Bhabanipur bypoll: ಭವಾನಿಪುರ ಉಪಚುನಾವಣೆಯಲ್ಲಿ ಸಂಜೆ 5 ಗಂಟೆವರೆಗೆ ಶೇ 53.32 ಮತದಾನ

Mamata Banerjee: ಭವಾನಿಪುರ ಕ್ಷೇತ್ರ ಮತ್ತು ಇತರ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಬಿಗಿ ಭದ್ರತೆ ಮತ್ತು ಕಠಿಣ ಕೊವಿಡ್ -19 ಕ್ರಮಗಳ ನಡುವೆ ಗುರುವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು.

Bhabanipur bypoll: ಭವಾನಿಪುರ ಉಪಚುನಾವಣೆಯಲ್ಲಿ ಸಂಜೆ 5 ಗಂಟೆವರೆಗೆ ಶೇ 53.32 ಮತದಾನ
ಭವಾನಿಪುರ ಉಪಚುನಾವಣೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 30, 2021 | 7:46 PM

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಮ್ಮ ಕುರ್ಚಿ ಉಳಿಸಿಕೊಳ್ಳಲು ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ (Bhabanipur bypoll) ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ, ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಿತ್ರ ಇನ್ಸ್ಟಿಟ್ಯೂಷನ್ ಶಾಲೆಯಲ್ಲಿ ಮಮತಾ ಮತ ಚಲಾಯಿಸಿದರು. ಭವಾನಿಪುರ ಕ್ಷೇತ್ರದಲ್ಲಿ ಗುರುವಾರ ಸಂಜೆ 5 ಗಂಟೆಗೆ 53.32 ರಷ್ಟು ಮತದಾನವಾಗಿದೆ. ಮಧ್ಯಾಹ್ನ 3 ಗಂಟೆಗೆ 48.08 ಶೇಕಡಾ, ಮಧ್ಯಾಹ್ನ 1 ಗಂಟೆಗೆ 35.97 ಶೇಕಡಾ, 11 ಗಂಟೆಗೆ ಶೇಕಡಾ 21.73 ಮತ್ತು ಬೆಳಿಗ್ಗೆ 9 ಗಂಟೆಗೆ 7.57 ಶೇಕಡಾ ಮತದಾನವಾಗಿದೆ.

ಭವಾನಿಪುರ ಕ್ಷೇತ್ರ ಮತ್ತು ಇತರ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಬಿಗಿ ಭದ್ರತೆ ಮತ್ತು ಕಠಿಣ ಕೊವಿಡ್ -19 ಕ್ರಮಗಳ ನಡುವೆ ಗುರುವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು. ಗುರುವಾರ ಭವಾನಿಪುರದಲ್ಲಿ ಬಿಗಿ ಭದ್ರತೆ ಮತ್ತು ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು, ಚುನಾವಣಾ ಆಯೋಗವು ಬುಧವಾರ ಕೇಂದ್ರೀಯ ಸಶಸ್ತ್ರ ಪೊಲೀಸ್ ಸಿಬ್ಬಂದಿಯ ಇನ್ನೂ 20 ತುಕಡಿಗಳನ್ನು ಕರೆತರಲು ನಿರ್ಧರಿಸಿದೆ.

ಈ ಕ್ಷೇತ್ರವು ಎರಡು ಬಾರಿ ಮಮತಾ ಅವರನ್ನು ಆಯ್ಕೆ ಮಾಡಿದ್ದು ಭವಾನಿಪುರ ಮಮತಾ ಅವರ ತವರು ಎಂದು ಪರಿಗಣಿಸಲಾಗಿದೆ. ಈ ಕ್ಷೇತ್ರದಲ್ಲಿ ಮಮತಾ ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಪ್ರಿಯಾಂಕಾ ಟಿಬರೆವಾಲ್ ಮತ್ತು ಸಿಪಿಎಂನ ಶ್ರೀಜಿಬ್ ಬಿಸ್ವಾಸ್ ಕಣದಲ್ಲಿದ್ದಾರೆ, ಆದಾಗ್ಯೂ, ಈ ಬಾರಿಯ ಮತದಾನವು ವಿಶೇಷ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ, ಏಕೆಂದರೆ ಬ್ಯಾನರ್ಜಿ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಹೋರಾಡುತ್ತಿದ್ದಾರೆ. ಆದರೆ ಬಿಜೆಪಿ ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದ ಸುತ್ತ ಕಣ್ಣಿಟ್ಟಿದೆ.

ದಕ್ಷಿಣ ಕೊಲ್ಕತ್ತಾದ ಭವಾನಿಪುರ್ ಮತ್ತು ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಮೂರು ಕ್ಷೇತ್ರಗಳಲ್ಲಿ ಒಟ್ಟು 6,97,164 ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಅಕ್ಟೋಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಸಂಜೆ 5 ಗಂಟೆಗೆ ಮತದಾನದ ಶೇಕಡಾವಾರು: ಸಂಸರ್‌ಗಂಜ್: ಶೇ 78.60 ಜಂಗೀಪುರ: ಶೇ 76.12 ಭವಾನಿಪುರ: ಶೇ 53.32

ಮತ ಚಲಾಯಿಸಲು ಜನರಿಗೆ ಟಿಎಂಸಿ ಹಣ ನೀಡಿದೆ: ಪ್ರಿಯಾಂಕಾ ಟಿಬರೆವಾಲ್ ಭವಾನಿಪುರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್, ಟಿಎಂಸಿ ಮತ ಚಲಾಯಿಸಲು ಕೆಲವರಿಗೆ ಹಣ ನೀಡುತ್ತಿದೆ ಎಂದು ಆರೋಪಿಸಿದರು “ಮತ ಚಲಾಯಿಸಲು ಟಿಎಂಸಿ 500 ರೂಪಾಯಿಗಳನ್ನು ನೀಡಿದೆ ಎಂದು ಒಬ್ಬ ವ್ಯಕ್ತಿ ನನ್ನಲ್ಲಿ ಹೇಳಿದ್ದಾನೆ. ಅವನು ಬನ್ಸ್ಡ್ರೋನಿಯವನು. ನಾನು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ, ” ಟಿಬರೆವಾಲ್ ಹೇಳಿದ್ದಾರೆ.

ಟಿಎಂಸಿ ನಕಲಿ ಮತದಾರರನ್ನು ಕಳುಹಿಸಿದೆ: ಬಿಜೆಪಿ ಭವಾನಿಪುರದ ನಾಲ್ಕು ಶಾಲೆಗಳಿಗೆ ನಕಲಿ ಮತದಾರರನ್ನು ಕಳುಹಿಸಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ ದೂರು ದಾಖಲಿಸಿದ್ದಾರೆ.

ಭವಾನಿಪುರ: ಚುನಾವಣಾ ಆಯೋಗಕ್ಕೆ 23 ದೂರು ಇಂದು ಮೂರು ಕ್ಷೇತ್ರಗಳಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ 41 ದೂರುಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ. 41 ದೂರುಗಳಲ್ಲಿ 23 ಭಬನಿಪುರ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿದೆ.

ಇದನ್ನೂ ಓದಿ: Bhabanipur Bypoll ಮೋದಿ ಜೀ, ನಾವು ಭಾರತವನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಇದನ್ನೂ ಓದಿ: ಭವಾನಿಪುರದಲ್ಲಿ ಮತಯಂತ್ರ ಸ್ಥಗಿತಗೊಳಿಸಿದ ಟಿಎಂಸಿ ಶಾಸಕ; ಬಿಜೆಪಿ ಅಭ್ಯರ್ಥಿಯಿಂದ ಆರೋಪ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್