AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ; ಟೇಕಾಫ್​ಗೂ ಮುನ್ನವೇ ಬಂದಿತ್ತೇ ವೈಫಲ್ಯದ ಸಂದೇಶ?

ಇಂಡಿಗೋ ವಿಮಾನದ ಎರಡನೇ ಎಂಜಿನ್​ ವೈಫಲ್ಯದ ಸಂದೇಶ ನೀಡಿತ್ತು ಎಂದಿವೆ ಡಿಜಿಸಿಎ ಮೂಲಗಳು.

ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ; ಟೇಕಾಫ್​ಗೂ ಮುನ್ನವೇ ಬಂದಿತ್ತೇ ವೈಫಲ್ಯದ ಸಂದೇಶ?
ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಚಿತ್ರImage Credit source: PTI
TV9 Web
| Edited By: |

Updated on: Oct 29, 2022 | 10:09 AM

Share

ನವದೆಹಲಿ: ಬೆಂಗಳೂರಿಗೆ ಹೊರಟಿದ್ದ ಇಂಡಿಗೋ (IndiGo) ವಿಮಾನದ ಎಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಗೆ ಸಂಬಂಧಿಸಿ ವಿಸ್ತೃತ ತನಿಖೆ ನಡೆಸಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ (DGCA) ಶನಿವಾರ ಬೆಳಿಗ್ಗೆ ತಿಳಿಸಿದೆ. ದೆಹಲಿಯಿಂದ ಬೆಳಗೂರಿಗೆ ಹೊರಟಿದ್ದ 6E-2131 ನಂಬರಿನ ಇಂಡಿಗೋ ವಿಮಾನ ಟೇಕಾಫ್‌ ಆಗುತ್ತಿದ್ದಂತೆ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಪೈಲಟ್ ವಿಮಾನವನ್ನು ಲ್ಯಾಂಡ್ ಮಾಡಿದ್ದರು. ವಿಮಾನದಲ್ಲಿದ್ದ 184 ಮಂದಿಗೆ ಯಾವುದೇ ಅಪಾಯವಾಗಿಲ್ಲ.

‘ವಿಸ್ತೃತ ತನಿಖೆ ನಡೆಸುವುದು ನಮ್ಮ ಆದ್ಯತೆಯಾಗಿದೆ. ಎಂಜಿನ್​ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದನ್ನು ಪತ್ತೆ ಮಾಡಬೇಕಿದೆ. ಅದೃಷ್ಟವಶಾತ್, ಬೆಂಕಿಯನ್ನು ನಂದಿಸಲಾಗಿದ್ದು, ವಿಮಾನ ಸುರಕ್ಷಿತವಾಗಿದೆ’ ಎಂದು ಡಿಜಿಸಿಎ ಮುಖ್ಯಸ್ಥ ಅರುಣ್ ಕುಮಾರ್ ‘ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು- ದೆಹಲಿ ವಿಮಾನದಲ್ಲಿ ಬೆಂಕಿಯ ವಿಡಿಯೋ ವೈರಲ್; ವರದಿ ಕೇಳಿದ ವಿಮಾನಯಾನ ಸಚಿವಾಲಯ

IAEV2500 ಎಂಜಿನ್​ಗೆ ಬೆಂಕಿ ತಗುಲಿತ್ತು. ಈ ಎಂಜಿನ್​ ಅನ್ನು ‘ಇಂಟರ್​ನ್ಯಾಷನಲ್ ಏರೋ ಎಂಜಿನ್ಸ್ ಎಜಿ’ ನಿರ್ಮಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಈ ಎಂಜಿನ್​ನಲ್ಲಿ ಈ ಹಿಂದೆ ಎಂದಾದರೂ ಇಂಥ ಘಟನೆ ಸಂಭವಿಸಿತ್ತೇ ಎಂಬುದನ್ನು ಡಿಜಿಸಿಎ ಅಧ್ಯಯನ ನಡೆಸಲಿದೆ. ಜತೆಗೆ, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನೂ ಶೋಧಿಸಲಿದೆ. ವಿಸ್ತೃತ ತನಿಖೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಡಿಜಿಸಿಎ ತಿಳಿಸಿದೆ.

6E-2131 ನಂಬರಿನ ಇಂಡಿಗೋ ವಿಮಾನದ ಎರಡನೇ ಎಂಜಿನ್​ ವೈಫಲ್ಯದ ಸಂದೇಶ ನೀಡಿತ್ತು. ಟೇಕಾಫ್ ಸಂದರ್ಭದಲ್ಲೇ ಈ ಸಂದೇಶ ಬಂದಿತ್ತು. ಭಾರಿ ಸದ್ದಿನೊಂದಿಗೆ ಬೆಂಕಿ ನಂದಿಸುವ ಸಾಧನ ತೆರೆದುಕೊಂಡಿತ್ತು ಎಂದು ಡಿಜಿಸಿಎ ಮೂಲಗಳು ಹೇಳಿವೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಘಟನೆ ಬಗ್ಗೆ ಶೀಘ್ರ ವರದಿ ನೀಡುವಂತೆ ವಿಮಾನಯಾನ ಸಚಿವಾಲಯ ಡಿಜಿಸಿಎಗೆ ಸೂಚಿಸಿದೆ.

ಈ ಮಧ್ಯೆ, ಘಟನೆಗೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ: ದಿಲ್ಲಿ ನಿಲ್ದಾಣದಲ್ಲಿ ಹೈಅಲರ್ಟ್

Follow Us
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ