ಏಕನಾಥ್ ಶಿಂದೆಯ ನೂತನ ಸರ್ಕಾರ ಮುಂದಿನ 6 ತಿಂಗಳಲ್ಲೇ ಬೀಳಲಿದೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ. ಮಹಾರಾಷ್ಟ್ರದ ರಾಜಕೀಯದಲ್ಲಿ ದೊಡ್ಡ ಬದಲಾವಣೆ ತಂದ ಏಕನಾಥ್ ಶಿಂಧೆ ಸರ್ಕಾರದ ನಿಜವಾದ ಪರೀಕ್ಷೆ ಇಂದು ನಡೆಯಲಿದೆ. ಶಿಂಧೆ ಸರ್ಕಾರ ಇಂದು ವಿಶ್ವಾಸಮತ ಪರೀಕ್ಷೆ ಎದುರಿಸಲಿದೆ.
ಇದೆಲ್ಲದರ ನಡುವೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಹೇಳಿಕೆ ಮುನ್ನೆಲೆಗೆ ಬಂದಿದೆ.
ಮುಂದಿನ ಆರು ತಿಂಗಳಲ್ಲಿ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂದೆ ನೇತೃತ್ವದ ರಾಜ್ಯ ಸರ್ಕಾರ ಪತನವಾಗುವ ಸಾಧ್ಯತೆ ಇರುವುದರಿಂದ ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಶರದ್ ಪವಾರ್ ಹೇಳಿದ್ದಾರೆ.
ಎನ್‌ಸಿಪಿ ಶಾಸಕರು ಮತ್ತು ಪಕ್ಷದ ಇತರ ನಾಯಕರನ್ನು ಉದ್ದೇಶಿಸಿ ಪವಾರ್ ಮಾತನಾಡಿ, ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗಬಹುದು, ಆದ್ದರಿಂದ ಎಲ್ಲರೂ ಮಧ್ಯಂತರ ಚುನಾವಣೆಗೆ ಸಿದ್ಧರಾಗಿರಬೇಕು ಎಂದು ಪವಾರ್ ಹೇಳಿದ್ದಾರೆ.
ಶಿಂದೆ ಅವರನ್ನು ಬೆಂಬಲಿಸುವ ಅನೇಕ ಬಂಡಾಯ ಶಾಸಕರು ಪ್ರಸ್ತುತ ವ್ಯವಸ್ಥೆಯಿಂದ ಸಂತೋಷವಾಗಿಲ್ಲ ಎಂದು ಪವಾರ್ ಹೇಳಿದ್ದಾರೆ. ಸಚಿವರಿಗೆ ಖಾತೆ ಹಂಚಿಕೆಯಾದ ಬಳಿಕ ಅವರ ಅಸಮಾಧಾನ ಹೊರಬೀಳಲಿದ್ದು, ಅಂತಿಮವಾಗಿ ಸರ್ಕಾರ ಪತನವಾಗಲಿದೆ.
“ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರ್ಕಾರವು ಮುಂದಿನ ಆರು ತಿಂಗಳಲ್ಲಿ ಬೀಳಬಹುದು, ಆದ್ದರಿಂದ ಎಲ್ಲರೂ ಮಧ್ಯಂತರ ಚುನಾವಣೆಗೆ ಸಿದ್ಧರಾಗಿರಬೇಕು” ಎಂದು ಪವಾರ್ ಹೇಳಿದ್ದಾರೆ ಎಂದು ಎನ್‌ಸಿಪಿ ನಾಯಕರೊಬ್ಬರು ತಿಳಿಸಿದ್ದಾರೆ.