Independence Day 2023: ಭಾರತದ ಸ್ವಾತಂತ್ರ್ಯದ ಬಗ್ಗೆ ನಿಮ್ಮ ಮಗುವಿಗೆ ಕಲಿಸಲು ಅತ್ಯುತ್ತಮ ಮಾರ್ಗಗಳು

Parenting Tips: ಮನೆಯಲ್ಲಿ ಏನು ಹೇಳಿಕೊಡುತ್ತಾರೋ ಮಗು ಬೆಳೆದಂತೆ ಅದನ್ನೇ ಕಲಿಯುತ್ತದೆ. ಹಾಗಾಗಿ ಪೋಷಕರು ಯಾವಾಲೂ ತಮ್ಮ ಮಕ್ಕಳಿಗೆ ಸದ್ಗುಣಗಳನ್ನು ಕಲಿಸುತ್ತಾರೆ. ಇದೇ ರೀತಿ ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮವನ್ನು ಮೂಡಿಸುವುದು ಅಷ್ಟೇ ಮುಖ್ಯ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬ ಮಾತಿದೆ. ನಿಮ್ಮ ಮಕ್ಕಳಿಗೆ ದೇಶಭಕ್ತಿ ಪಾಠವನ್ನು ಹೇಳುತ್ತಾ ಆ ಮಗುವನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸಿದಾಗ ಆ ಮಕ್ಕಳು ದೇಶವನ್ನು ಭವಿಷ್ಯದಲ್ಲಿ ಉತ್ತಮವಾಗಿ ರೂಪಿಸುತ್ತಾರೆ. ಈ ಸ್ವಾತಂತ್ರ್ಯ ದಿನದಂದು ಭಾರತದ ಸ್ವಾತಂತ್ರ್ಯದ ಬಗೆಗೆಗಿನ ಕೆಲವೊಂದು ಸಂಗತಿಗಳನ್ನು ಮಕ್ಕಳಿಗೆ ಕಲಿಸಿಕೊಡುವ ಮೂಲಕ ಅವರಲ್ಲಿ ದೇಶಭಕ್ತಿಯ ಭಾವನೆಯಲ್ಲಿ ಬಿತ್ತುವ ಕೆಲಸ ಮಾಡಿ.

Independence Day 2023: ಭಾರತದ ಸ್ವಾತಂತ್ರ್ಯದ ಬಗ್ಗೆ ನಿಮ್ಮ ಮಗುವಿಗೆ ಕಲಿಸಲು ಅತ್ಯುತ್ತಮ ಮಾರ್ಗಗಳು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 15, 2023 | 12:05 PM

ಇಂದು ನಮ್ಮ ಭಾರತವು 77 ನೇ ಸ್ವಾತಂತ್ರೋತ್ಸವವನ್ನು ಆಚರಿಸುತ್ತಿದೆ. ಈ ಮಹತ್ವದ ದಿನವು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ ಇದು ಅನೇಕ ವರ್ಷಗಳ ಬ್ರಿಟೀಷ್ ವಸಾಹತು ಆಳ್ವಿಕೆಯಿಂದ ಮಾತೃಭೂಮಿಯನ್ನು ಮುಕ್ತಗೊಳಿಸಲು ತ್ಯಾಗ ಬಲಿದಾನ ಮಾಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸುತ್ತದೆ. ಮಹಾನ್ ಹೋರಾಟಗಾರರ ಹೋರಾಟದ ಫಲವಾಗಿ ನಾವಿಂದು ಮುಕ್ತವಾಗಿ ಜೀವಿಸುತ್ತಿದ್ದೇವೆ. ಸ್ವಾತಂತ್ರ್ಯದ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಆದರೆ ಪುಟ್ಟ ಮಕ್ಕಳಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿಲ್ಲ ಹಾಗಾಗಿ ಈ ಸ್ವಾತಂತ್ರ್ಯ ದಿನದಂದು ದೇಶದ ಶ್ರೀಮಂತ ಇತಿಹಾಸ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಮಕ್ಕಳಿಗೆ ಕಲಿಸುವುದು ಬಹಳ ಮುಖ್ಯ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬ ಮಾತಿದೆ. ಈ ಮಾತಿಗೆ ಅನುಗುಣವಾಗಿ ನಿಮ್ಮ ಮಕ್ಕಳಿಗೆ ದೇಶಭಕ್ತಿಯ ಪಾಠವನ್ನು ಹೇಳುತ್ತಾ ಆ ಮಗುವನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸಿದಾಗ ಆ ಮಕ್ಕಳು ದೇಶವನ್ನು ಭವಿಷ್ಯದಲ್ಲಿ ಉತ್ತಮವಾಗಿ ರೂಪಿಸುತ್ತಾರೆ. ಈ ಸಲುವಾಗಿ ಈ ಸ್ವಾತಂತ್ರ್ಯ ದಿನದಂದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಬಗ್ಗೆ ತಿಳಿಸಿಕೊಡಿ. ಭಾರತದ ಸ್ವಾತಂತ್ರ್ಯ ದಿನದ ಬಗ್ಗೆ ನಿಮ್ಮ ಮಕ್ಕಳಿಗೆ ಕಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಭಾರತದ ಸ್ವಾತಂತ್ರ್ಯದ ಬಗ್ಗೆ ನಿಮ್ಮ ಮಗುವಿಗೆ ಕಲಿಸಲು ಅತ್ಯುತ್ತಮ ಮಾರ್ಗಗಳು

ಸ್ವಾತಂತ್ರ್ಯ ಹೋರಾಟಗಾರರ ಕಥೆಯನ್ನು ಹೇಳಿ:

ಭಾರತದ ಸ್ವಾತಂತ್ರ್ಯದ ಬಗ್ಗೆ ಮಕ್ಕಳಿಗೆ ಕಲಿಸಲು ಉತ್ತಮ ಮಾರ್ಗವೆಂದರೆ ಅವರಿಗೆ ಸ್ವಾತಂತ್ರ್ಯ ಹೋರಾಟಗಾರರ ಕಥೆಗಳನ್ನು ಹೇಳುವುದು. ಖುದಿರಾಮ್ ಬೋಸ್ ರಂತಹ ಯುವ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅವರಿಗೆ ಕಥೆ ಹೇಳಿ. ಅವರು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದರು ಮತ್ತು ಮಾತೃಭೂಮಿಯ ಸ್ವಾತಂತ್ರ್ಯಕ್ಕಾಗಿ ಹೋರಾಡಲು ಅನೇಕರನ್ನು ಪ್ರೇರೆಪಿಸಿದರು ಎಂಬುದನ್ನು ಮಕ್ಕಳಿಗೆ ವಿವರಿಸಿ. ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಇನ್ನಿತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಕಥೆ ಹೇಳುತ್ತಾ, ನಿಮ್ಮ ಮಕ್ಕಳಿಗೆ ಸಣ್ಣ ಜೀವನ ಪಾಠವನ್ನು ಹೇಳಿಕೊಡಿ. ಇದರಿಂದ ಮಕ್ಕಳು ಕ್ರಮೇಣ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾ ದೇಶಭಕ್ತಿಯನ್ನು ಬೆಳೆಸಿಕೊಳ್ಳುತ್ತಾರೆ.

ರಾಷ್ಟ್ರದ್ವಜದ ಮಹತ್ವವನ್ನು ಹೇಳಿ:

ನೀವು ಮುಖ್ಯವಾಗಿ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯ ಮಹತ್ವ ಮತ್ತು ಅದಕ್ಕೆ ಯಾವ ರೀತಿ ಗೌರವ ಸಲ್ಲಿಸಬೇಕು ಎಂಬ ಪಾಠವನ್ನು ಮಕ್ಕಳಿಗೆ ಕಲಿಸಿಕೊಡಬೇಕು. ಸಾಮಾನ್ಯವಾಗಿ ಮಕ್ಕಳು ತಮಗೆ ಅರಿವಿಲ್ಲದಂತೆ ಧ್ವಜವನ್ನು ಬಿಸಾಡಿಬಿಡುತ್ತಾರೆ. ಇಂತಹ ಸಂದರ್ಭದಲ್ಲಿ ರಾಷ್ಟ್ರಧ್ವಜದ ಮಹತ್ವದ ಬಗ್ಗೆ ಅವರಿಗೆ ತಿಳಿಸಿ. ರಾಷ್ಟ್ರಧ್ವಜವನ್ನು ಯಾವ ರೀತಿ ಗೌರವಿಸಬೇಕು ಎಂಬುದನ್ನು ಕಲಿಸಿಕೊಡಿ.

ಟಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಹಾಗೂ ದೇಶಭಕ್ತಿ ಚಲನಚಿತ್ರಗಳನ್ನು ತೋರಿಸಿ:

ಈ ದಿನ ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಮಕ್ಕಳಿಗೆ ತೋರಿಸಿ. ಅಲ್ಲದೆ ಇಂದು ದೇಶಭಕ್ತಿಯ ಹಾಗೂ ಸ್ವಾತಂತ್ರ್ಯ ಹೋರಾಟದ ಕುರಿತ ಚಲನಚಿತ್ರಗಳನ್ನು ಮಕ್ಕಳಿಗೆ ತೋರಿಸಿ. ಇದರಿಂದ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಹಲವಾರು ಹೋರಾಟಗಾರರ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಈ ರೀತಿಯ ಘಟನೆಗಳು ಮಕ್ಕಳಲ್ಲಿ ದೇಶಪ್ರೇಮದ ಭಾವನೆಯನ್ನು ಮೂಡಿಸುತ್ತದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನದಂದು ಈ ಕೆಟ್ಟ ಅಭ್ಯಾಸಗಳನ್ನು ದೂರು ಮಾಡಿ, ಆರೋಗ್ಯಕ್ಕೆ ಹೆಚ್ಚು ಗಮನ ನೀಡಿ

ದೇಶಭಕ್ತಿಗೀತೆಗಳನ್ನು ಹೇಳಿಕೊಡಿ:

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಅನೇಕ ಬರಹಗಾರರು ಕವಿಗಳು ದೇಶಭಕ್ತಿಗೀತೆಗಳನ್ನು ರಚಿಸಿದ್ದಾರೆ. ಈ ದಿನ ಅವರಿಗೆ ದೇಶಭಕ್ತಿಗೀತೆಯನ್ನು ಹೇಳಿಕೊಡಿ ಹಾಗೂ ಅವರಲ್ಲಿಯೂ ಈ ಗೀತೆಗಳನ್ನು ಹಾಡಲು ಹೇಳಿ. ನೀವು ನಿಮ್ಮ ಮಕ್ಕಳಿಗೆ ದೇಶಭಕ್ತಿ ಗೀತೆಗಳನ್ನು ಪ್ರೀತಿಸುವಂತೆ ಮಾಡಲು ಯಾವಾಗಲೂ ದೇಶಕ್ಕೆ ಸಂಬಂಧಿಸಿದ ಭಕ್ತಿಗೀತೆಗಳನ್ನು ಹಾಡಿಸಿ ಹಾಗೂ ದೇಶಪ್ರೇಮದ ಕಥೆಗಳನ್ನು ಹೇಳಿಕೊಡಿ. ಬಾಲ್ಯದಿಂದಲೇ ಇವುಗಳನ್ನು ಕಲಿಸುವುದರಿಂದ ಮಕ್ಕಳಲ್ಲಿ ಆಳವಾದ ದೇಶಪ್ರೇಮ ಬೇರೂರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್