AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಪ್ರಧಾನಿ ಮೋದಿಗೆ ನನ್ನ ಮೇಲೆ ಅಸೂಯೆ, ಹಾಗಾಗಿಯೇ ಇಟಲಿಗೆ ಹೋಗಲು ಅನುಮತಿ ಸಿಗಲಿಲ್ಲ’-ಮಮತಾ ಬ್ಯಾನರ್ಜಿ

ಜಾಗತಿಕ ಶಾಂತಿ ಸಂಬಂಧಪಟ್ಟು ರೋಮ್​​ನಲ್ಲಿ ಒಂದು ಸಮ್ಮೇಳನ ಇತ್ತು. ನನಗೂ ಆಮಂತ್ರಣವಿತ್ತು. ಆದರೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅವಕಾಶ ನೀಡಲಿಲ್ಲ ಎಂದು ದೀದಿ ಹೇಳಿದ್ದಾರೆ.

’ಪ್ರಧಾನಿ ಮೋದಿಗೆ ನನ್ನ ಮೇಲೆ ಅಸೂಯೆ, ಹಾಗಾಗಿಯೇ ಇಟಲಿಗೆ ಹೋಗಲು ಅನುಮತಿ ಸಿಗಲಿಲ್ಲ’-ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
TV9 Web
| Updated By: Lakshmi Hegde|

Updated on:Sep 26, 2021 | 3:46 PM

Share

ಕೋಲ್ಕತ್ತ: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ತನಗೆ ಭಾಗವಹಿಸಲು ಕೊಡದ ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ (West Bengal CM Mamata Banerjee) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಮೇಲೆ ಕೇಂದ್ರ ಸರ್ಕಾರಕ್ಕೆ ಅಸೂಯೆ ಎಂದೂ ಹೇಳಿದ್ದಾರೆ.  ಇಟಲಿಯಲ್ಲಿ ಅಕ್ಟೋಬರ್​​ನಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಸ್ಯಾಂಟ್ ಎಜಿಡಿಯೋ ಸಮುದಾಯದ, ರೋಮ್​ ಮೂಲದ ಕ್ಯಾಥೋಲಿಕ್​ ಫೌಂಡೇಶನ್​  ಆಯೋಜಿಸಿದೆ. ಅದರಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಮಮತಾ ಬ್ಯಾನರ್ಜಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಮಾಡಿದ್ದರು. ಆದರೆ ನಿನ್ನೆ ಕೇಂದ್ರ ಸಚಿವಾಲಯ ಅವಕಾಶ ಇಲ್ಲ ಎಂದು ಹೇಳಿದೆ. ಹಾಗೇ, ಯಾವುದೇ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವಂತ ಕಾರ್ಯಕ್ರಮ ಇದಲ್ಲ ಎಂದಿದೆ. 

ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಜಾಗತಿಕ ಶಾಂತಿ ಸಂಬಂಧಪಟ್ಟು ರೋಮ್​​ನಲ್ಲಿ ಒಂದು ಸಮ್ಮೇಳನ ಇತ್ತು. ನನಗೂ ಆಮಂತ್ರಣವಿತ್ತು. ಆ ಸಭೆಯಲ್ಲಿ ಜರ್ಮನ್​ ಚಾನ್ಸಲರ್​ ಮತ್ತು ಪೋಪ್​ ಫ್ರಾನ್ಸಿಸ್​ ಕೂಡ ಭಾಗವಹಿಸುತ್ತಾರೆ. ನಾನು ಆ ಕಾರ್ಯಕ್ರಮಕ್ಕೆ ಹೋಗಲು ಇಟಲಿ ಕೂಡ ವಿಶೇಷ ಅನುಮತಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ನಿರಾಕರಿಸಿದೆ. ನನ್ನ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಕೇಳಿದ್ದಕ್ಕೆ ಮುಖ್ಯಮಂತ್ರಿಗಳು ಭಾಗವಹಿಸುವ ಸಮಾರಂಭವಲ್ಲ ಎಂಬ ಉತ್ತರ ಕೊಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನನ್ನು ತಡೆಯಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಹಾಗಂತ ನಾನೇನೂ ವಿದೇಶಗಳಿಗೆ ಭೇಟಿ ನೀಡಲು ತುಂಬ ಆಸಕ್ತಳಾಗಿಯೂ ಇಲ್ಲ. ಆದರೆ ಇದು ದೇಶದ ಗೌರವದ ಪ್ರಶ್ನೆ. ಪ್ರಧಾನಿ ಮೋದಿ ಯಾವಾಗಲೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ನಾನೂ ಕೂಡ ಒಬ್ಬ ಹಿಂದು ಮಹಿಳೆ. ಆದರೂ ನನಗೆ ಅನುಮತಿ ನೀಡಿಲ್ಲ. ಅವರಿಗೆಲ್ಲ ನನ್ನ ಕಂಡರೆ ತುಂಬ ಅಸೂಯೆ ಎಂದು ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಇಟಲಿಯಲ್ಲಿ ನಡೆಯಲಿರುವ ಶಾಂತಿ ಸಮ್ಮೇಳನಕ್ಕೆ ಜರ್ಮನ್​ ಚಾನ್ಸಲರ್​ ಏಂಜೆಲಾ ಮರ್ಕೆಲ್​, ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಮತ್ತು ಪೋಪ್​ ಫ್ರಾನ್ಸಿಸ್​ ಸೇರಿ ಸುಮಾರು 500 ಧಾರ್ಮಿಕ ಹಾಗೂ ರಾಜಕೀಯ ನಾಯಕರಿಗೆ ಆಹ್ವಾನ ನೀಡಲಾಗಿದೆ. ಈ ಸಮ್ಮೇಳನ ಎರಡು ದಿನ ನಡೆಯಲಿದೆ.

ಇದನ್ನೂ ಓದಿ: ಇಟಲಿಯಲ್ಲಿ ನಡೆಯಲಿರುವ ಶಾಂತಿ ಸಮಾವೇಶಕ್ಕೆ ಹೋಗಲು ಮಮತಾ ಬ್ಯಾನರ್ಜಿಗೆ ಅನುಮತಿ ನೀಡದ ಕೇಂದ್ರ ಸರ್ಕಾರ 

(Bengal Chief Minister Mamata Banerjee slams Centre for refused permission for her to travel to Italy)

Published On - 3:45 pm, Sun, 26 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ