ಬಾಂಗ್ಲಾದೇಶದ ನಡುವಿನ ನೀರು ಹಂಚಿಕೆ ಬಗ್ಗೆ ಏಕಪಕ್ಷೀಯ ಮಾತುಕತೆ ಸರಿಯಲ್ಲ: ಮೋದಿಗೆ ಮಮತಾ ಪತ್ರ

ಇತ್ತೀಚೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮೂರನೇ ಅಧಿಕಾರಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ದೆಹಲಿಗೆ ಭೇಟಿ ನೀಡಿದಾಗ ಗಂಗಾ ಮತ್ತು ತೀಸ್ತಾ ಜಲ ಹಂಚಿಕೆ ಕುರಿತು ಚರ್ಚೆ ನಡೆಸಲಾಗಿತ್ತು.

ಬಾಂಗ್ಲಾದೇಶದ ನಡುವಿನ ನೀರು ಹಂಚಿಕೆ ಬಗ್ಗೆ ಏಕಪಕ್ಷೀಯ ಮಾತುಕತೆ ಸರಿಯಲ್ಲ: ಮೋದಿಗೆ ಮಮತಾ ಪತ್ರ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on: Jun 24, 2024 | 6:28 PM

ದೆಹಲಿ  ಜೂನ್ 24: ಪಶ್ಟಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದು, ಬಾಂಗ್ಲಾದೇಶದ (Bangladesh) ನಡುವಿನ ನೀರು ಹಂಚಿಕೆಯ ಮಾತುಕತೆಯನ್ನು ಆಕ್ಷೇಪಿಸಿದ್ದಾರೆ. ಈ ಮಾತುಕತೆಯಲ್ಲಿ ಭಾಗವಹಿಸಲು ಬಂಗಾಳವನ್ನು ಆಹ್ವಾನಿಸಲಾಗಿಲ್ಲ. “ಸಮಾಲೋಚನೆ ಮತ್ತು ರಾಜ್ಯ ಸರ್ಕಾರದ ಅಭಿಪ್ರಾಯವಿಲ್ಲದೆ ಇಂತಹ ಏಕಪಕ್ಷೀಯ ಚರ್ಚೆಗಳು ಮತ್ತು ನಿರ್ಧಾರ  ಸ್ವೀಕಾರಾರ್ಹ ಅಲ್ಲ  ಎಂದು ಮಮತಾ ಹೇಳಿದ್ದು, ಕೋಲ್ಕತ್ತಾ ಮತ್ತು ಢಾಕಾ ನಡುವಿನ ನಿಕಟ ಸಂಬಂಧವನ್ನು ಒತ್ತಿಹೇಳಿದರು.

ಇತ್ತೀಚೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮೂರನೇ ಅಧಿಕಾರಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ದೆಹಲಿಗೆ ಭೇಟಿ ನೀಡಿದಾಗ ಗಂಗಾ ಮತ್ತು ತೀಸ್ತಾ ಜಲ ಹಂಚಿಕೆ ಕುರಿತು ಚರ್ಚೆ ನಡೆಸಲಾಗಿತ್ತು.

“ಭಾರತ ಸರ್ಕಾರವು 2026 ರಲ್ಲಿ ಮುಕ್ತಾಯಗೊಳ್ಳುತ್ತಿರುವ ಭಾರತ-ಬಾಂಗ್ಲಾದೇಶ ಫರಕ್ಕಾ ಒಪ್ಪಂದವನ್ನು (1996) ನವೀಕರಿಸುವ ಪ್ರಕ್ರಿಯೆಯಲ್ಲಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ನಡುವಿನ ನೀರಿನ ಹಂಚಿಕೆಯನ್ನು ವಿವರಿಸುವ ಒಪ್ಪಂದವಾಗಿದೆ.

ಬಾಂಗ್ಲಾದೇಶ ಮತ್ತು ಭಾರತ, ನಿಮಗೆ ತಿಳಿದಿರುವಂತೆ, ಪಶ್ಚಿಮ ಬಂಗಾಳದ ಜನರಿಗೆ ದೊಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ” ಎಂದು ಮಮತಾ ಬ್ಯಾನರ್ಜಿ ಬರೆದಿದ್ದಾರೆ. ಬಂಗಾಳದ ಜನರು, ಅಂತಹ ಒಪ್ಪಂದಗಳಿಂದ  ಸಂಕಷ್ಟ ಅನುಭವಿಸುತ್ತಾರೆ ಎಂದು  ಮಮತಾ ಹೇಳಿದ್ದಾರೆ.

ಇದನ್ನೂ ಓದಿ: JP Nadda: ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಬಿಜೆಪಿಯ ಜೆಪಿ ನಡ್ಡಾ ನೇಮಕ

ಪಶ್ಚಿಮ ಬಂಗಾಳ ರಾಜ್ಯವು ಈ ಹಿಂದೆ ಹಲವಾರು ವಿಷಯಗಳಲ್ಲಿ ಬಾಂಗ್ಲಾದೇಶದೊಂದಿಗೆ ಸಹಕರಿಸಿದೆ ಎಂದ ಮಮತಾ ಭಾರತ-ಬಾಂಗ್ಲಾದೇಶ ಎನ್‌ಕ್ಲೇವ್‌ಗಳು, ಇಂಡೋ-ಬಾಂಗ್ಲಾದೇಶ ರೈಲು ಮಾರ್ಗ ಮತ್ತು ಬಸ್ ಸೇವೆಗಳ ವಿನಿಮಯವನ್ನು  ಉಲ್ಲೇಖಿಸಿದ್ದಾರೆ.

“ಆದಾಗ್ಯೂ, ನೀರು ಬಹಳ ಅಮೂಲ್ಯವಾಗಿದೆ ಮತ್ತು ಜನರ ಜೀವನಾಡಿಯಾಗಿದೆ. ಜನರ ಮೇಲೆ ತೀವ್ರ ಮತ್ತು ಪ್ರತಿಕೂಲ ಪರಿಣಾಮ ಬೀರುವ ಇಂತಹ ಸೂಕ್ಷ್ಮ ವಿಚಾರದಲ್ಲಿ ನಾವು ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ