West Bengal By-election Results: ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು

Mamata Banerjee ಭವಾನಿಪುರದ ಕ್ಷೇತ್ರದ ಉಪಚುನಾವಣೆಯಲ್ಲಿ ಪಶ್ಚಿಮ  ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್  ವಿರುದ್ಧ ಮಮತಾ 58,389 ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ.

West Bengal By-election Results: ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು
ಮಮತಾ ಬ್ಯಾನರ್ಜಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 03, 2021 | 3:18 PM

ಕೊಲ್ಕತ್ತಾ:ಭವಾನಿಪುರದ ಕ್ಷೇತ್ರದ ಉಪಚುನಾವಣೆಯಲ್ಲಿ(Bhabanipur Bypoll) ಪಶ್ಚಿಮ  ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್  ವಿರುದ್ಧ ಮಮತಾ 58,389 ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ (Priyanka Tibrewal) ಸೋಲು ಒಪ್ಪಿಕೊಂಡಿದ್ದು ಮಮತಾ ಹೇಳಿದಂತೆ 1 ಲಕ್ಷ ಮತಗಳ ಅಂತರವನ್ನು ಪಡೆದಿಲ್ಲ ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ವಿಧಾನಸಭಾ ಚುನಾವಣೆಯಲ್ಲಿ ಪರಾವಭಗೊಂಡಿದ್ದರು. ಶಾಸಕ ಸ್ಥಾನ ಗೆಲ್ಲದೇ ಇದ್ದರೂ ಪಶ್ಚಿಮ ಬಂಗಾದ ಮುಖ್ಯಮಂತ್ರಿಯಾಗಿದ್ದ ಮಮತಾ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಭವಾನಿಪುರದಿಂದ ಸ್ಪರ್ಧಿಸಿದ್ದರು.

ಎಲ್ಲರಿಗೂ ಧನ್ಯವಾದಗಳು: ಮಮತಾ ಬ್ಯಾನರ್ಜಿ ಭವಾನಿಪುರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ ಎಲ್ಲರಿಗೂ ಧನ್ಯವಾದಗಳು, ಸಹೋದರಿಯರು, ಸಹೋದರರು, ತಾಯಂದಿರು ಮತ್ತು ಭಾರತದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದು ಹೇಳಿದರು.

ನಾನು ನಿಮಗೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ಸಹೋದರಿಯರು, ಸಹೋದರರು, ತಾಯಂದಿರು ಎಲ್ಲ ಭಾರತೀಯರಿಗೂ ಧನ್ಯವಾದ. 2016 ರಲ್ಲಿ ನಾನು ಕೆಲವು ವಾರ್ಡ್‌ಗಳಲ್ಲಿ ಕಡಿಮೆ ಮತಗಳನ್ನು ಪಡೆದಿರುವುದನ್ನು ನೋಡಿದ್ದೆ. ಶೇ 46 ರಷ್ಟು ಬಂಗಾಳಿ ಅಲ್ಲದವರು ಮತ್ತು ಎಲ್ಲರೂ ನನಗೆ ಮತ ನೀಡಿದ್ದಾರೆ. ಭಬನಿಪುರದ ಜನರು ನನ್ನ ಮೇಲೆ ನಂಬಿಕೆ ಇಟ್ಟಿರುವುದಕ್ಕೆ ನನಗೆ ಸಂತೋಷವಾಗಿದೆ. ನಾನು ಭವಾನಿಪುರದ ಜನರಿಗೆ ಋಣಿ.

ಬಂಗಾಳದಲ್ಲಿ ಚುನಾವಣೆ ಆರಂಭವಾದಾಗಿನಿಂದ, ಕೇಂದ್ರ ಸರ್ಕಾರವು ನಮ್ಮನ್ನು (ಅಧಿಕಾರದಿಂದ) ತೆಗೆದುಹಾಕಲು ಸಂಚು ರೂಪಿಸಿತು. ನಾನು ಚುನಾವಣೆಗೆ ಸ್ಪರ್ಧಿಸದಂತೆ ನನ್ನ ಕಾಲುಗಳಿಗೆ ಗಾಯವಾಯಿತ, ನಮಗೆ ಮತ ನೀಡಿದ ಸಾರ್ವಜನಿಕರಿಗೆ ಮತ್ತು 6 ತಿಂಗಳೊಳಗೆ ಚುನಾವಣೆ ನಡೆಸಿದ ಚುನಾವಣಾ ಆಯೋಗಕ್ಕೆ ನಾನು ಕೃತಜ್ಞಳಾಗಿದ್ದೇನೆ ಎಂದು ಮಮತಾ ಹೇಳಿದ್ದಾರೆ.

ಸೋಲೊಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ ಮಮತಾ ಬ್ಯಾನರ್ಜಿಗೆ ವಿರುದ್ಧ ಸೋಲು ಒಪ್ಪಿಕೊಂಡಿದ್ದಾರೆ. ನನ್ನ ಸೋಲನ್ನು ಸ್ವೀಕರಿಸುತ್ತೇನೆ ಮತ್ತು ನಾನು ನ್ಯಾಯಾಲಯಕ್ಕೆ ಹೋಗುವುದಿಲ್ಲ. ಆದರೆ ಅವರು ಮಮತಾ ಬ್ಯಾನರ್ಜಿ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಹೇಳಿದ್ದರು. ಅವರು ಸುಮಾರು 50,000 ಮತಗಳನ್ನು ಪಡೆದಿದ್ದಾರೆ. ನಾನು ಮಮತಾ ಬ್ಯಾನರ್ಜಿಯನ್ನು ಅಭಿನಂದಿಸುತ್ತೇನೆ, ಅವರು ಚುನಾವಣೆ ಗೆದ್ದ ದಾರಿಯನ್ನು ಎಲ್ಲರೂ ನೋಡಿದ್ದಾರೆ ಎಂದಿದ್ದಾರೆ ಟಿಬರೆವಾಲ್.

ಇದನ್ನೂ ಓದಿ: West Bengal By-Election Results ಚುನಾವಣಾ ಫಲಿತಾಂಶದ ನಂತರ ಸಂಭ್ರಮಾಚರಣೆ ಬೇಡ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ

ಇದನ್ನೂ ಓದಿ: ಶಾರುಖ್ ಖಾನ್ ಹಂಚಿಕೊಂಡ ಗಣೇಶ ಚತುರ್ಥಿಯ ಕುರಿತ ಪೋಸ್ಟ್​ಗೆ ಕಿಡಿ ಕಾರಿದ ಕೆಲ ನೆಟ್ಟಿಗರು; ಕಾರಣವೇನು?

Published On - 2:47 pm, Sun, 3 October 21

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು