AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBC Documentary Row: ಬಿಬಿಸಿ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಬಿಸಿಯನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಮನವಿಯನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

BBC Documentary Row: ಬಿಬಿಸಿ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 10, 2023 | 1:33 PM

Share

ದೆಹಲಿ: ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಬಿಸಿಯನ್ನು (BBC) ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಮನವಿಯನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಜನವರಿ 21 ರಂದು, ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಅಡಿಯಲ್ಲಿ ತುರ್ತು ನಿಬಂಧನೆಗಳನ್ನು ಬಳಸಿಕೊಂಡು ಕೇಂದ್ರವು ವಿವಾದಾತ್ಮಕ ಸಾಕ್ಷ್ಯಚಿತ್ರ “India: The Modi Question”ಗೆ ಲಿಂಕ್‌ಗಳನ್ನು ಹಂಚಿಕೊಳ್ಳುವ ಬಹು ಯೂಟ್ಯೂಬ್ ವೀಡಿಯೊಗಳು ಮತ್ತು ಟ್ವಿಟರ್ ಪೋಸ್ಟ್‌ಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡಿತ್ತು.

ಹಿಂದೂ ಸೇನಾ ಸಮಿತಿಯ ವಿಷ್ಣು ಗುಪ್ತಾ ಸಲ್ಲಿಸಿದ್ದ ಅರ್ಜಿಯಲ್ಲಿ ಸಾಕ್ಷ್ಯಚಿತ್ರವು ನರೇಂದ್ರ ಮೋದಿ ವಿರೋಧಿ ಪ್ರಚಾರದಲ್ಲಿ ತೊಡಗಿದ್ದು, ಮಾತ್ರವಲ್ಲದೆ ಪ್ರಧಾನಿ ವ್ಯಕ್ತಿತ್ವಕ್ಕೆ ಧಕ್ಕೆಯನ್ನು ಉಂಟು ಮಾಡುತ್ತದೆ. ಬಿಬಿಸಿಯ ಹಿಂದೂ ಧರ್ಮದ ವಿರೋಧಿ ಪ್ರಚಾರವನ್ನು ಪ್ರತಿಬಿಂಬಿಸುತ್ತಿದೆ. ಭಾರತದಲ್ಲಿ ಬಿಬಿಸಿ ಪ್ರಸಾರ ತಡೆಹಿಡಿಯುವಂತೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದೀಗ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸೆನ್ಸಾರ್ಶಿಪ್ ವಿಧಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: BBC documentary row: ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರ ಕೇರಳದಲ್ಲಿ ಪ್ರದರ್ಶಿಸಿದ ಕಾಂಗ್ರೆಸ್

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿಂಕಿ ಆನಂದ್, ಬಿಬಿಸಿ ಉದ್ದೇಶಪೂರ್ವಕವಾಗಿ ಭಾರತದ ಪ್ರತಿಷ್ಠೆಗೆ ಧಕ್ಕೆ ತರುತ್ತಿದೆ ಎಂದು ವಾದಿಸಿದ್ದು, ಸಾಕ್ಷ್ಯಚಿತ್ರದ ಹಿಂದಿರುವ ಪಿತೂರಿ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುವಂತೆಯೂ ಕೋರಿದ್ದರು. ಈ ಮನವಿಯು ತಪ್ಪಾಗಿ ಗ್ರಹಿಸಲ್ಪಟ್ಟಿದೆ, ಸುಪ್ರೀಂ ಕೋರ್ಟ್ ಅಂತಹ ಆದೇಶಗಳನ್ನು ಹೇಗೆ ಜಾರಿಗೊಳಿಸುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.


Published On - 1:25 pm, Fri, 10 February 23