ಪ್ರಧಾನಿ ಮೋದಿ ಎದುರು ವಾರಾಣಸಿಯಿಂದ ಸ್ಪರ್ಧಿಸಿ: ಮಮತಾ ಬ್ಯಾನರ್ಜಿಗೆ ಬಿಜೆಪಿ ನಾಯಕಿ ಸವಾಲು

ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸಬೇಕು ಎಂದು ಮಮತಾ ಒತ್ತಾಯಿಸಿದ ಬೆನ್ನಲ್ಲೇ ಪಾಲ್ ಅವರು ಸ್ಪರ್ಧೆಗೆ ಸವಾಲು ಹಾಕಿದ್ದಾರೆ. ಇಂಡಿಯಾ ಮೈತ್ರಿಕೂಟದ ನೇತೃತ್ವವನ್ನು ಮಮತಾ ವಹಿಸಬೇಕು ಎಂದು ತೃಣಮೂಲ ಕಾಂಗ್ರೆಸ್​​ ಪಕ್ಷದವರಿಂದ ಆಗ್ರಹ ವ್ಯಕ್ತವಾಗಿತ್ತು.

ಅಗ್ನಿಮಿತ್ರಾ ಪಾಲ್Image Credit source: ANI
Follow us
Ganapathi Sharma
|

Updated on: Dec 23, 2023 | 10:57 AM

ನವದೆಹಲಿ, ಡಿಸೆಂಬರ್ 23: ಧೈರ್ಯವಿದ್ದರೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಿಜೆಪಿ ನಾಯಕಿ ಅಗ್ನಿಮಿತ್ರಾ ಪಾಲ್ ಸವಾಲು ಹಾಕಿದ್ದಾರೆ. ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ವಿರುದ್ಧ ಕಣಕ್ಕಿಳಿಯುಂತೆ ಮಮತಾ ಅವರಿಗೆ ಪಾಲ್ ಆಗ್ರಹಿಸಿದ್ದಾರೆ.

‘ಮಮತಾ ಬ್ಯಾನರ್ಜಿ ಯಾಕೆ ವಾರಾಣಸಿಯಿಂದ ಸ್ಪರ್ಧಿಸಬಾರದು? ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬದಲಿಗೆ ಸ್ಪರ್ಧಿಸುವ ಧೈರ್ಯ ಅವರಿಗಿದ್ದರೆ ಮೋದಿ ವಿರುದ್ಧ ಸ್ಪರ್ಧಿಸಲಿ. ನೀವು (ಮಮತಾ) ಪ್ರಧಾನಿಯಾಗಲು ಬಯಸುತ್ತೀರಲ್ಲವೇ? ಹಾಗಿದ್ದರೆ ಪ್ರಧಾನಿಯವರ ವಿರುದ್ಧವೇ ಸ್ಪರ್ಧಿಸಿ’ ಎಂದು ಅಗ್ನಿಮಿತ್ರಾ ಪಾಲ್ ಹೇಳಿದ್ದಾರೆ. ಹೇಳಿಕೆಯ ವಿಡಿಯೋವನ್ನು ಎಎನ್​ಐ ಸುದ್ದಿಸಂಸ್ಥೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪ್ರಕಟಿಸಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸಬೇಕು ಎಂದು ಮಮತಾ ಒತ್ತಾಯಿಸಿದ ಬೆನ್ನಲ್ಲೇ ಪಾಲ್ ಅವರು ಸ್ಪರ್ಧೆಗೆ ಸವಾಲು ಹಾಕಿದ್ದಾರೆ. ಇಂಡಿಯಾ ಮೈತ್ರಿಕೂಟದ ನೇತೃತ್ವವನ್ನು ಮಮತಾ ವಹಿಸಬೇಕು ಎಂದು ತೃಣಮೂಲ ಕಾಂಗ್ರೆಸ್​​ ಪಕ್ಷದವರಿಂದ ಆಗ್ರಹ ವ್ಯಕ್ತವಾಗಿತ್ತು.

ಇದನ್ನೂ ಓದಿ: ಯುವಕರು, ಬಡವರು, ಮಹಿಳೆಯರು, ರೈತರ ಬಗ್ಗೆ ಗಮನಹರಿಸಿ: ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಸಲಹೆ

ಪಶ್ಚಿಮ ಬಂಗಾಳದ ಕೆಲವು ಕಾಂಗ್ರೆಸ್ ನಾಯಕರು ಎಡಪಕ್ಷಗಳೊಂದಿಗೆ ಸೀಟು ಹಂಚಿಕೆಯ ಹೊಂದಾಣಿಕೆಗೆ ಒತ್ತಾಯಿಸುತ್ತಿದ್ದಾರೆ ಎಂಬ ವದಂತಿಗಳ ನಡುವೆಯೇ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಮಾತುಕತೆಗೆ ಮುಕ್ತರಾಗಿದ್ದಾರೆ ಎಂದು ಮೂಲಗಳು ಹೇಳಿವೆ. 2019ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್