊರೊನಾ ಆತಂಕ: ಕೇರಳ-ಕರ್ನಾಟಕ ಗಡಿಯಲ್ಲಿ ಕಠಿಣ ಕ್ರಮ ಜಾರಿ; ಇಂದು ಸಂಜೆ ಜಿಲ್ಲಾಡಳಿತಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

(Basavaraj Bommai shares his opinion on Mekedatu Project slams Tamil Nadu BJP Annamalai)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada