ಯೋಧರ ಪ್ರಾಣತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ.. ಸೂಕ್ತ ಸಮಯದಲ್ಲಿ ನಕ್ಸಲರಿಗೆ ಕಟು ತಿರುಗೇಟು ನೀಡುತ್ತೇವೆ: ಅಮಿತ್​ ಶಾ

ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಅಮಿತ್ ಶಾ, ಯೋಧರ ಸಾವಿನ ಸುದ್ದಿ ಕೇಳುತ್ತಲೇ ಪ್ರಚಾರವನ್ನು ಅರ್ಧಕ್ಕೆ ಬಿಟ್ಟು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ಹೊರಡುವುದಕ್ಕೂ ಮೊದಲು ಅಸ್ಸಾಂನ ಸೌಲ್​ಕುಂಚಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಯೋಧರ ಪ್ರಾಣತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ.. ಸೂಕ್ತ ಸಮಯದಲ್ಲಿ ನಕ್ಸಲರಿಗೆ ಕಟು ತಿರುಗೇಟು ನೀಡುತ್ತೇವೆ: ಅಮಿತ್​ ಶಾ
ಅಮಿತ್ ಶಾ (ಸಂಗ್ರಹ ಚಿತ್ರ)
Follow us
Lakshmi Hegde
|

Updated on: Apr 04, 2021 | 7:06 PM

ಗುವಾಹಟಿ: ಚತ್ತೀಸ್​ಗಡ್​ನಲ್ಲಿ ನಕ್ಸಲರ ದಾಳಿಗೆ ಬರೋಬ್ಬರಿ 22 ಸೈನಿಕರು ಹುತಾತ್ಮರಾಗಿದ್ದಾರೆ. ನಿನ್ನೆಯಿಂದಲೂ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಲೇ ಇತ್ತು. ನಕ್ಸಲರ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದ ಭದ್ರತಾ ಪಡೆಗಳ ಮೇಲೆ ಸುಮಾರು 400 ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ತತ್ಪರಿಣಾಮ 22 ಯೋಧರು ಜೀವ ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಗೃಹಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಅಮಿತ್ ಶಾ, ಯೋಧರ ಸಾವಿನ ಸುದ್ದಿ ಕೇಳುತ್ತಲೇ ಪ್ರಚಾರವನ್ನು ಅರ್ಧಕ್ಕೆ ಬಿಟ್ಟು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ಹೊರಡುವುದಕ್ಕೂ ಮೊದಲು ಅಸ್ಸಾಂನ ಸೌಲ್​ಕುಂಚಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ನಿಖರವಾಗಿ ಇನ್ನೂ ಗೊತ್ತಿಲ್ಲ. ಆದರೆ ಯೋಧರನ್ನು ಹತ್ಯೆ ಮಾಡಿದ ನಕ್ಸಲರಿಗೆ, ಸೂಕ್ತ ಸಮಯದಲ್ಲಿ ಕಟು ಉತ್ತರ ನೀಡಲಾಗುವುದು ಎಂದು ಹೇಳಿದ್ದಾರೆ. ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಪ್ರಾಣ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಕುಟುಂಬಕ್ಕೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

ಅಸ್ಸಾನಿಂದ ದೆಹಲಿಗೆ ಹೋದ ಅಮಿತ್​ ಶಾ, ಚತ್ತೀಸ್​ಗಡ್​​ನ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ, ಸ್ಥಳದಲ್ಲಿರುವ ಪರಿಸ್ಥಿತಿಯ ಬಗ್ಗೆ ವರದಿ ಪಡೆದಿದ್ದಾರೆ.

ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ಯುವತಿಯರಿಗೆ ವಂಚಿಸುತ್ತಿದ್ದ ಆರೋಪಿ ಬಂಧನ

Health Tips: ಈ ಔಷಧೀಯ ಸಸ್ಯಗಳು ನಿಮ್ಮ ಗಾರ್ಡನ್​​ನಲ್ಲಿ ಇರಲಿ; ಅಡುಗೆಗೂ ಆಯಿತು.. ಆರೋಗ್ಯಕ್ಕೂ ಒಳ್ಳೆಯದು

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ