ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರಿನ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಸಾವು

ಮಧ್ಯಪ್ರದೇಶದ ರಾಜ್‌ಗಢದಲ್ಲಿ ಬಸ್ ಸೇತುವೆಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯವಾಗಿದ್ದು, ಓರ್ವ ಪೊಲೀಸ್​​ ಸಿಬ್ಬಂದಿ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರ ಪ್ರಕಾರ ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಸುಮಾರು ನಾಲ್ವರು ಪ್ರಯಾಣಿಕರು ಹೊರಕ್ಕೆ ಎಸೆಯಲ್ಪಟ್ಟು, 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ.

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರಿನ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಸಾವು
ಮೃತ ಇನ್‌ಸ್ಪೆಕ್ಟರ್ ರವಿ ಕೆ.ವಿ.
Image Credit source: Prajwal D'Souza X Account

Updated on: Aug 28, 2026 | 1:28 PM

ಭೋಪಾಲ್​​, ಆಗಸ್ಟ್​​ 28: ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದು ಉರುಳಿದ ಪರಿಣಾಮ ಬೆಂಗಳೂರು ಪೊಲೀಸ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಶುಕ್ರವಾರ ಬೆಳಗ್ಗೆ ಸಂಭಿಸಿದೆ. ಅಫಘಾತದಲ್ಲಿ 11 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮತ್ತೋರ್ವ ಪೊಲೀಸ್​​ ಸಿಬ್ಬಂದಿ ಸ್ಥಿತಿ ಗಂಭೀರ

ಅಪಘಾತದಲ್ಲಿ ಮೃತಪಟ್ಟವರನ್ನು ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ರವಿ ಕೆ.ವಿ. ಸೇರಿ ಬಸ್ ಚಾಲಕ ವಿಕಾಸ್ ಶುಕ್ಲಾ, ಬೆಲಾಲ್ ಅಲಿ ಹಾಗೂ ಜ್ಯೋತಿರಾದಿತ್ಯ ಸಿಂಗ್ ಗೌಡ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಸೈಬರ್ ಕ್ರೈಂ ತಂಡದ ಇತರ ಮೂವರು ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ಸಬ್‌ಇನ್‌ಸ್ಪೆಕ್ಟರ್ ರಮೇಶ್ ನಾಯಕ್, ಎಎಸ್‌ಐ ಶ್ರೀನಿವಾಸ್ ಹಾಗೂ ತಾಂತ್ರಿಕ ಸಿಬ್ಬಂದಿ ವಿಶ್ವನಾಥ್​​ಗೆ ಪೆಟ್ಟಾಗಿದ್ದು, ಈ ಪೈಕಿ ಶ್ರೀನಿವಾಸ್ ಅವರ ಸ್ಥಿತಿ ಗಂಭೀರವಾಗಿದೆ. ಬಸ್ ಬೆಂಗಳೂರಿನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಆರೋಪಿಯೊಬ್ಬನನ್ನು ಹುಡುಕಿಕೊಂಡು ಬೆಂಗಳೂರಿನ ಸೈಬರ್ ಕ್ರೈಂ ತಂಡ ಮಧ್ಯಪ್ರದೇಶಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಪೊಲೀಸರ ಪ್ರಕಾರ, ಬಸ್ ನಿಯಂತ್ರಣ ತಪ್ಪಿ ಭೋಪಾಲ್ ಬೈಪಾಸ್‌ನ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಸುಮಾರು ನಾಲ್ವರು ಪ್ರಯಾಣಿಕರು ಹೊರಕ್ಕೆ ಎಸೆಯಲ್ಪಟ್ಟು, 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ.

ಇದನ್ನೂ ಓದಿ: ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡು ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾವು

ಅಪಘಾತದಲ್ಲಿ ಉತ್ತರ ಪ್ರದೇಶದ ಹಲವು ಪ್ರಯಾಣಿಕರೂ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಅಮಿತ್ ಕುಮಾರ್ ಪ್ರತಾಪ್, ವಿನೋದ್ ಕುಮಾರ್ ಸಿಂಗ್, ಮೀನು ಸಿಂಗ್, ರಕ್ಷಿತ್ ಸಿಂಗ್, ಸುರೇಂದ್ರ ಪ್ರತಾಪ್ ಸಿಂಗ್, ರವಿ ಶರ್ಮಾ, ಎಂಟು ವರ್ಷದ ಪಾರ್ಥ್ ಶರ್ಮಾ, ಸುಮನ್ ಶರ್ಮಾ, ಶ್ರೀನಿವಾಸ್, ಕೇಶವ್, ರಮೇಶ್ ನಾಯಕ್, ಸೋನು ಹಾಗೂ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಸುರೇಂದ್ರ ಪ್ರತಾಪ್ ಸಿಂಗ್, ಸುಮನ್ ಶರ್ಮಾ ಹಾಗೂ ಶ್ರೀನಿವಾಸ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಭೋಪಾಲ್‌ನ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Published On - 1:27 pm, Fri, 28 August 26

Loading...
Unable to load recommendations.
Follow Us