ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್​ ಜತೆ ಕೈಜೋಡಿಸಿದ ಬಿಪಿಎಫ್

2005ರಲ್ಲಿ ಬೋಡೋಲ್ಯಾಂಡ್ ಪೀಪಲ್ಸ್​​ ಫ್ರಂಟ್​ ಸ್ಥಾಪನೆಗೊಂಡಿತ್ತು. ಇದೊಂದು ಸ್ಥಳೀಯ ಪಕ್ಷವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಪಿಎಫ್​ 126 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ​ ಗೆದ್ದಿತ್ತು.

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್​ ಜತೆ ಕೈಜೋಡಿಸಿದ ಬಿಪಿಎಫ್
Follow us
ರಾಜೇಶ್ ದುಗ್ಗುಮನೆ
|

Updated on:Feb 27, 2021 | 9:49 PM

ಗುವಾಹಟಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಶುಕ್ರವಾರ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಐದೂ ರಾಜ್ಯಗಳಲ್ಲಿ ಚುನಾವಣಾ ಕಾವು ಜೋರಾಗಿದೆ. ವಿಧಾನಸಭೆ ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ಬೋಡೋಲ್ಯಾಂಡ್ ಪೀಪಲ್ಸ್​​ ಫ್ರಂಟ್​ ಅಥವಾ ಬಿಪಿಎಫ್ ಶನಿವಾರ ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್​ ಜತೆ ಕೈ ಜೋಡಿಸುವ ಘೋಷಣೆ ಮಾಡಿದೆ.

ಈ ಬಗ್ಗೆ ಬಿಪಿಎಫ್ ನಾಯಕ ಹಗ್ರಾಮ ಮೊಹಿಲಾರಿ ಫೇಸ್​ಬುಕ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಶಾಂತಿ, ಐಕ್ಯತೆ ಮತ್ತು ಅಭಿವೃದ್ಧಿ ಕೆಲಸ ಮಾಡಲು ಮತ್ತು ಅಸ್ಸಾಂಅನ್ನು ಭ್ರಷ್ಟಾಚಾರದಿಂದ ಮುಕ್ತಮಾಡಿ ಸ್ಥಿರವಾದ ಸರ್ಕಾರವನ್ನು ತರಲು, ಬೊಡೋಲ್ಯಾಂಡ್ ಪೀಪಲ್ಸ್ ಫ್ರಂಟ್ ಕಾಂಗ್ರೆಸ್​ ನೇತೃತ್ವದ ಮಹಾಜತ್ ಮೈತ್ರಿಕೂಟದೊಂದಿಗೆ ಕೈಜೋಡಿಸಲು ನಿರ್ಧರಿಸಿದೆ. ಬಿಪಿಎಫ್ ಇನ್ನು ಮುಂದೆ ಬಿಜೆಪಿಯೊಂದಿಗೆ ಸ್ನೇಹ ಅಥವಾ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

2005ರಲ್ಲಿ ಬೋಡೋಲ್ಯಾಂಡ್ ಪೀಪಲ್ಸ್​​ ಫ್ರಂಟ್​ ಸ್ಥಾಪನೆಗೊಂಡಿತ್ತು. ಇದೊಂದು ಸ್ಥಳೀಯ ಪಕ್ಷವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಪಿಎಫ್​ 126 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಪಿಎಫ್​ ಗೆದ್ದಿತ್ತು. ನಂತರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಚುನಾವಣೆ ಯಾವಾಗ?

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಹಾಗೂ ಏಪ್ರಿಲ್ 29ರಂದು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತ ಎಣಿಕೆಯು ಮೇ 2ರಂದು ನಡೆಯಲಿದೆ. ಕೇರಳದಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ನಡೆಯಲಿದೆ. ಅಸ್ಸಾಂನಲ್ಲಿ 27 ಮಾರ್ಚ್, ಏಪ್ರಿಲ್ 1 ಮತ್ತು ಏಪ್ರಿಲ್ 6ರಂದು, ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ವಿಶ್ಲೇಷಣೆ | ಕರ್ನಾಟಕದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗವು ಘೋಷಿಸಲಿಲ್ಲ ಏಕೆ?

Published On - 9:47 pm, Sat, 27 February 21