AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲರ ಕೋಟ್ ಧರಿಸಿ ಹೈಕೋರ್ಟ್​ಗೆ ಬಂದ ಮಮತಾ ಬ್ಯಾನರ್ಜಿಗೆ ಶಾಕ್ ನೀಡಿದ ಬಾರ್ ಕೌನ್ಸಿಲ್

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಹಿಂದೆ ಎಸ್​ಐಆರ್​ ಕುರಿತು ಸುಪ್ರೀಂ ಕೋರ್ಟ್​ನಲ್ಲಿ ತಾವೇ ವಾದ ಮಂಡಿಸಿದ್ದರು. ಇಂದು ಕೊಲ್ಕತ್ತಾ ಹೈಕೋರ್ಟ್​ಗೆ ವಕೀಲರ ಗೌನ್ ಧರಿಸಿ ಬಂದಿದ್ದ ಮಮತಾ ಬ್ಯಾನರ್ಜಿ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ತಾವೇ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮಮತಾ ಬ್ಯಾನರ್ಜಿ ಅವರ ವಕೀಲ ವೃತ್ತಿಯ ಪ್ರಾಕ್ಟಿಸ್ ದಾಖಲೆಗಳನ್ನು ಸಲ್ಲಿಸುವಂತೆ ಪಶ್ಚಿಮ ಬಂಗಾಳದ ಬಾರ್ ಕೌನ್ಸಿಲ್​ಗೆ ಸೂಚನೆ ನೀಡಿದೆ.

ವಕೀಲರ ಕೋಟ್ ಧರಿಸಿ ಹೈಕೋರ್ಟ್​ಗೆ ಬಂದ ಮಮತಾ ಬ್ಯಾನರ್ಜಿಗೆ ಶಾಕ್ ನೀಡಿದ ಬಾರ್ ಕೌನ್ಸಿಲ್
Mamata Banerjee In Black CoatImage Credit source: PTI
ಸುಷ್ಮಾ ಚಕ್ರೆ
|

Updated on:May 14, 2026 | 7:58 PM

Share

ನವದೆಹಲಿ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಕೊಲ್ಕತ್ತಾ ಹೈಕೋರ್ಟ್‌ಗೆ ವಕೀಲರ ಕೋಟ್ ಧರಿಸಿ ಹಾಜರಾಗಿದ್ದರು. ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಅವರು ವಾದಿಸಿದ್ದರು. ಟಿಎಂಸಿಯ ಹಿರಿಯ ನಾಯಕರಾದ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದ ಮಮತಾ ಬ್ಯಾನರ್ಜಿ ತಾವೇ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ವಕೀಲ ವೃತ್ತಿಯಲ್ಲಿ ನಿಜಕ್ಕೂ ಅನುಭವ ಹೊಂದಿದ್ದಾರಾ? ಎಂಬ ಪ್ರಶ್ನೆಗಳು ಮೂಡಿವೆ.

2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪಕ್ಷದ ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು. ಹಲವಾರು ಟಿಎಂಸಿ ಕಾರ್ಯಕರ್ತರು ಹಿಂಸಾಚಾರವನ್ನು ಎದುರಿಸಿದ್ದರು ಎಂದು ಅರ್ಜಿಯಲ್ಲಿ ಹೈಕೋರ್ಟ್​ಗೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಆರೋಪಿಸಲಾಗಿದೆ. ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಕೂಡ ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಕರಿಕೋಟ್ ಧರಿಸಿ ಕಣ್ ಕುಕ್ಕಿದ ಮಮತಾ; ಬಂಗಾಳ ಹಿಂಸಾಚಾರ ಪ್ರಕರಣದಲ್ಲಿ ಕೋರ್ಟ್​ನಲ್ಲಿ ದೀದಿ ವಕೀಲಿಕೆ

ಮೇ 12ರಂದು ಕೊಲ್ಕತ್ತಾ ಹೈಕೋರ್ಟ್‌ಗೆ ಈ ಬಗ್ಗೆ ಅರ್ಜಿ ಸಲ್ಲಿಸಲಾಯಿತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ನ್ಯಾಯಮೂರ್ತಿ ಪಾರ್ಥಸಾರಥಿ ಸೇನ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಈ ಪ್ರಕರಣದ ವಿಚಾರಣೆ ಇಂದು ನಡೆಯಿತು.

ಈ ಪ್ರಕರಣದ ವಿಚಾರಣೆ ಮುಗಿದ ಬಳಿಕ ನ್ಯಾಯಾಲಯದ ಆವರಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರು ಹೈಕೋರ್ಟ್‌ನಿಂದ ಹೊರಬರುತ್ತಿದ್ದಂತೆ, ವಕೀಲರ ಒಂದು ವಿಭಾಗವು ಅವರನ್ನು “ಕಳ್ಳಿ” ಎಂದು ಕರೆದಿದೆ ಎಂದು ಆರೋಪಿಸಲಾಗಿದೆ. ಟಿಎಂಸಿ ಮುಖಂಡರು ಮತ್ತು ವಕೀಲರು ಆಕೆಯನ್ನು ಸುರಕ್ಷಿತವಾಗಿ ಕೋರ್ಟ್ ಆವರಣದಿಂದ ಹೊರತರಲು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ಮಮತಾ ಬ್ಯಾನರ್ಜಿ ಈಗ ಮಾಜಿ ಸಿಎಂ

ಬಾರ್ ಕೌನ್ಸಿಲ್ ಆಫ್ ಇಂಡಿಯಾ ಪಶ್ಚಿಮ ಬಂಗಾಳದ ಬಾರ್ ಕೌನ್ಸಿಲ್‌ಗೆ ಪತ್ರ ಬರೆದಿದ್ದು, ಮಮತಾ ಬ್ಯಾನರ್ಜಿ ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ವಕೀಲರ ಗೌನ್​​ನಲ್ಲಿ ಕಾಣಿಸಿಕೊಂಡಿದ್ದಕ್ಕೆ ವಿವರ ಕೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾನೂನು ಅಭ್ಯಾಸದ ದಾಖಲಾತಿ ಮತ್ತು ಪ್ರಾಕ್ಟಿಸ್​​ಗೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ಬಿಸಿಐ ಕೋರಿದೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾವು ಮಮತಾ ಬ್ಯಾನರ್ಜಿ ಅವರು ವಕೀಲರಾಗಿ ದಾಖಲಾತಿಯಾಗಿದ್ದು, ಯಾವುದೇ ಅಮಾನತು ಅಥವಾ ಅಭ್ಯಾಸದ ಪುನರಾರಂಭ, ಅವರ ಕಾನೂನು ಅಭ್ಯಾಸದ ಪ್ರಮಾಣಪತ್ರದ ಬಗ್ಗೆ ಮಾಹಿತಿಯನ್ನು ಕೇಳಿದೆ. ಎರಡು ದಿನದೊಳಗೆ ದಾಖಲೆ ನೀಡುವಂತೆ ರಾಜ್ಯ ವಕೀಲರ ಪರಿಷತ್‌ಗೆ ಸೂಚಿಸಲಾಗಿದೆ. ಮಮತಾ ಬ್ಯಾನರ್ಜಿ ಅವರು ವಕೀಲರ ಉಡುಪಿನಲ್ಲಿ ಟಿಎಂಸಿ ಪರ ವಕೀಲರಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಪಶ್ಚಿಮ ಬಂಗಾಳದ ಬಾರ್ ಕೌನ್ಸಿಲ್‌ನಲ್ಲಿ ಹೈಕೋರ್ಟ್ ವಕೀಲರಾಗಿ ನೋಂದಾಯಿಸಿಕೊಂಡಿದ್ದಾರೆಯೇ ಎಂದು ತಿಳಿಯಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ ದಾಖಲೆ ಕೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Thu, 14 May 26

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!