ಚುನಾವಣಾ ಹೊಸ್ತಿಲಿನಲ್ಲಿ ಕಾಂಗ್ರೆಸ್ಗೆ ಆಘಾತ ಎದುರಾಗಿದೆ, ಕಾಂಗ್ರೆಸ್‌ನ ಹಿರಿಯ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಪಕ್ಷ ತೊರೆದಿದ್ದಾರೆ. ಬಿಬಿಸಿ ಸಾಕ್ಷ್ಯಚಿತ್ರದ ರಾಜಕೀಯ ಗೊಂದಲದ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಕೆ ಆಂಟನಿ ಕಾಂಗ್ರೆಸ್ ಪಕ್ಷ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಅನಿಲ್ ಆಂಟನಿ ಕಾಂಗ್ರೆಸ್‌ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ. ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಟ್ವೀಟ್ ಡಿಲೀಟ್ ಮಾಡಲು ತುಂಬಾ ಒತ್ತಡವಿತ್ತು, ಆದರೆ ಅದನ್ನು ನಾನು ನಿರಾಕರಿಸಿದೆ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು 2002 ರ ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಮಾಡಿದ ಸಾಕ್ಷ್ಯಚಿತ್ರದಲ್ಲಿ ಆಂಟನಿ ಸರ್ಕಾರವನ್ನು ಬೆಂಬಲಿಸಿದ್ದರು. ಇದಾದ ಬಳಿಕ ಕಾಂಗ್ರೆಸ್‌ನಲ್ಲಿ ಅವರಿಗೆ ವಿರೋಧ ವ್ಯಕ್ತವಾಗಿದ್ದು, ಟ್ವೀಟ್ ಹಿಂಪಡೆಯುವಂತೆ ಒತ್ತಡ ಹೇರಲಾಗಿತ್ತು.
ಮತ್ತಷ್ಟು ಓದಿ: BBC Documentary: ಇಂಡಿಯಾ: ದಿ ಮೋದಿ ಕ್ವಶ್ಚನ್ ಎಂಬ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲಾಗುವುದು: ರಾಜಕೀಯ ಗುಂಪುಗಳಿಂದ ಬೆದರಿಕೆ
ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಇಂತಹವರು ಟ್ವೀಟ್ ಡಿಲೀಟ್ ಮಾಡುವಂತೆ ಒತ್ತಡ ಹೇರುತ್ತಿದ್ದರು. ಹೀಗಾಗಿ ನಾನು ಕಾಂಗ್ರೆಸ್‌ನ ನನ್ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಬ್ರಿಟಿಷ್ ಬ್ರಾಡ್‌ಕಾಸ್ಟರ್ ಬಿಬಿಸಿಯು ಭಾರತೀಯ ಸಂಸ್ಥೆಗಳಿಗೆ ಆದ್ಯತೆ ನೀಡುವುದರಿಂದ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯುಂಟಾಗುತ್ತದೆ ಎಂದು ಅನಿಲ್ ಆಂಟನಿ ಮಂಗಳವಾರ ಹೇಳಿದ್ದರು.
ಕೇರಳ ಕಾಂಗ್ರೆಸ್‌ನ ವಿವಿಧ ಘಟಕಗಳು ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಘೋಷಿಸಿದ ಸಮಯದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದರೆಂಬುವುದು ಉಲ್ಲೇಖನೀಯ. ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟೋನಿ 2002ರ ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿರೋಧಿಸಿದ್ದರು.
ಕಾಂಗ್ರೆಸ್ ಪಕ್ಷದ ಕೇರಳ ಘಟಕದ ಡಿಜಿಟಲ್ ಸಂವಹನವನ್ನು ಅನಿಲ್ ಆಂಟನಿ ನಿರ್ವಹಿಸುತ್ತಿದ್ದರು. ಇನ್ನು ಬಿಬಿಸಿ ವಿವಾದದ ಬಗ್ಗೆ ಟ್ವೀಟ್ ಮಾಡಿದ್ದರು. ಗಮನಾರ್ಹವಾಗಿ, ಗುಜರಾತ್ ಗಲಭೆಯನ್ನು ಆಧರಿಸಿದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದ ಲಿಂಕ್‌ಗಳು ಅಥವಾ ಪೋಸ್ಟ್‌ಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರ ಕಳೆದ ವಾರ ಸಾಮಾಜಿಕ ಮಾಧ್ಯಮಗಳಿಗೆ ನಿರ್ದೇಶನ ನೀಡಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ