AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ರೈಲು ನಿಲ್ದಾಣ ಬಳಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

ಉತ್ತರ ಪ್ರದೇಶ ರೈಲು ನಿಲ್ದಾಣದ ಬಳಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಮನುಷ್ ಪರೀಖ್ ಇದು ಕೊಲೆಯಲ್ಲ ಯಾವುದೋ ಪ್ರಾಣಿ ದಾಳಿ ಮಾಡಿರುವಂತೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ರೈಲು ನಿಲ್ದಾಣ ಬಳಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ
ರೈಲ್ವೆ ಹಳಿ
ನಯನಾ ರಾಜೀವ್
|

Updated on: Jul 30, 2024 | 2:18 PM

Share

ಉತ್ತರ ಪ್ರದೇಶದ ಬರೇಲಿಯ ಪಿತಾಂಬರಪುರ ರೈಲು ನಿಲ್ದಾಣದ ಬಳಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬಾಲಕಿಯ ಪತ್ತೆಯಾಗಿದೆ. ಬಾಲಕಿ 6 ವರ್ಷ ಆಸುಪಾಸಿರಬಹುದು ಎಂದು ಅಂದಾಜಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಮನುಷ್ ಪರೀಖ್ ಇದು ಕೊಲೆಯಲ್ಲ ಯಾವುದೋ ಪ್ರಾಣಿ ದಾಳಿ ಮಾಡಿರುವಂತೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಬಾಲಕಿಗೆ ರೈಲು ಡಿಕ್ಕಿಯಾಗಿರಬಹುದು ಅಥವಾ ಯಾವುದಾದರೂ ಕಾಡು ಪ್ರಾಣಿಗಳ ದಾಳಿಗೆ ಬಲಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ದೇಹವನ್ನು ಎಳೆದುಕೊಂಡು ಹೋಗಿರುವ ಕಾರಣ ಬಾಲಕಿಯ ತಲೆಯು ಆಕೆಯ ದೇಹದಿಂದ ಬೇರ್ಪಟ್ಟಿದೆ ಎಂದು ಅವರು ಹೇಳಿದರು.

ಮೃತದೇಹ ಏಳರಿಂದ ಎಂಟು ದಿನಗಳ ಹಳೆಯದಾಗಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ ಎಂದು ಎಎಸ್ಪಿ ಪರೀಕ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಸಾವಿನ ಕಾರಣವನ್ನು ಕಂಡುಹಿಡಿಯಲಾಗುವುದು ಮತ್ತು ಏತನ್ಮಧ್ಯೆ, ಪೊಲೀಸರು ಎಲ್ಲಾ ಸಂಭಾವ್ಯ ಕೋನಗಳಿಂದ ವಿಷಯವನ್ನು ತನಿಖೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಹಾಸನದಲ್ಲಿ 12 ವರ್ಷದ ಬಾಲಕನ ಬರ್ಬರ ಹತ್ಯೆ; ಕೊಲೆಗೈದು ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದ ದುಷ್ಕರ್ಮಿಗಳು

ಇತ್ತೀಚೆಗೆ ಬೆಂಗಳೂರಿನಲ್ಲೂ ಇಂಥದ್ದೇ ಘಟನೆ ನಡೆದಿತ್ತು ಆರು ವರ್ಷದ ಬಾಲಕಿಯ ಮೃತದೇಹ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದೆ. ಇಂದು (ಜುಲೈ 03) ಬೆಳಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿಯ ಪಾರ್ಕಿಂಗ್​ ಸ್ಥಳದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದ್ದು ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಎಂದು ಗೊತ್ತಾಗಿದೆ.

ಇನ್ನು ಮೈಮೇಲೆ ಪರಚಿದ ಗಾಯಗಳು ಹಾಗೂ ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಹೀಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಳಿಕ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಮೃತ ಬಾಲಕಿ ಕಂಡು ಕೂಡಲೇ ಪಾರ್ಕಿಂಗ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಕೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ