Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು

ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು.

Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು
ಅಪಘಾತ
Image Credit source: The Hindu

Updated on: Mar 04, 2026 | 10:49 AM

ಚಿತ್ತೂರು, ಮಾರ್ಚ್​ 04: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ(Accident)ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ.

ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಚಾಲಕ ನಿದ್ದೆ ಮಂಪರಿನಲ್ಲಿದ್ದನೋ ಅಥವಾ ಕಾರಿನ ವೇಗದಿಂದಾಗಿ ನಿಯಂತ್ರಣ ತಪ್ಪಿದ್ದನೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.  ಮೃತರನ್ನು ಬೆಂಗಳೂರು ರಾಜಾಜಿನಗರದ ನಿವಾಸಿ, ಮೋಹನ್ ದಾಸ್(71), ನಾಗರಾಜ್(61) ಕುಸುಮ(61), ಜಯಂತಿ(59), ಪೂಜಾ(33) ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಸ್ಥಳೀಯರ ಮಾಹಿತಿಯ ಆಧಾರದ ಮೇಲೆ, ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. ಅವರ ವಿವರಗಳನ್ನು ಸಹ ಸಂಗ್ರಹಿಸಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Wed, 4 March 26

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us