AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಮಮತಾ ಸರ್ಕಾರಕ್ಕೆ ಒಡಿಶಾ ಸಿಎಂ ಒತ್ತಾಯ

ಪಶ್ಚಿಮ ಬಂಗಾಳದ ದುರ್ಗಾಪುರದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಒಡಿಶಾ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ. ಒಡಿಶಾ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗೆ ಶುಕ್ರವಾರ ರಾತ್ರಿ ಒಡಿಶಾದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು.

ಬಂಗಾಳ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಮಮತಾ ಸರ್ಕಾರಕ್ಕೆ ಒಡಿಶಾ ಸಿಎಂ ಒತ್ತಾಯ
Mohan Charan Majhi
ಸುಷ್ಮಾ ಚಕ್ರೆ
|

Updated on: Oct 11, 2025 | 9:19 PM

Share

ಭುವನೇಶ್ವರ, ಅಕ್ಟೋಬರ್ 11: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ (Sexual Harassment) ನಡೆದಿದೆ. ಒಡಿಶಾದ ಜಲೇಶ್ವರ ಮೂಲದ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ. ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಒತ್ತಾಯಿಸಿದ್ದಾರೆ.

ಒಡಿಶಾದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನೆರೆಯ ರಾಜ್ಯದ ಸಿಎಂ ಮಮತಾ ಬ್ಯಾನರ್ಜಿಯ ಮಧ್ಯಪ್ರವೇಶ ಮಾಡಬೇಕು. ಇದು ಅತ್ಯಂತ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಬಂಗಾಳ ಸರ್ಕಾರಕ್ಕೆ ಅಗತ್ಯವಿರುವ ಎಲ್ಲ ಸಹಾಯ ಮಾಡಲು ಸಿದ್ಧವಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

ಎಕ್ಸ್​ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಮಾಝಿ, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಯಾ ವಿದ್ಯಾರ್ಥಿನಿಯ ಮೇಲೆ ನಡೆದ ದುರದೃಷ್ಟಕರ ಸಾಮೂಹಿಕ ಅತ್ಯಾಚಾರದ ಘಟನೆ ಅತ್ಯಂತ ಖಂಡನೀಯ ಮತ್ತು ನೋವಿನಿಂದ ಕೂಡಿದೆ. ಈ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಈ ಸೂಕ್ಷ್ಮ ವಿಷಯದಲ್ಲಿ, ಕಾನೂನಿನ ಪ್ರಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಾನು ಬಲವಾಗಿ ಒತ್ತಾಯಿಸುತ್ತೇನೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್