ವಯನಾಡ್ ದುರಂತದ ಬಗ್ಗೆ ರಾಹುಲ್ ಗಾಂಧಿ ಇದುವರೆಗೂ ಏಕೆ ಪ್ರಸ್ತಾಪಿಸಿಲ್ಲ?; ತೇಜಸ್ವಿ ಸೂರ್ಯ ವಾಗ್ದಾಳಿ
ಕರ್ನಾಟಕದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೇರಳದ ವಯನಾಡು ದುರಂತದಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದಾರೆ. ತಾವು ವಯನಾಡಿನ ಸಂಸದರಾಗಿದ್ದ ಅವಧಿಯಲ್ಲಿ ಸದನದಲ್ಲಿ ಇದುವರೆಗೂ ಒಮ್ಮೆಯೂ ರಾಹುಲ್ ಗಾಂಧಿ ಏಕೆ ಈ ಬಗ್ಗೆ ಪ್ರಸ್ತಾಪಿಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ.
ನವದೆಹಲಿ: ಕೇರಳದ ವಯನಾಡಿನಲ್ಲಿ ಉಂಟಾಗಿರುವ ಭೂಕುಸಿತದಿಂದ 180ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹೆಣಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಯುತ್ತಲೇ ಇದೆ. ಈ ದುರಂತದ ಬಗ್ಗೆ ಲೋಕಸಭೆಯಲ್ಲೂ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸದನದಲ್ಲಿ ವಯನಾಡಿನ ಸಂಸದರಾಗಿದ್ದ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ವಯನಾಡ್ ಸಂಸದರಾಗಿದ್ದ ಅವಧಿಯಲ್ಲಿ ಭೂಕುಸಿತ ಮತ್ತು ಪ್ರವಾಹಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ವಿರೋಧ ಪಕ್ಷದ ನಾಯಕ ವಿಫಲರಾಗಿದ್ದಾರೆ ಎಂದು ತೇಜಸ್ವಿ ಸೂರ್ಯ ಟೀಕಿಸಿದ್ದಾರೆ. ಇಲ್ಲಿಯವರೆಗೆ ಭೂಕುಸಿತದಿಂದ 180ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ವಯನಾಡ್ ಭೂಕುಸಿತದ ಕುರಿತು ಮಾತನಾಡಿರುವ ತೇಜಸ್ವಿ ಸೂರ್ಯ, ರಾಹುಲ್ ಗಾಂಧಿ ವಯನಾಡ್ ಸಂಸದರಾದ ನಂತರ ಕಳೆದ 1800 ದಿನಗಳಲ್ಲಿ ಅವರು ಸಂಸತ್ತಿನಲ್ಲಿ ಒಮ್ಮೆಯೂ ಭೂಕುಸಿತ ಮತ್ತು ಪ್ರವಾಹದ ಬಗ್ಗೆ ಪ್ರಸ್ತಾಪಿಸಲಿಲ್ಲ. 2020ರಲ್ಲಿ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜನರ ಸ್ಥಳಾಂತರಕ್ಕೆ ಸಲಹೆ ನೀಡಿತ್ತು. ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ 4000 ಕುಟುಂಬಗಳ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ವಯನಾಡನ್ನು ಪ್ರತಿನಿಧಿಸುವ ಸಂಸದರು ಈ ವಿಷಯವನ್ನು ಇಲ್ಲಿಯವರೆಗೆ ಈ ಬಗ್ಗೆ ಪ್ರಸ್ತಾಪಿಸಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: Rahul Gandhi: ನಮ್ಮ ತಂದೆ ತೀರಿಕೊಂಡಾಗ ಆದ ನೋವಾಗುತ್ತಿದೆ; ವಯನಾಡ್ ಸಂತ್ರಸ್ತರ ಭೇಟಿ ಬಳಿಕ ಭಾವುಕರಾದ ರಾಹುಲ್ ಗಾಂಧಿ
‘ಕೆಲವು ಧಾರ್ಮಿಕ ಸಂಘಟನೆಗಳ ಒತ್ತಡಕ್ಕೆ ಮಣಿದು ಅಕ್ರಮ ಒತ್ತುವರಿ ತೆರವು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕೇರಳ ಅರಣ್ಯ ಸಚಿವರೇ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದಾರೆ’ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
After Anurag Thakur yesterday’s assault today it was @Tejasvi_Surya’s turn to rip @RahulGandhi in the Parliament.
These are the young guns who are the future of the country.
Share this Maximum Please 🙏🏼 pic.twitter.com/nWhTs3rrDr
— Vibhor Anand🇮🇳(हिंसक हिंदू) (@AlphaVictorVA) July 31, 2024
ಸದನದಲ್ಲಿ ನಿಯಮ 197ರ ಅಡಿಯಲ್ಲಿ ಪ್ರಾಕೃತಿಕ ವಿಕೋಪ ಕುರಿತು ಗಮನ ಸೆಳೆಯುವ ಪ್ರಸ್ತಾವನೆ ಕುರಿತು ಮಾತನಾಡಿದ ತೇಜಸ್ವಿ ಸೂರ್ಯ, ಕಳೆದ 5 ವರ್ಷಗಳಲ್ಲಿ ಕೇರಳದಲ್ಲಿ ಹಲವು ಪ್ರಕೃತಿ ವಿಕೋಪಗಳು, ಅದರಲ್ಲೂ ಭೂಕುಸಿತಗಳು ಸಂಭವಿಸಿದ್ದು, ಹಲವು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವ ಕ್ರಮ ಕೈಗೊಂಡಿವೆ? ಎಂದು ಪ್ರಶ್ನಿಸಿದ್ದಾರೆ.
5 ವರ್ಷಗಳ ಕಾಲ ವಯನಾಡ್ ಸಂಸದರಾಗಿದ್ದ ನಾಯಕ ಅಲ್ಲಿನ ಪ್ರಕೃತಿ ವಿಕೋಪದ ಬಗ್ಗೆ ಧ್ವನಿ ಎತ್ತಲಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಇದಾದ ನಂತರ ಪ್ರತಿಪಕ್ಷಗಳ ಸದಸ್ಯರು ಲೋಕಸಭೆಯಲ್ಲಿ ಗದ್ದಲ ಎಬ್ಬಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:20 pm, Thu, 1 August 24