ಗುವಾಹಟಿ: ಚತ್ತೀಸ್ಗಡ್ನಲ್ಲಿ ನಕ್ಸಲರ ದಾಳಿಗೆ ಬರೋಬ್ಬರಿ 22 ಸೈನಿಕರು ಹುತಾತ್ಮರಾಗಿದ್ದಾರೆ. ನಿನ್ನೆಯಿಂದಲೂ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಲೇ ಇತ್ತು. ನಕ್ಸಲರ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದ ಭದ್ರತಾ ಪಡೆಗಳ ಮೇಲೆ ಸುಮಾರು 400 ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ತತ್ಪರಿಣಾಮ 22 ಯೋಧರು ಜೀವ ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಗೃಹಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಅಮಿತ್ ಶಾ, ಯೋಧರ ಸಾವಿನ ಸುದ್ದಿ ಕೇಳುತ್ತಲೇ ಪ್ರಚಾರವನ್ನು ಅರ್ಧಕ್ಕೆ ಬಿಟ್ಟು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ಹೊರಡುವುದಕ್ಕೂ ಮೊದಲು ಅಸ್ಸಾಂನ ಸೌಲ್ಕುಂಚಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ನಿಖರವಾಗಿ ಇನ್ನೂ ಗೊತ್ತಿಲ್ಲ. ಆದರೆ ಯೋಧರನ್ನು ಹತ್ಯೆ ಮಾಡಿದ ನಕ್ಸಲರಿಗೆ, ಸೂಕ್ತ ಸಮಯದಲ್ಲಿ ಕಟು ಉತ್ತರ ನೀಡಲಾಗುವುದು ಎಂದು ಹೇಳಿದ್ದಾರೆ. ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಪ್ರಾಣ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಕುಟುಂಬಕ್ಕೆ ಭರವಸೆ ನೀಡುತ್ತೇನೆ ಎಂದಿದ್ದಾರೆ.
ಅಸ್ಸಾನಿಂದ ದೆಹಲಿಗೆ ಹೋದ ಅಮಿತ್ ಶಾ, ಚತ್ತೀಸ್ಗಡ್ನ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ, ಸ್ಥಳದಲ್ಲಿರುವ ಪರಿಸ್ಥಿತಿಯ ಬಗ್ಗೆ ವರದಿ ಪಡೆದಿದ್ದಾರೆ.
ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ಯುವತಿಯರಿಗೆ ವಂಚಿಸುತ್ತಿದ್ದ ಆರೋಪಿ ಬಂಧನ
Health Tips: ಈ ಔಷಧೀಯ ಸಸ್ಯಗಳು ನಿಮ್ಮ ಗಾರ್ಡನ್ನಲ್ಲಿ ಇರಲಿ; ಅಡುಗೆಗೂ ಆಯಿತು.. ಆರೋಗ್ಯಕ್ಕೂ ಒಳ್ಳೆಯದು