AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಅಮರಣಾಂತ ಉಪವಾಸ: ಭಗತ್ ಸಿಂಗ್ ಸಂಬಂಧಿ ಅಭಯ್​ ಸಂಧು ಘೋಷಣೆ

ಸಂಧು ಅವರು ಆಯ್ಕೆ ಮಾಡಿಕೊಂಡಿರುವ ಮಾರ್ಚ್ 23 ಒಂದು ಐತಿಹಾಸಿಕ ದಿನವಾಗಿದೆ. ಆ ದಿನದಂದೇ ಭಗತ್ ಸಿಂಗ್, ರಾಜಗುರು ಮತ್ತು ಸುಖ್​ದೇವ್ ಅವರು ಹುತಾತ್ಮರಾಗಿದ್ದು. ಸದರಿ ದಿನವನ್ನು ಶಹೀದ್ ದಿವಸ್ (ಹುತಾತ್ಮರ ದಿನ) ಎಂದು ಸ್ಮರಿಸಲಾಗುತ್ತದೆ.

ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಅಮರಣಾಂತ ಉಪವಾಸ: ಭಗತ್ ಸಿಂಗ್ ಸಂಬಂಧಿ ಅಭಯ್​ ಸಂಧು ಘೋಷಣೆ
ಭಗತ್ ಸಿಂಗ್ ಸೋದರ ಸಂಬಂಧ ಅಭಯ್ ಸಂಧು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on: Feb 24, 2021 | 9:12 PM

Share

ದೆಹಲಿ: ಕೇಂದ್ರ ಸರ್ಕಾರ ಘೋಷಿಸಿರುವ ನೂತನ ಕೃಷಿ ಕಾಯ್ದೆಗಳನ್ನು ಮಾರ್ಚ್ 23ರ ಒಳಗಾಗಿ ಹಿಂಪಡೆಯದಿದ್ದರೆ ಅಮರಣಾಂತ ಉಪವಾಸ ಮಾಡುವುದಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಅಣ್ಣನ ಮಗ ಅಭಯ್ ಸಂಧು ಬುಧವಾರ (ಫೆ.24) ಘೋಷಿಸಿದರು. ಹೊಸ ಕಾಯ್ದೆಗಳು ತಮಗೆ ಮಾರಕವಾಗಲಿವೆ, ಕಾರ್ಪೊರೇಟ್​ಗಳ ಕಪಿಮುಷ್ಟಿಗೆ ಸಿಕ್ಕು ನರಳಬೇಕಾಗುತ್ತದೆ ಎಂದು ಹೇಳುತ್ತಿರುವ ರೈತರು ಅವುಗಳನ್ನು ವಾಪಸ್ಸು ಪಡೆಯಲು ಆಗ್ರಹಿಸಿ ಹಲವಾರು ತಿಂಗಳುಗಳಿಂದ ದೆಹಲಿಯ ಹೊರವಲಯದಲ್ಲಿ ಮುಷ್ಕರ ನಡೆಸುತ್ತಿದ್ದಾರೆ. ಸಂಧು ತಮ್ಮ ಸಂಬಂಧಿಯೊಬ್ಬರ ಜೊತೆ ದೆಹಲಿಯ ಸಿಂಘು ಗಡಿಯಲ್ಲಿ ಮುಷ್ಕರನಿರತ ರೈತರನ್ನು ಇಂದು ಸೇರಿಕೊಂಡರು. ಮುಷ್ಕರದ ಸ್ಥಳವನ್ನು ತಲುಪಿದ ನಂತರವೇ ಸಂಧು ಅಮರಣಾಂತ ಉಪವಾಸ ನಡೆಸುವ ಬಗ್ಗೆ ಘೋಷಣೆ ಮಾಡಿದರು. ಸಂಯುಕ್ತ ಕಿಸಾನ್ ಮೊರ್ಚಾದ ರೈತರು ಹುತಾತ್ಮ ಭಗತ್​ ಸಿಂಗ್ ಅವರ ಸಂಬಂಧಿಗಳಿಗೆ ರುಮಾಲುಗಳಿಂದ (ಪಗಡಿ) ಸನ್ಮಾನಿಸಿ ನೆನಪಿನ ಕಾಣಿಕೆಗಳನ್ನು ನೀಡಿದ್ದು ನೂರು ವರ್ಷಗಳಿಗೂ ಹಿಂದೆ ನಡೆದ ಪಗಡಿ ಸಂಭಾಲ್ ಜತ್ತಾ ಚಳುವಳಿಯನ್ನು ಜ್ಞಾಪಿಸಿಕೊಳ್ಳುವಂತೆ ಮಾಡಿತು.

ಸಂಧು ಅವರು ಆಯ್ಕೆ ಮಾಡಿಕೊಂಡಿರುವ ಮಾರ್ಚ್ 23 ಒಂದು ಐತಿಹಾಸಿಕ ದಿನವಾಗಿದೆ. ಆ ದಿನದಂದೇ ಭಗತ್ ಸಿಂಗ್, ರಾಜಗುರು ಮತ್ತು ಸುಖ್​ದೇವ್ ಅವರು ಹುತಾತ್ಮರಾಗಿದ್ದು. ಸದರಿ ದಿನವನ್ನು ಶಹೀದ್ ದಿವಸ್ (ಹುತಾತ್ಮರ ದಿನ) ಎಂದು ಸ್ಮರಿಸಲಾಗುತ್ತದೆ. 1906 ರಲ್ಲೂ ಆಗಿನ ಬ್ರಿಟಿಷ್ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಘೋಷಿಸಿದಾಗ ರೈತರು ಅವುಗಳನ್ನು ವಿರೋಧಿಸಿ ಪಗಡಿ ಸಂಭಾಲ್ ಚಳುವಳಿ ನಡೆಸಿ ಆಂಗ್ಲರು ಆ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದ್ದರು ಎನ್ನುವುದನ್ನು ರೈತರು ಜ್ಞಾಪಿಸಿಕೊಂಡರು.

ಆ ಚಳುವಳಿಯಂತೆಯೇ ಈಗ ರೈತರು ನಡೆಸುತ್ತಿರುವ ಚಳುವಳಿಯು ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ನೂತನ ಕೃಷಿ ವಿಧೇಯಕಗಳನ್ನು ವಾಪಸ್ಸು ಪಡೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವೀಯಾಗಲಿದೆ ಎಂಭ ಭರವಸೆಯನ್ನು ರೈತರು ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರತಿಭಟನಾನಿರತ ಉತ್ತರ ಪ್ರದೇಶ ರೈತರೊಂದಿಗೆ ಮಾತುಕತೆ ನಡೆಸಿದ ಅರವಿಂದ್​ ಕೇಜ್ರಿವಾಲ್​; ಫೆ.28ಕ್ಕೆ ಮಹಾ ಕಿಸಾನ್ ಪಂಚಾಯತ್​​

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್