ಜನಗಣತಿಯಲ್ಲಿ ಜಾತಿ ಗಣತಿ ಸೇರ್ಪಡೆ; ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಹೇಳಿದ್ದೇನು?

ಮುಂದಿನ ಜನಗಣತಿಯಲ್ಲಿ ಜಾತಿ ಗಣತಿ ಸೇರ್ಪಡೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಘೋಷಿಸಿದೆ. ಇದಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಮುಂದಿನ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರವು ರಾಜಕೀಯ ಮುಖಾಮುಖಿಗೆ ನಾಂದಿ ಹಾಡಿದೆ. ಕಾಂಗ್ರೆಸ್ ಇದನ್ನು ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ ಎಂದು ಕರೆದಿದೆ. ಈ ಬಗ್ಗೆ ಎಕ್ಸ್​ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇದು "ಬೆಟರ್ ಲೇಟ್ ದ್ಯಾನ್ ನೆವರ್" ಎಂದು ಟೀಕಿಸಿದ್ದಾರೆ. ಏಪ್ರಿಲ್ 9ರಂದು ಅಹಮದಾಬಾದ್‌ನಲ್ಲಿ ನಡೆದ ಎಐಸಿಸಿ ಸಮಾವೇಶದಲ್ಲಿ ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಿ ಕಾಂಗ್ರೆಸ್ ಔಪಚಾರಿಕ ನಿರ್ಣಯವನ್ನು ಅಂಗೀಕರಿಸಿದೆ ಎಂದು ಅವರು ಸಾರ್ವಜನಿಕರಿಗೆ ನೆನಪಿಸಿದ್ದಾರೆ.

ಜನಗಣತಿಯಲ್ಲಿ ಜಾತಿ ಗಣತಿ ಸೇರ್ಪಡೆ; ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಹೇಳಿದ್ದೇನು?
Congress Leaders

Updated on: Apr 30, 2025 | 8:24 PM

ನವದೆಹಲಿ, ಏಪ್ರಿಲ್ 30: ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು (Caste Census) ಸೇರಿಸುವ ಸರ್ಕಾರದ ನಿರ್ಧಾರವನ್ನು ಬುಧವಾರ ಕಾಂಗ್ರೆಸ್ “ಬೆಟರ್ ಲೇಟ್ ದ್ಯಾನ್ ನೆವರ್” ಎಂದು ಹೇಳಿದೆ. ಕಾಂಗ್ರೆಸ್ ಜಾತಿ ಗಣತಿಗೆ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ. ಇಂದು ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು “ಪಾರದರ್ಶಕ” ರೀತಿಯಲ್ಲಿ ಸೇರಿಸಲಾಗುವುದು ಎಂದು ಮೋದಿ ಸರ್ಕಾರ ಘೋಷಿಸಿದೆ. ಜಾತಿ ಸಮೀಕ್ಷೆಯನ್ನು ರಾಜಕೀಯ ಸಾಧನವಾಗಿ ಬಳಸಿದ್ದಕ್ಕಾಗಿ ವಿರೋಧ ಪಕ್ಷಗಳನ್ನು ಟೀಕಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, “ಜಾತಿ ಗಣತಿಯಂತಹ ಸಮೀಕ್ಷೆಗಳು ಸಮಾಜದಲ್ಲಿ ಅನುಮಾನಗಳನ್ನು ಸೃಷ್ಟಿಸಿವೆ. ನಮ್ಮ ಸಾಮಾಜಿಕ ರಚನೆಯು ರಾಜಕೀಯದಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು ಸಮೀಕ್ಷೆಗಳ ಬದಲಿಗೆ ಜಾತಿ ಎಣಿಕೆಯನ್ನು ಜನಗಣತಿಯಲ್ಲಿ ಸೇರಿಸಲಾಗುವುದು” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರಗಳು ಯಾವಾಗಲೂ ಜಾತಿ ಜನಗಣತಿಯನ್ನು ವಿರೋಧಿಸುತ್ತಲೇ ಬಂದಿವೆ. 2010ರಲ್ಲಿ ದಿವಂಗತ ಡಾ. ಮನಮೋಹನ್ ಸಿಂಗ್ ಅವರು ಜಾತಿ ಜನಗಣತಿಯ ವಿಷಯವನ್ನು ಸಚಿವ ಸಂಪುಟದಲ್ಲಿ ಪರಿಗಣಿಸಬೇಕು ಎಂದು ಹೇಳಿದರು. ಈ ವಿಷಯವನ್ನು ಪರಿಗಣಿಸಲು ಸಚಿವರ ಗುಂಪನ್ನು ರಚಿಸಲಾಯಿತು. ಹೆಚ್ಚಿನ ರಾಜಕೀಯ ಪಕ್ಷಗಳು ಜಾತಿ ಜನಗಣತಿಯನ್ನು ಶಿಫಾರಸು ಮಾಡಿವೆ. ಇದರ ಹೊರತಾಗಿಯೂ, ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆ ಅಥವಾ ಜಾತಿ ಜನಗಣತಿಯನ್ನು ನಡೆಸಲು ನಿರ್ಧರಿಸಿದೆ” ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ
ಮತ ಚಲಾಯಿಸಿದ್ದೇನೆ, ರೇಷನ್​ ಕಾರ್ಡ್​ ಇದೆ ಇಲ್ಲೇ ಇರ್ತೀನಿ ಎಂದ ಪಾಕ್ ಪ್ರಜೆ
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸಂಪುಟ ಸಮಿತಿಗಳ ಸಭೆ
ಆಂಧ್ರಪ್ರದೇಶ, ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು
ಪಾಕ್​ನಿಂದ ಗಡಿಯಲ್ಲಿ ಗುಂಡಿನ ದಾಳಿ, ಭಾರತೀಯ ಸೇನೆಯಿಂದ ಪ್ರತಿದಾಳಿ


ಇದನ್ನೂ ಓದಿ: ಭಾರತದಲ್ಲಿ ಜನಗಣತಿ ಜೊತೆಗೆ ಜಾತಿಗಣತಿ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ಒತ್ತಾಯಿಸಿತ್ತು. ಇದು ಪ್ರಮುಖ ಚುನಾವಣಾ ವಿಷಯವಾಗಿತ್ತು. ಬಿಹಾರ, ತೆಲಂಗಾಣ ಮತ್ತು ಕರ್ನಾಟಕದಂತಹ ಕೆಲವು ರಾಜ್ಯಗಳು ತಮ್ಮ ರಾಜ್ಯಗಳಲ್ಲಿ ಜಾತಿ ಸಮೀಕ್ಷೆಗಳನ್ನು ನಡೆಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Wed, 30 April 25