ಬೆಂಗಳೂರು- ದೆಹಲಿ ವಿಮಾನದಲ್ಲಿ ಬೆಂಕಿಯ ವಿಡಿಯೋ ವೈರಲ್; ವರದಿ ಕೇಳಿದ ವಿಮಾನಯಾನ ಸಚಿವಾಲಯ

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪ್ರಯಾಣಿಕರು ಸಹಾಯಕ್ಕಾಗಿ ಕೂಗುತ್ತಿರುವಾಗ ವಿಮಾನದ ಇಂಜಿನ್ ಬಳಿಯ ಭಾಗಗಳಿಂದ ಬೆಂಕಿ ಹೊರಬರುವುದನ್ನು ಕಾಣಬಹುದು.

ಬೆಂಗಳೂರು- ದೆಹಲಿ ವಿಮಾನದಲ್ಲಿ ಬೆಂಕಿಯ ವಿಡಿಯೋ ವೈರಲ್; ವರದಿ ಕೇಳಿದ ವಿಮಾನಯಾನ ಸಚಿವಾಲಯ
ಇಂಡಿಗೋ ವಿಮಾನದಲ್ಲಿ ಬೆಂಕಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 29, 2022 | 8:26 AM

ನವದೆಹಲಿ: ವಿಮಾನದಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿಗೆ (Bangalore) ತೆರಳಬೇಕಿದ್ದ ಇಂಡಿಗೋ ವಿಮಾನವನ್ನು (Indigo Plane) ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಇಂಜಿನ್​ನಲ್ಲಿ ಜ್ವಾಲೆ ಕಾಣಿಸಿಕೊಂಡ ನಂತರ ಇಂಡಿಗೋ ವಿಮಾನ 6E-2131ದಿಂದ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಎಲ್ಲಾ 177 ಪ್ರಯಾಣಿಕರು ಮತ್ತು 7 ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ.

ತಮಗಾದ ಈ ಅನುಭವವನ್ನು ಆ ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ. ವಿಮಾನ ಟೇಕಾಫ್ ಆಗುವ ಸಂದರ್ಭದಲ್ಲೇ ಬೆಂಕಿ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಮತ್ತೆ ಕೆಳಗಿಳಿಸಲಾಯಿತು. ನಾನು ಟೇಕಾಫ್ ವಿಡಿಯೋ ಮಾಡಲು ಮೊಬೈಲ್ ಹೊರತೆಗೆದಿದ್ದೆ. ಆದರೆ, ನನ್ನ ಮೊಬೈಲ್​ಗೆ ಸೆರೆ ಸಿಕ್ಕ ದೃಶ್ಯ ಇದು ಎಂದು ಪ್ರಯಾಣಿಕರಾದ ಪ್ರಿಯಾಂಕಾ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪ್ರಯಾಣಿಕರು ಸಹಾಯಕ್ಕಾಗಿ ಕೂಗುತ್ತಿರುವಾಗ ವಿಮಾನದ ಇಂಜಿನ್ ಬಳಿಯ ಭಾಗಗಳಿಂದ ಬೆಂಕಿ ಹೊರಬರುವುದನ್ನು ಕಾಣಬಹುದು.

ಇದನ್ನೂ ಓದಿ: ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ: ದಿಲ್ಲಿ ನಿಲ್ದಾಣದಲ್ಲಿ ಹೈಅಲರ್ಟ್

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಕ್ಷಣ ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಗೆ ಫೋನ್ ಮಾಡಿ ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿವೆ. ಈ ವಿಮಾನದಲ್ಲಿ 177 ಪ್ರಯಾಣಿಕರು ಮತ್ತು 7 ಸಿಬ್ಬಂದಿ ಇದ್ದರು.

ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಈ ಬಗ್ಗೆ ತನಿಖೆಗೆ ಆದೇಶಿಸಿದೆ. ಈ ಘಟನೆ ನಡೆದ ತಕ್ಷಣ ಇಂಡಿಗೋ ಏರ್‌ಲೈನ್ಸ್ ಹೇಳಿಕೆ ಬಿಡುಗಡೆ ಮಾಡಿದ್ದು, “ದೆಹಲಿಯಿಂದ ಬೆಂಗಳೂರಿಗೆ ಹಾರಾಟ ನಡೆಸುತ್ತಿದ್ದ ವಿಮಾನ 6E2131 ಟೇಕ್-ಆಫ್ ರೋಲ್‌ನಲ್ಲಿದ್ದಾಗ ತಾಂತ್ರಿಕ ದೋಷವನ್ನು ಅನುಭವಿಸಿತು. ತಕ್ಷಣ ಪೈಲಟ್ ಟೇಕ್-ಆಫ್ ಅನ್ನು ಸ್ಥಗಿತಗೊಳಿಸಿದರು. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಈ ವಿಮಾನದಲ್ಲಿದ್ದ ಪ್ರಯಾಣಿಕರಿಗಾಗಿ ಬೇರೆ ವಿಮಾನವನ್ನು ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ.” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 am, Sat, 29 October 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್