AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಮುಖ್ಯ ಅತಿಥಿ, ದ್ವಿಪಕ್ಷೀಯ ಸಂಬಂಧಕ್ಕೆ 25 ವರ್ಷ

Bastille Day: ಫ್ರಾನ್ಸ್‌ನ ರಾಷ್ಟ್ರೀಯ ದಿನವಾದ ಬಾಸ್ಟಿಲ್ ಡೇಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದೆ. ಭಾರತ-ಫ್ರಾನ್ಸ್ ದ್ವಿಪಕ್ಷೀಯ ಕಾರ್ಯತಂತ್ರದ ಸಂಬಂಧಗಳು 25 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆ ಈ ಭೇಟಿ ಮಹತ್ವ ಪಡೆದಿದೆ.

Narendra Modi: ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಮುಖ್ಯ ಅತಿಥಿ, ದ್ವಿಪಕ್ಷೀಯ ಸಂಬಂಧಕ್ಕೆ 25 ವರ್ಷ
ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್
Rakesh Nayak Manchi
|

Updated on: Jul 10, 2023 | 10:44 PM

Share

ಫ್ರಾನ್ಸ್‌ನ ರಾಷ್ಟ್ರೀಯ ದಿನವಾದ ಬಾಸ್ಟಿಲ್ ಡೇ (Bastille Day) ಆಚರಣೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಭಾರತ-ಫ್ರಾನ್ಸ್ ದ್ವಿಪಕ್ಷೀಯ ಕಾರ್ಯತಂತ್ರದ ಸಂಬಂಧಗಳು ಈ ವರ್ಷಕ್ಕೆ 25 ವರ್ಷ ಪೂರೈಸುತ್ತಿರುವುದರಿಂದ ಬಾಸ್ಟಿಲ್ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿಯು ಮಹತ್ವದ್ದಾಗಿದೆ.

ಸೈಂಟ್ ಗೋಬೈನ್ ಎಂಬ ಸಂಸ್ಥೆಯು ಫ್ರಾನ್ಸ್​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೆನೈಟ್ ಬಾಜಿನ್ ಅವರು ಮೋದಿ ಅವರನ್ನು ಸ್ವಾಗತಿಸಿದ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡು, ಅಭಿವೃದ್ಧಿಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ ಮತ್ತು ದ್ವಿಪಕ್ಷೀಯ ಸಂಬಂಧವು 25 ವರ್ಷಗಳನ್ನು ಪೂರೈಸುತ್ತಿದೆ” ಎಂದು ಬರೆದುಕೊಂಡಿದೆ.

ಫ್ರಾನ್ಸ್​​ಗೆ ಮುಖ್ಯ ಅತಿಥಿಯಾಗಿ ಭೇಟಿ ನೀಡುತ್ತಿರುವ ಮೋದಿ ಅವರನ್ನು ಸ್ವಾಗತಿಸಿದ ಫ್ರಾನ್ಸ್​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೆನೈಟ್ ಬಾಜಿನ್, “ಫ್ರಾನ್ಸ್‌ನ ರಾಷ್ಟ್ರೀಯ ದಿನದಂದು ಬಾಸ್ಟಿಲ್ ಡೇ ಆಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ” ಎಂದು ಹೇಳಿದ್ದಾರೆ.

ಇದನ್ನು ಓದಿ: ಹಿಮಾಚಲ ಪ್ರದೇಶದ ಸಿಎಂಗೆ ದೂರವಾಣಿ ಕರೆ ಮಾಡಿ ಪ್ರವಾಹ ಪೀಡಿತ ರಾಜ್ಯದ ಸ್ಥಿತಿಗತಿ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಅದರಂತೆ ಜುಲೈ 13 ಮತ್ತು 14 ರಂದು ಎರಡು ದಿನಗಳ ಮೋದಿ ಫ್ರಾನ್ಸ್ ಪ್ರವಾಸದಲ್ಲಿರಲಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ-ಫ್ರಾನ್ಸ್ ದ್ವಿಪಕ್ಷೀಯ ಕಾರ್ಯತಂತ್ರದ ಸಂಬಂಧಗಳ 25 ವರ್ಷಗಳ ಸಂಭ್ರಮಾಚರಣೆಗಾಗಿ ಫ್ರಾನ್ಸ್‌ಗೆ ಭೇಟಿ ನೀಡಲಿದ್ದಾರೆ.

ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪ್ಯಾರಿಸ್​ನ ಪ್ರಸಿದ್ಧ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆಮ ಅನಿವಾಸಿ ಭಾರತೀಯರಿಗಾಗಿ ಆಯೋಜಿಸಲಾಗುವ ಕಾರ್ಯಕ್ರಮವದಲ್ಲಿ ಮೋದಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ