ದಾದಾ ಸೌರವ್ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು
ಸೌರವ್ ಗಂಗೂಲಿಗೆ ಇತ್ತೀಚೆಗೆ ಜಿಮ್ ಮಾಡುವಾಗ ಚಿಕ್ಕ ಪ್ರಮಾಣದಲ್ಲಿ ಹೃದಯಾಘಾತ ಸಂಭವಿಸಿತ್ತು. ನಂತರ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು.
ಕೋಲ್ಕತ್ತಾ: ಇತ್ತೀಚೆಗಷ್ಟೇ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮರಳಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬುಧವಾರ ಮಧ್ಯಾಹ್ನ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.
ಸೌರವ್ ಗಂಗೂಲಿಗೆ ಇತ್ತೀಚೆಗೆ ಜಿಮ್ ಮಾಡುವಾಗ ಚಿಕ್ಕ ಪ್ರಮಾಣದಲ್ಲಿ ಹೃದಯಾಘಾತ ಸಂಭವಿಸಿತ್ತು. ನಂತರ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ದಾದಾಗೆ ಹೃದಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಸಮಸ್ಯೆಗೆ ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರ ಅಭಿಮಾನಿಗಳಲ್ಲಿ ಬಹಳಷ್ಟು ಆತಂಕ ಮೂಡಿಸಿದೆ.
ಸೌರವ್ ಗಂಗೂಲಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಟ್ವಿಟ್ಟರ್ನಲ್ಲಿ ಬೇಗ ಗುಣಮುಖರಾಗುವಂತೆ ಪ್ರಾರ್ಥನೆ ಮಾಡಿದ್ದಾರೆ. ಸದ್ಯ, ಗಂಗೂಲಿ ಅವರ ಆರೋಗ್ಯ ಪರಿಸ್ಥಿತಿ ಹೇಗಿದೆ ಎನ್ನುವ ವಿಚಾರದ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
BCCI Chief Sourav Ganguly being taken to Apollo Hospital in Kolkata after he complained of chest pain. More details awaited.
(File photo) pic.twitter.com/e72Iai7eVz
— ANI (@ANI) January 27, 2021
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು
Published On - 2:50 pm, Wed, 27 January 21