ಫ್ರಾನ್ಸ್‌ನ ರಾಷ್ಟ್ರೀಯ ದಿನವಾದ ಬಾಸ್ಟಿಲ್ ಡೇ (Bastille Day) ಆಚರಣೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಭಾರತ-ಫ್ರಾನ್ಸ್ ದ್ವಿಪಕ್ಷೀಯ ಕಾರ್ಯತಂತ್ರದ ಸಂಬಂಧಗಳು ಈ ವರ್ಷಕ್ಕೆ 25 ವರ್ಷ ಪೂರೈಸುತ್ತಿರುವುದರಿಂದ ಬಾಸ್ಟಿಲ್ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿಯು ಮಹತ್ವದ್ದಾಗಿದೆ.
ಸೈಂಟ್ ಗೋಬೈನ್ ಎಂಬ ಸಂಸ್ಥೆಯು ಫ್ರಾನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೆನೈಟ್ ಬಾಜಿನ್ ಅವರು ಮೋದಿ ಅವರನ್ನು ಸ್ವಾಗತಿಸಿದ ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡು, ಅಭಿವೃದ್ಧಿಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ ಮತ್ತು ದ್ವಿಪಕ್ಷೀಯ ಸಂಬಂಧವು 25 ವರ್ಷಗಳನ್ನು ಪೂರೈಸುತ್ತಿದೆ” ಎಂದು ಬರೆದುಕೊಂಡಿದೆ.
ಫ್ರಾನ್ಸ್‌ಗೆ ಮುಖ್ಯ ಅತಿಥಿಯಾಗಿ ಭೇಟಿ ನೀಡುತ್ತಿರುವ ಮೋದಿ ಅವರನ್ನು ಸ್ವಾಗತಿಸಿದ ಫ್ರಾನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೆನೈಟ್ ಬಾಜಿನ್, “ಫ್ರಾನ್ಸ್‌ನ ರಾಷ್ಟ್ರೀಯ ದಿನದಂದು ಬಾಸ್ಟಿಲ್ ಡೇ ಆಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ” ಎಂದು ಹೇಳಿದ್ದಾರೆ.
[#Event]
?On the occasion of France’s National day, it’s a pleasure to welcome @PMOindia @Narendramodi, as guest of honor for #BastilleDay celebrations.
??For 25 years now, India has been a country of significant importance for #SaintGobain’s growth strategy.
?@IndiaembFrance pic.twitter.com/cIxxX6VE6o— Saint-Gobain (@saintgobain) July 10, 2023
ಇದನ್ನು ಓದಿ: ಹಿಮಾಚಲ ಪ್ರದೇಶದ ಸಿಎಂಗೆ ದೂರವಾಣಿ ಕರೆ ಮಾಡಿ ಪ್ರವಾಹ ಪೀಡಿತ ರಾಜ್ಯದ ಸ್ಥಿತಿಗತಿ ವಿಚಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಅದರಂತೆ ಜುಲೈ 13 ಮತ್ತು 14 ರಂದು ಎರಡು ದಿನಗಳ ಮೋದಿ ಫ್ರಾನ್ಸ್ ಪ್ರವಾಸದಲ್ಲಿರಲಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ-ಫ್ರಾನ್ಸ್ ದ್ವಿಪಕ್ಷೀಯ ಕಾರ್ಯತಂತ್ರದ ಸಂಬಂಧಗಳ 25 ವರ್ಷಗಳ ಸಂಭ್ರಮಾಚರಣೆಗಾಗಿ ಫ್ರಾನ್ಸ್‌ಗೆ ಭೇಟಿ ನೀಡಲಿದ್ದಾರೆ.
ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪ್ಯಾರಿಸ್ನ ಪ್ರಸಿದ್ಧ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆಮ ಅನಿವಾಸಿ ಭಾರತೀಯರಿಗಾಗಿ ಆಯೋಜಿಸಲಾಗುವ ಕಾರ್ಯಕ್ರಮವದಲ್ಲಿ ಮೋದಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ