AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳ: ಸಿಖ್ ಪೊಲೀಸ್ ಅಧಿಕಾರಿಯನ್ನು ಖಲಿಸ್ತಾನಿ ಎಂದ ಬಿಜೆಪಿ; ಕಾನೂನು ಕ್ರಮದ ಎಚ್ಚರಿಕೆ ನೀಡಿದ ಮಮತಾ

ನಾನು ಪೇಟ ಧರಿಸಿದ್ದೇನೆ, ಅದಕ್ಕಾಗಿಯೇ ನೀವು ನನ್ನನ್ನು ಖಲಿಸ್ತಾನಿ ಎಂದು ಕರೆಯುತ್ತಿದ್ದೀರಾ? ನಾನು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇನೆ. ನೀವು ನನ್ನ ಧರ್ಮದ ಮೇಲೆ ದಾಳಿ ಮಾಡಬಾರದು. ನಿಮ್ಮ ಧರ್ಮದ ಬಗ್ಗೆ ನಾನು ಏನನ್ನೂ ಹೇಳಿಲ್ಲ ಎಂದು ಪೊಲೀಸ್ ಅಧಿಕಾರಿ ಬಿಜೆಪಿ ಕಾರ್ಯಕರ್ತರಿಗೆ ಪ್ರತಿಕ್ರಿಯಿಸುತ್ತಿರುವ ವಿಡಿಯೊವನ್ನು ಶೇರ್ ಮಾಡಿದ ಮಮತಾ, ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಬಂಗಾಳ: ಸಿಖ್ ಪೊಲೀಸ್ ಅಧಿಕಾರಿಯನ್ನು ಖಲಿಸ್ತಾನಿ ಎಂದ ಬಿಜೆಪಿ; ಕಾನೂನು ಕ್ರಮದ ಎಚ್ಚರಿಕೆ ನೀಡಿದ ಮಮತಾ
ಸಿಖ್ ಪೊಲೀಸ್ ಅಧಿಕಾರಿ
ರಶ್ಮಿ ಕಲ್ಲಕಟ್ಟ
|

Updated on: Feb 20, 2024 | 8:29 PM

Share

ಕೋಲ್ಕತ್ತಾ ಫೆಬ್ರುವರಿ 20: ಪಶ್ಚಿಮ ಬಂಗಾಳದಲ್ಲಿ (West Bengal) ಸಿಖ್ ಅಧಿಕಾರಿಯನ್ನು ಖಲಿಸ್ತಾನಿ (Khalistani) ಎಂದು ಕರೆದ ನಂತರ, ಬಿಜೆಪಿ ಪ್ರತಿಭಟನಾಕಾರರು ಮತ್ತು ರಾಜ್ಯ ಪೊಲೀಸರ ನಡುವಿನ ಘರ್ಷಣೆ ನಡೆದಿದೆ. ಇದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಬಿಜೆಪಿಯ (BJP) ಈ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. “ನಮ್ಮ ಸಿಖ್ ಸಹೋದರರು ಮತ್ತು ಸಹೋದರಿಯರ ಪ್ರತಿಷ್ಠೆಯನ್ನು ಹಾಳುಮಾಡುವ ಈ ಪ್ರಯತ್ನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಅವರ ತ್ಯಾಗ ಮತ್ತು ನಮ್ಮ ರಾಷ್ಟ್ರಕ್ಕೆ ಅಚಲವಾದ ನಿರ್ಣಯಕ್ಕಾಗಿ ಅವರ ಪೂಜ್ಯರು ಎಂದು ಮಮತಾ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ನಾವು ಬಂಗಾಳದ ಸಾಮಾಜಿಕ ಸಾಮರಸ್ಯವನ್ನು ರಕ್ಷಿಸುವಲ್ಲಿ ದೃಢವಾಗಿ ನಿಲ್ಲುತ್ತೇವೆ ಮತ್ತು ಅದನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ ಬಂಗಾಳ ಸಿಎಂ. ಬಂಗಾಳ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕ, ಸುವೇಂದು ಅಧಿಕಾರಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಸಂದೇಶ್​​ಖಾಲಿಗೆ ಹೋಗುತ್ತಿದ್ದಾಗ ಪೊಲೀಸರು ಅವರನ್ನು ತಡೆದಿದ್ದರು. ನಂತರದ ಘರ್ಷಣೆಯಲ್ಲಿ, ಪ್ರತಿಭಟನಾಕಾರರಲ್ಲಿ ಒಬ್ಬರು ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಯನ್ನು “ಖಲಿಸ್ತಾನಿ” ಎಂದು ಕರೆದಿದ್ದಾರೆ.

ಸಿಟ್ಟಿಗೆದ್ದ ಅಧಿಕಾರಿ ಪ್ರತಿಕ್ರಿಯಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. “ನಾನು ಪೇಟ ಧರಿಸಿದ್ದೇನೆ, ಅದಕ್ಕಾಗಿಯೇ ನೀವು ನನ್ನನ್ನು ಖಲಿಸ್ತಾನಿ ಎಂದು ಕರೆಯುತ್ತಿದ್ದೀರಾ? ನಾನು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇನೆ. ನೀವು ನನ್ನ ಧರ್ಮದ ಮೇಲೆ ದಾಳಿ ಮಾಡಬಾರದು. ನಿಮ್ಮ ಧರ್ಮದ ಬಗ್ಗೆ ನಾನು ಏನನ್ನೂ ಹೇಳಿಲ್ಲ” ಎಂದು ಪೊಲೀಸ್ ಅಧಿಕಾರಿ ಹೇಳುತ್ತಿರುವುದು ವಿಡಿಯೊದಲ್ಲಿದೆ.  ನ್ಯಾಯಾಲಯದ ಆದೇಶವು ಭೇಟಿಗೆ ಅನುಮತಿ ನೀಡಿದ ನಂತರ ಬಿಜೆಪಿ ಕಾರ್ಯಕರ್ತರು ದಕ್ಷಿಣ ಬಂಗಾಳದ ಸಂದೇಶ್ ಖಾಲಿ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಚಂಡೀಗಢ ಚುನಾವಣಾ ಅಧಿಕಾರಿ ಅನಿಲ್ ಮಸಿಹ್​​ಗೆ ನೋಟಿಸ್ ನೀಡುವಂತೆ ಸುಪ್ರೀಂ ಆದೇಶ

ಬಾಂಗ್ಲಾದೇಶದ ಗಡಿಗೆ ಸಮೀಪದಲ್ಲಿರುವ ಸುಂದರ್‌ಬನ್ಸ್‌ನಲ್ಲಿರುವ ಸಂದೇಶ್​​ಖಾಲಿಯಲ್ಲಿ ಸ್ಥಳೀಯರು ತೃಣಮೂಲ ಕಾಂಗ್ರೆಸ್‌ನ ಪ್ರಬಲ ವ್ಯಕ್ತಿ ಷಹಜಹಾನ್ ಶೇಖ್ ತಮ್ಮ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಭೂಕಬಳಿಕೆಯ ಆರೋಪವೂ ಶೇಖ್ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಶೇಖ್ ಷಹಜಹಾನ್ ಪರಾರಿಯಾಗಿದ್ದಾನೆ ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ, ಸರ್ಕಾರ ಈ ಪ್ರದೇಶದಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಿದ್ದು, ಸ್ಥಳಕ್ಕೆ ಭೇಟಿ ನೀಡುವ ವಿರೋಧ ಪಕ್ಷಕ್ಕೂ ತಡೆಯೊಡ್ಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?