AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಟ್ಲಾ ಹೌಸ್ ಎನ್​ಕೌಂಟರ್; ಅಪರಾಧಿ ಅರಿಜ್ ಖಾನ್​ಗೆ ಮರಣ ದಂಡನೆ

Batla House Encounter: ಪೊಲೀಸರ ಪರ ವಕೀಲರ ‘ಆರೋಪಿಗೆ ಮರಣದಂಡಣೆ ವಿಧಿಸಬೇಕು’ ಎಂಬ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಅರಿಜ್ ಖಾನ್​ಗೆ ಮರಣದಂಡನೆ ನೀಡುವಂತೆ ಆದೇಶ ನೀಡಿದೆ.

ಬಾಟ್ಲಾ ಹೌಸ್ ಎನ್​ಕೌಂಟರ್; ಅಪರಾಧಿ ಅರಿಜ್ ಖಾನ್​ಗೆ ಮರಣ ದಂಡನೆ
ಬಾಟ್ಲಾ ಹೌಸ್ ಎನ್​ಕೌಂಟರ್​ ಪ್ರಕರಣದ ಅಪರಾಧಿ ಅರಿಜ್ ಖಾನ್ (ಪಿಟಿಐ ಚಿತ್ರ)
guruganesh bhat
| Edited By: |

Updated on:Mar 15, 2021 | 7:19 PM

Share

ದೆಹಲಿ: ಬಾಟ್ಲಾ ಹೌಸ್ ಎನ್​ಕೌಂಟರ್​ ಪ್ರಕರಣವನ್ನು ವಿಶೇಷ ಪ್ರಕರಣಗಳಲ್ಲಿ ವಿಶೇಷವೆಂದು ಉಲ್ಲೇಖಿಸಿರುವ ದೆಹಲಿ ಕೋರ್ಟ್ ಅಪರಾಧಿ ಅರಿಜ್​ ಖಾನ್​ಗೆ ಗಲ್ಲುಶಿಕ್ಷೆ ವಿಧಿಸಿದೆ. 2008ರ ಬಾಟ್ಲಾ ಹೌಸ್​​ ಎನ್​ಕೌಂಟರ್​ ಪ್ರಕರಣದಲ್ಲಿ ಅರಿಝ್ ಖಾನ್ ಅಪರಾಧಿಯಾಗಿ ಸಾಬೀತಾಗಿದ್ದು, ಪೊಲೀಸ್ ಇನ್ಸ್​ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆಗೈದ ಆರೋಪ ಅರಿಜ್ ಖಾನ್ ಮೇಲಿತ್ತು. ಪೊಲೀಸರ ಪರ ವಕೀಲರ ‘ಆರೋಪಿಗೆ ಮರಣದಂಡಣೆ ವಿಧಿಸಬೇಕು’ ಎಂಬ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಅರಿಜ್ ಖಾನ್​ಗೆ ಮರಣದಂಡನೆ ವಿಧಿಸಿ ಆದೇಶ ನೀಡಿದೆ. ಈ ಹಿಂದೆಯೇ ಅರಿಜ್ ಖಾನ್ ತಪ್ಪಿತಸ್ಥ ಎಂದು ದೆಹಲಿ ನ್ಯಾಯಾಲಯ ತೀರ್ಪು ನೀಡಿದ್ದರೂ ಶಿಕ್ಷೆಯ ಪ್ರಮಾಣವನ್ನು ಇಂದು ಸಂಜೆ ಘೋಷಿಸುವುದಾಗಿ ತಿಳಿಸಿತ್ತು.

ಉಗ್ರ ಸಂಘಟನೆ ಇಂಡಿಯನ್ ಮುಜಾಹಿದ್ದೀನ್​ ಸದಸ್ಯನಾಗಿದ್ದ ಅರಿಜ್ ಖಾನ್​ 2008ರಲ್ಲಿ ದೆಹಲಿಯಲ್ಲಿ ನಡೆದಿದ್ದ ಬಾಟ್ಲಾ ಹೌಸ್ ಎನ್​ಕೌಂಟರ್​ನಲ್ಲಿ ಪೊಲೀಸ್ ಇನ್ಸ್​ಪೆಕ್ಟರ್​ ಮೋಹನ್ ಚಂದ್ರ ಶರ್ಮಾ ಅವರ ಮೇಲೆ ನಡೆದ ಹಲ್ಲೆ ಮತ್ತು ಕೊಲೆಯಲ್ಲಿ ಅರಿಜ್ ಖಾನ್ ಭಾಗಿಯಾಗಿರುವುದು ಸಾಬೀತಾಗಿತ್ತು. ಈ ಎನ್​ಕೌಂಟರ್​ಗೂ ಮುನ್ನ ದೆಹಲಿಯಲ್ಲಿ ಸರಣಿ ಬಾಂಬ್ ಸ್ಫೋಟ ಘಟನೆಗಳು ಜರುಗಿದ್ದವು. ಮರಣ ದಂಡನೆಯ ಜತೆ ಅರಿಜ್ ಖಾನ್​ಗೆ 11 ಲಕ್ಷ ದಂಡವನ್ನು ಸಹ ನ್ಯಾಯಾಧೀಶರು ವಿಧಿಸಿದ್ದಾರೆ. ಈ ಪ್ರಕರಣದಲ್ಲಿ ಅರಿಜ್ ಖಾನ್ ತಪ್ಪಿತಸ್ಥ ಎಂದು ನ್ಯಾಯಪೀಠಕ್ಕೆ ಮನವರಿಕೆಯಾಗಿದೆ ಎಂದು ಹೆಚ್ಚುವರಿ ಸೆಷನ್ ನ್ಯಾಯಾಧೀಶ ಸಂದೀಪ್ ಯಾದವ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಈ ಪ್ರಕರಣವನ್ನು ವಿಶೇಷ ಪ್ರಕರಣಗಳಲ್ಲಿ ವಿಶೇಷವಾದದ್ದು ಎಂದು ಪರಿಗಣಿಸಿರುವ ಕೋರ್ಟ್, ಸೆಕ್ಷನ್ 302ರ ಅಡಿ ಶಿಕ್ಷೆ ವಿಧಿಸುವುದಾಗಿ ತಿಳಿಸಿತ್ತು. ಸೆಕ್ಷನ್ 302ರಡಿ ಮರಣ ದಂಡನೆ ಮತ್ತು ಜೀವಾವಧಿ ಶಿಕ್ಷೆ ವಿಧಿಸುವ ಅವಕಾಶಗಳಿತ್ತು. ಇವೆರಡರ ಪೈಕಿ ನ್ಯಾಯಾಲಯ ಅಪರಾಧಿ ಎಂದು ಸಾಬೀತಾದ ಅರಿಜ್ ಖಾನ್​ಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ. 2013ರಲ್ಲಿ ಬಾಟ್ಲಾ ಹೌಸ್ ಎನ್​ಕೌಂಟರ್​ ಪ್ರಕರಣದಲ್ಲಿ ಅರಿಜ್ ಖಾನ್​ ಜತೆ ಶಹ್ಜಾದ್ ಎಂಬ ವ್ಯಕ್ತಿ ಪಾಲ್ಗೊಂಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಪ್ರಕಾಶ್ ಜಾವಡೇಕರ್ ಪ್ರತಿಕ್ರಿಯೆ ಬಾಟ್ಲಾ ಹೌಸ್ ಎನ್​ಕೌಂಟರ್ ಪ್ರಕರಣದಲ್ಲಿ ಅರಿಜ್ ಖಾನ್​ಗೆ ಮರಣ ದಂಡನೆ ಶಿಕ್ಷೆ ಘೋಷಣೆಯಾಗುತ್ತಿದ್ದಂತೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಈ ತೀರ್ಪು ಭಯೋತ್ಪಾದಕರ ಬೆಂಬಲಿಗರ ಮನೋಭಾವವನ್ನು ಬಹಿರಂಗಪಡಿಸುತ್ತದೆ. ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಆಮ್​ಆದ್ಮಿಯ ಅರವಿಂದ್ ಕೇಜ್ರಿವಾಲ್ ದೆಹಲಿಯ ಹುತಾತ್ಮ ಮತ್ತು ವೀರ ಪೊಲೀಸರ ಶೌರ್ಯವನ್ನು ಅನುಮಾನಿಸಿದ್ದರು. ಇದೀಗ ಅವರು ದೇಶದ ಜನರೆದುರು ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಸಚಿವ ಅರವಿಂದ್ ಕೇಜ್ರಿವಾಲ್ ವಿಪಕ್ಷ ನಾಯಕರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಲಯದ ಸಿಬ್ಬಂದಿ ವರ್ಗಕ್ಕೆ ಆದ್ಯತೆ ಮೇರೆಗೆ ಕೊರೊನಾ ಲಸಿಕೆ ನೀಡಬೇಕೆಂದು ಸುಪ್ರೀಂಗೆ ಅರ್ಜಿ: ಕೇಂದ್ರ ಸರ್ಕಾರ ವಿರೋಧ

ಇದನ್ನೂ ಓದಿ: ಅಭ್ಯರ್ಥಿಗಳಿಗಿಂತ ನೋಟಾಕ್ಕೆ ಹೆಚ್ಚು ಮತ ಬಿದ್ದರೆ ಚುನಾವಣೆ ರದ್ದು; ಕೇಂದ್ರ ಸರ್ಕಾರಕ್ಕೆ ಉತ್ತರಿಸಲು ತಿಳಿಸಿದ ಸುಪ್ರೀಂ

Published On - 7:17 pm, Mon, 15 March 21

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ