ಕಲ್ಲಿದ್ದಲು ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ್ನತ್ತ ಸಾಗುತ್ತಿದೆ. ವಿದ್ಯುತ್ ಬಳಕೆ ದ್ವಿಗುಣಗೊಳ್ಳುವ ಸಂದರ್ಭದಲ್ಲಿ ಕಲ್ಲಿದ್ದಲು ಉತ್ಪಾದನೆ ಹೆಚ್ಚಬೇಕಿದೆ. ಈ ನಿಟ್ಟಿನಲ್ಲಿ 6ನೇ ಹಂತದ 133 ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ 5 ನೇ ಹಂತದ 64 ಕಲ್ಲಿದ್ದಲು ಗಣಿಗಳನ್ನ ಯಶಸ್ವಿಯಾಗಿ ಹರಾಜು ಮಾಡಲಾಗಿದೆ. ಅಲ್ಲದೇ 5 ನೇ ಹಂತದ ಸೆಕೆಂಡ್ ಅಟೆಮ್ಟ್ನಲ್ಲಿ 8 ಗಣಿಗಳ ಹರಾಜು ಪ್ರಾರಂಭಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು. ಕಲ್ಲಿದ್ದಲು ಸಚಿವಾಲಯದಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗಿದ್ದು, ಉದ್ಯಮ ಸ್ನೇಹಿ ವಾತಾವರಣ ರೂಪಿಸಲಾಗಿದೆ. ಹೂಡಿಕೆದಾರರು ಹೂಡಿಕೆ ಮಾಡಲು ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ. ಮುಂದಿನ 25 – 30 ವರ್ಷಗಳ ವರೆಗೆ ಕಲ್ಲಿದ್ದಲಿಗೆ ಬೇಡಿಕೆ ಹೆಚ್ಚುತ್ತಲೇ ಹೋಗಲಿದೆ ಎಂದು ಪ್ರಲ್ಹಾದ್ ಜೋಶಿ ಅಭಿಪ್ರಾಯ ಪಟ್ಟರು.
ಇತರ ಅಭಿವೃದ್ಧಿ ಹೊಂದಿದ ಆರ್ಥಿಕತೆಗಳಿಗೆ ಹೋಲಿಸಿದರೆ ಭಾರತವು ಪ್ರಸ್ತುತ ತಲಾ ವಿದ್ಯುತ್ ಬಳಕೆಯ ಹತ್ತನೇ ಒಂದು ಭಾಗವನ್ನು ಹೊಂದಿಲ್ಲ. 2040ರ ವೇಳೆಗೆ ತಲಾ ಬಳಕೆ ದ್ವಿಗುಣಗೊಳ್ಳಲಿದೆ. ಇದಕ್ಕಾಗಿ ಕಲ್ಲಿದ್ದಲು ಅಗತ್ಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಉತ್ತಮ ತಾಂತ್ರಿಕ ಪ್ರಕ್ರಿಯೆಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಜೋಶಿ ಹೂಡಿಕೆದಾರರಿಗೆ ಮಾಹಿತಿ ನೀಡಿದರು. ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ, ಕೋಲ್ ಇಂಡಿಯಾ ಲಿಮಿಟೆಡ್‌ನ ಅಧ್ಯಕ್ಷರಾದ ಪ್ರಮೋದ್ ಅಗರವಾಲ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.