
ಭುವನೇಶ್ವರ, ಅಕ್ಟೋಬರ್ 11: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ (Sexual Harassment) ನಡೆದಿದೆ. ಒಡಿಶಾದ ಜಲೇಶ್ವರ ಮೂಲದ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ. ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಒತ್ತಾಯಿಸಿದ್ದಾರೆ.
ಒಡಿಶಾದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನೆರೆಯ ರಾಜ್ಯದ ಸಿಎಂ ಮಮತಾ ಬ್ಯಾನರ್ಜಿಯ ಮಧ್ಯಪ್ರವೇಶ ಮಾಡಬೇಕು. ಇದು ಅತ್ಯಂತ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಬಂಗಾಳ ಸರ್ಕಾರಕ್ಕೆ ಅಗತ್ಯವಿರುವ ಎಲ್ಲ ಸಹಾಯ ಮಾಡಲು ಸಿದ್ಧವಿದ್ದೇವೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ
ପଶ୍ଚିମବଙ୍ଗର ଦୁର୍ଗାପୁରଠାରେ ଜଣେ ଓଡ଼ିଆ ଛାତ୍ରୀଙ୍କ ସହ ଘଟିଥିବା ଦୁର୍ଭାଗ୍ୟଜନକ ଗଣଦୁଷ୍କର୍ମ ଘଟଣା ଅତ୍ୟନ୍ତ ନିନ୍ଦନୀୟ ଓ ପୀଡ଼ାଦାୟକ। ଏହି ଖବର ଶୁଣି ମୁଁ ଗଭୀର ଭାବେ ମର୍ମାହତ।
ଏହି ସମ୍ବେଦନଶୀଳ ଘଟଣାରେ, ଅଭିଯୁକ୍ତମାନଙ୍କ ବିରୁଦ୍ଧରେ ଆଇନ ଅନୁଯାୟୀ ଦୃଷ୍ଟାନ୍ତମୂଳକ କାର୍ଯ୍ୟାନୁଷ୍ଠାନ ନେବା ପାଇଁ ମୁଁ ପଶ୍ଚିମବଙ୍ଗର ମାନ୍ୟବର…— Mohan Charan Majhi (@MohanMOdisha) October 11, 2025
ಎಕ್ಸ್ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಮಾಝಿ, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಯಾ ವಿದ್ಯಾರ್ಥಿನಿಯ ಮೇಲೆ ನಡೆದ ದುರದೃಷ್ಟಕರ ಸಾಮೂಹಿಕ ಅತ್ಯಾಚಾರದ ಘಟನೆ ಅತ್ಯಂತ ಖಂಡನೀಯ ಮತ್ತು ನೋವಿನಿಂದ ಕೂಡಿದೆ. ಈ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಈ ಸೂಕ್ಷ್ಮ ವಿಷಯದಲ್ಲಿ, ಕಾನೂನಿನ ಪ್ರಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಾನು ಬಲವಾಗಿ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ