AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಂದೆ ಸರ್ಕಾರ 6 ತಿಂಗಳಲ್ಲೇ ಬೀಳಲಿದೆ, ಮಧ್ಯಂತರ ಚುನಾವಣೆಗೆ ಸಿದ್ಧರಾಗಿ: ಶರದ್​ ಪವಾರ್ ಭವಿಷ್ಯ

ಏಕನಾಥ್ ಶಿಂದೆಯ ನೂತನ ಸರ್ಕಾರ ಮುಂದಿನ 6 ತಿಂಗಳಲ್ಲೇ ಬೀಳಲಿದೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ.

ಶಿಂದೆ ಸರ್ಕಾರ 6 ತಿಂಗಳಲ್ಲೇ ಬೀಳಲಿದೆ, ಮಧ್ಯಂತರ ಚುನಾವಣೆಗೆ ಸಿದ್ಧರಾಗಿ: ಶರದ್​ ಪವಾರ್ ಭವಿಷ್ಯ
Sharad Pawar
TV9 Web
| Edited By: |

Updated on: Jul 04, 2022 | 10:47 AM

Share

ಏಕನಾಥ್ ಶಿಂದೆಯ ನೂತನ ಸರ್ಕಾರ ಮುಂದಿನ 6 ತಿಂಗಳಲ್ಲೇ ಬೀಳಲಿದೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ. ಮಹಾರಾಷ್ಟ್ರದ ರಾಜಕೀಯದಲ್ಲಿ ದೊಡ್ಡ ಬದಲಾವಣೆ ತಂದ ಏಕನಾಥ್ ಶಿಂಧೆ ಸರ್ಕಾರದ ನಿಜವಾದ ಪರೀಕ್ಷೆ ಇಂದು ನಡೆಯಲಿದೆ. ಶಿಂಧೆ ಸರ್ಕಾರ ಇಂದು ವಿಶ್ವಾಸಮತ ಪರೀಕ್ಷೆ ಎದುರಿಸಲಿದೆ.

ಇದೆಲ್ಲದರ ನಡುವೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಹೇಳಿಕೆ ಮುನ್ನೆಲೆಗೆ ಬಂದಿದೆ.

ಮುಂದಿನ ಆರು ತಿಂಗಳಲ್ಲಿ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂದೆ ನೇತೃತ್ವದ ರಾಜ್ಯ ಸರ್ಕಾರ ಪತನವಾಗುವ ಸಾಧ್ಯತೆ ಇರುವುದರಿಂದ ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಶರದ್ ಪವಾರ್ ಹೇಳಿದ್ದಾರೆ.

ಎನ್‌ಸಿಪಿ ಶಾಸಕರು ಮತ್ತು ಪಕ್ಷದ ಇತರ ನಾಯಕರನ್ನು ಉದ್ದೇಶಿಸಿ ಪವಾರ್ ಮಾತನಾಡಿ, ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗಬಹುದು, ಆದ್ದರಿಂದ ಎಲ್ಲರೂ ಮಧ್ಯಂತರ ಚುನಾವಣೆಗೆ ಸಿದ್ಧರಾಗಿರಬೇಕು ಎಂದು ಪವಾರ್ ಹೇಳಿದ್ದಾರೆ.

ಶಿಂದೆ ಅವರನ್ನು ಬೆಂಬಲಿಸುವ ಅನೇಕ ಬಂಡಾಯ ಶಾಸಕರು ಪ್ರಸ್ತುತ ವ್ಯವಸ್ಥೆಯಿಂದ ಸಂತೋಷವಾಗಿಲ್ಲ ಎಂದು ಪವಾರ್ ಹೇಳಿದ್ದಾರೆ. ಸಚಿವರಿಗೆ ಖಾತೆ ಹಂಚಿಕೆಯಾದ ಬಳಿಕ ಅವರ ಅಸಮಾಧಾನ ಹೊರಬೀಳಲಿದ್ದು, ಅಂತಿಮವಾಗಿ ಸರ್ಕಾರ ಪತನವಾಗಲಿದೆ.

“ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರ್ಕಾರವು ಮುಂದಿನ ಆರು ತಿಂಗಳಲ್ಲಿ ಬೀಳಬಹುದು, ಆದ್ದರಿಂದ ಎಲ್ಲರೂ ಮಧ್ಯಂತರ ಚುನಾವಣೆಗೆ ಸಿದ್ಧರಾಗಿರಬೇಕು” ಎಂದು ಪವಾರ್ ಹೇಳಿದ್ದಾರೆ ಎಂದು ಎನ್‌ಸಿಪಿ ನಾಯಕರೊಬ್ಬರು ತಿಳಿಸಿದ್ದಾರೆ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?