BEML Recruitment 2026: ಬಿಇಎಂಎಲ್‌ನಲ್ಲಿ 1,346 ಅಪ್ರೆಂಟಿಸ್ ಹುದ್ದೆಗಳಿಗೆ ಬಂಪರ್ ನೇಮಕಾತಿ!

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಬಿಇಎಂಎಲ್ (BEML) 1346 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಗ್ರಾಜುಯೇಟ್, ಡಿಪ್ಲೊಮಾ, ಐಟಿಐ ಅರ್ಹತೆಯುಳ್ಳವರು ಸೆಪ್ಟೆಂಬರ್ 8ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ನಡೆಯಲಿದ್ದು, ಹುದ್ದೆಗೆ ಅನುಗುಣವಾಗಿ 12,300ರೂ. ವರೆಗೆ ಮಾಸಿಕ ಸ್ಟೈಫಂಡ್ ದೊರೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

BEML Recruitment 2026: ಬಿಇಎಂಎಲ್‌ನಲ್ಲಿ 1,346 ಅಪ್ರೆಂಟಿಸ್ ಹುದ್ದೆಗಳಿಗೆ ಬಂಪರ್ ನೇಮಕಾತಿ!
ಬಿಇಎಂಎಲ್‌ನಲ್ಲಿ ನೇಮಕಾತಿ
Image Credit source: Getty Images

Updated on: Aug 26, 2026 | 1:39 PM

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಲಯದ ದೈತ್ಯ ಸಂಸ್ಥೆ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ರಕ್ಷಣೆ, ಏರೋಸ್ಪೇಸ್, ಗಣಿಗಾರಿಕೆ, ನಿರ್ಮಾಣ, ರೈಲು ಮತ್ತು ಮೆಟ್ರೋ ವಲಯಗಳಿಗೆ ಅಗತ್ಯವಿರುವ ಭಾರೀ ಉಪಕರಣಗಳನ್ನು ತಯಾರಿಸುವ 1964ರಲ್ಲಿ ಸ್ಥಾಪಿತ ಬೆಂಗಳೂರು ಮೂಲದ ಈ ಕಂಪನಿಯು ಒಟ್ಟು 1,346 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳು ಮತ್ತು ಶೈಕ್ಷಣಿಕ ಅರ್ಹತೆಗಳ ವಿವರ:

ಈ ನೇಮಕಾತಿಯಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ (ಎಂಜಿನಿಯರಿಂಗ್, ನಾನ್-ಎಂಜಿನಿಯರಿಂಗ್), ಡಿಪ್ಲೊಮಾ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿತ ವಿಭಾಗದಲ್ಲಿ ಬಿಇ ಅಥವಾ ಬಿ.ಟೆಕ್ ಪೂರ್ಣಗೊಳಿಸಿರಬೇಕು, ಡಿಪ್ಲೊಮಾ ಅಪ್ರೆಂಟಿಸ್‌ಗಳಿಗೆ ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು ಹಾಗೂ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಉತ್ತೀರ್ಣರಾಗಿರಬೇಕು. ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಕಂಪ್ಯೂಟರ್/ಮಾಹಿತಿ ವಿಜ್ಞಾನ, ಎಲೆಕ್ಟ್ರಿಷಿಯನ್, ವೆಲ್ಡರ್, ಮೆಷಿನಿಸ್ಟ್, ಮೋಟಾರ್ ವೆಹಿಕಲ್ ಮೆಕ್ಯಾನಿಕ್ ಇತ್ಯಾದಿ ವಿಭಾಗಗಳಲ್ಲಿ ಖಾಲಿ ಹುದ್ದೆಗಳು ಲಭ್ಯವಿವೆ.

ವಯೋಮಿತಿ ಮತ್ತು ಆಯ್ಕೆ ವಿಧಾನ:

ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 17 ವರ್ಷ ವಯಸ್ಸಾಗಿರಬೇಕು. ಅಭ್ಯರ್ಥಿಗಳ ಆಯ್ಕೆಯನ್ನು ಅವರ ಶೈಕ್ಷಣಿಕ ಅರ್ಹತೆಯ ಅಂಕಗಳ (Merit) ಆಧಾರದ ಮೇಲೆ ಮಾಡಲಾಗುತ್ತದೆ. ಪ್ರತಿ ಟ್ರೇಡ್ ಮತ್ತು ಪ್ರತಿಯೊಂದು ಸ್ಥಳದಲ್ಲಿ ಲಭ್ಯವಿರುವ ಸೀಟುಗಳ ಸಂಖ್ಯೆಗೆ ಅನುಗುಣವಾಗಿ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ದಾಖಲೆ ಪರಿಶೀಲನೆಗೆ (Document Verification) ಕರೆಯಲಾಗುತ್ತದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಮಾಸಿಕ ಸ್ಟೈಫಂಡ್ ವಿವರಗಳು:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಯ ಸ್ವರೂಪಕ್ಕೆ ತಕ್ಕಂತೆ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ. ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,300 ಹಾಗೂ ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ 10,900 ರೂ. ಸ್ಟೈಫಂಡ್ ನಿಗದಿಪಡಿಸಲಾಗಿದೆ. ಅದೇ ರೀತಿ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅವರ ಟ್ರೇಡ್‌ಗೆ ಅನುಗುಣವಾಗಿ 9,000 ರಿಂದ 10,560 ರೂ. ರವರೆಗೆ ಮಾಸಿಕ ಸ್ಟೈಫಂಡ್ ದೊರೆಯಲಿದೆ.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮತ್ತು ಸೂಚನೆಗಳು:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 8 ರೊಳಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಹುದ್ದೆವಾರು ಅರ್ಹತೆಗಳು, ಖಾಲಿ ಹುದ್ದೆಗಳ ವಿವರ ಮತ್ತು ಇತರ ನೇಮಕಾತಿ ನಿಯಮಾವಳಿಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು ಬಿಇಎಂಎಲ್ ನ ಅಧಿಕೃತ ನೇಮಕಾತಿ ವೆಬ್‌ಸೈಟ್‌ಗೆ ಭೇಟಿ ನೀಡಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us