BBC documentary: ಬಿಬಿಸಿ ಸಾಕ್ಷ್ಯಚಿತ್ರ ಪ್ರಕರಣ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ವಿರುದ್ಧದ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ನೀಡಿದೆ.

BBC documentary: ಬಿಬಿಸಿ ಸಾಕ್ಷ್ಯಚಿತ್ರ ಪ್ರಕರಣ: ಕೇಂದ್ರಕ್ಕೆ ಸುಪ್ರೀಂ ನೋಟಿಸ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 03, 2023 | 1:04 PM

ದೆಹಲಿ: ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ವಿರುದ್ಧದ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ನೀಡಿದೆ. 2002 ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ‘India: The Modi Question’ ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಯೂಟ್ಯೂಬ್​ನಲ್ಲಿ ತೆಗೆದುಹಾಕುವ ನಿರ್ಧಾರದ ಮೂಲ ದಾಖಲೆಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲು ಕೇಂದ್ರಕ್ಕೆ ಮೂರು ವಾರಗಳ ಕಾಲಾವಕಾಶವನ್ನು ನೀಡಿತು ಮತ್ತು ಏಪ್ರಿಲ್‌ನಲ್ಲಿ ವಿಚಾರಣೆಗೆ ಇರಿಸಿತು. ಸಂಸದ ಮಹುವಾ ಮೊಯಿತ್ರಾ, ಪತ್ರಕರ್ತ ಎನ್ ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ಜಂಟಿಯಾಗಿ ಸಲ್ಲಿಸಿದ ಎರಡು ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತದೆ.

ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ್ದಕ್ಕಾಗಿ ವಿದ್ಯಾರ್ಥಿಗಳು ಶಿಕ್ಷೆಗೆ ಗುರಿಯಾಗುವ ವಿಚಾರದ ಬಗ್ಗೆ ಇಲ್ಲಿ ಪ್ರಸ್ತಾಪಿಸಿದಂತೆ ಹೇಳಿ, ಇದನ್ನು ನಿರಾಕರಿಸಿದ ನ್ಯಾಯಾಲಯ, ಅದರ ಮುಂದಿನ ಪ್ರಕ್ರಿಯೆಗಳು ಕಾನೂನು ವಾದಗಳಿಗೆ ಸೀಮಿತವಾಗಿರುತ್ತದೆ ಎಂದು ಹೇಳಿದೆ.

ನಾವು ನೋಟಿಸ್‌ಗಳನ್ನು ನೀಡುತ್ತಿದ್ದೇವೆ. ಮೂರು ವಾರಗಳಲ್ಲಿ ಪ್ರತಿವಾದ ಅಫಿಡವಿಟ್ ಸಲ್ಲಿಸಬೇಕು. ಅದರ ನಂತರ ಎರಡು ವಾರಗಳಲ್ಲಿ ಮರುಪರಿಶೀಲನೆ ಮಾಡಲಾಗುವುದು ಎಂದು ಪೀಠ ಹೇಳಿದೆ. ಈ ವಿಷಯವನ್ನು ಏಪ್ರಿಲ್‌ನಲ್ಲಿ ಮುಂದಿನ ವಿಚಾರಣೆಗೆ ಪಟ್ಟಿ ಮಾಡಲಾಗಿದೆ.

Published On - 12:53 pm, Fri, 3 February 23

ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ