ಮನೆ ಬಾಡಿಗೆ ಕಟ್ಟದಿದ್ದಕ್ಕೆ ಪೊಲೀಸರಿಂದ ಥಳಿತ, ಮನ ನೊಂದ ವ್ಯಕ್ತಿ ಆತ್ಮಹತ್ಯೆ..

ತಮಿಳುನಾಡು:ತಮಿಳುನಾಡಿನಲ್ಲಿ ಮತ್ತೊಮ್ಮೆ ಪೊಲೀಸರು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸಪ್ಪನ ಕ್ರೌರ್ಯಕ್ಕೆ ನೊಂದು ಯುವಕನೊಬ್ಬ ಸಜೀವ ದಹನವಾಗಿದ್ದಾನೆ. ಪೈಂಟರ್ ಒಬ್ಬ ಮನೆಯ ಬಾಡಿಗೆ ಪಾವತಿಸದ ಕಾರಣಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್‌ ಆತನನ್ನು ಥಳಿಸಿದ್ದಾರೆ.ಇದರಿಂದ ತೀರ ಅವಮಾನಕೊಳಗಾದ ಪೈಂಟರ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನೆಡೆದಿದೆ. ಚೆನ್ನೈನ ಪುಜಲ್ ನಗರದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದ ಶ್ರೀನಿವಾಸನ್ ಲಾಕ್​ಡೌನ್​ ಪರಿಣಾಮ ಕೆಲಸವಿರಲಿಲ್ಲ, ಹೀಗಾಗಿ ನಾಲ್ಕು ತಿಂಗಳ ಮನೆ ಬಾಡಿಗೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮನೆಯ ಯಜಮಾನ ರಾಜೇಂದ್ರನ್ ಮನೆಯನ್ನು ಖಾಲಿ […]

ಮನೆ ಬಾಡಿಗೆ ಕಟ್ಟದಿದ್ದಕ್ಕೆ ಪೊಲೀಸರಿಂದ ಥಳಿತ, ಮನ ನೊಂದ ವ್ಯಕ್ತಿ ಆತ್ಮಹತ್ಯೆ..
ಪ್ರಾತಿನಿಧಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on:Aug 04, 2020 | 11:29 AM

ತಮಿಳುನಾಡು:ತಮಿಳುನಾಡಿನಲ್ಲಿ ಮತ್ತೊಮ್ಮೆ ಪೊಲೀಸರು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸಪ್ಪನ ಕ್ರೌರ್ಯಕ್ಕೆ ನೊಂದು ಯುವಕನೊಬ್ಬ ಸಜೀವ ದಹನವಾಗಿದ್ದಾನೆ. ಪೈಂಟರ್ ಒಬ್ಬ ಮನೆಯ ಬಾಡಿಗೆ ಪಾವತಿಸದ ಕಾರಣಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್‌ ಆತನನ್ನು ಥಳಿಸಿದ್ದಾರೆ.ಇದರಿಂದ ತೀರ ಅವಮಾನಕೊಳಗಾದ ಪೈಂಟರ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನೆಡೆದಿದೆ.

ಚೆನ್ನೈನ ಪುಜಲ್ ನಗರದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದ ಶ್ರೀನಿವಾಸನ್ ಲಾಕ್​ಡೌನ್​ ಪರಿಣಾಮ ಕೆಲಸವಿರಲಿಲ್ಲ, ಹೀಗಾಗಿ ನಾಲ್ಕು ತಿಂಗಳ ಮನೆ ಬಾಡಿಗೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮನೆಯ ಯಜಮಾನ ರಾಜೇಂದ್ರನ್ ಮನೆಯನ್ನು ಖಾಲಿ ಮಾಡುವಂತೆ ಪದೇ ಪದೇ ಹೇಳುತ್ತಿದ್ದರು. ಜೊತೆಗೆ ರಾಜಕೀಯ ಪಕ್ಷದ ಸದಸ್ಯರಾಗಿರುವ ಮನೆ ಮಾಲೀಕ ಈ ವಿಷಯವಾಗಿ ಪುಜಲ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಅನ್ವಯ ಪುಜಲ್ ನಗರದ ಪೊಲೀಸ್ ಇನ್ಸ್‌ಪೆಕ್ಟರ್ ಸ್ಯಾಮ್ ಬೆನ್ಸನ್, ಶ್ರೀನಿವಾಸನ್ ಅವರ ಮನೆಗೆ ಬಂದು ಹೆಂಡತಿ ಮತ್ತು ಮಕ್ಕಳ ಮುಂದೆ ಶ್ರೀನಿವಾಸನ್​ನನ್ನು ಮನಬಂದಂತೆ ಥಳಿಸಿದ್ದಾರೆ.ಇದರಿಂದ ತೀವ್ರ ನಿರಾಶೆಗೊಂಡ ಶ್ರೀನಿವಾಸನ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೂಡಲೇ ಸ್ಥಳೀಯರೆಲ್ಲ ಸೇರಿ ಬೆಂಕಿ ನಂದಿಸಿ ಶ್ರೀನಿವಾಸನ್ ಅವರನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇ 80 ರಷ್ಟು ಸುಟ್ಟ ಗಾಯಗಳಾಗಿದ್ದ ಶ್ರೀನಿವಾಸನ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಚೆನ್ನೈನ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅಗರ್‌ವಾಲ್ ಈ ಬಗ್ಗೆ ಹೇಳಿಕೆ ನೀಡಿದ್ದು, ಈಗಾಗಲೇ ಪುಜಲ್ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಸ್ಯಾಮ್ ಬೆನ್ಸನ್ ಅವರನ್ನು ಅಮಾನತು ಮಾಡಲಾಗಿದೆ.

Published On - 11:05 am, Tue, 4 August 20

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್