AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಮತ್ತರಾಗಿದ್ದ ಭಗವಂತ್​​ ಮಾನ್​​ನ್ನು ವಿಮಾನದಿಂದ ಕೆಳಗಿಳಿಸಲಾಗಿತ್ತು ಎಂದ ಬಾದಲ್; ಆರೋಪ ನಿರಾಕರಿಸಿದ ಎಎಪಿ

ಬಾದಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಎಎಪಿ ನಾಯಕರಾದ ಕುಲದೀಪ್ ಧಲಿವಾಲ್ ಮತ್ತು ಮೀತ್ ಹೇಯರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಯಾರಿಗಾದರೂ ಆರೋಗ್ಯ ಸಮಸ್ಯೆಗಳು ಬರಬಹುದು, ಪ್ರತಿಪಕ್ಷಗಳಿಗೆ ಮಾತನಾಡಲು ಯಾವುದೇ ಸಮಸ್ಯೆಗಳಿಲ್ಲ...

ಪಾನಮತ್ತರಾಗಿದ್ದ ಭಗವಂತ್​​ ಮಾನ್​​ನ್ನು ವಿಮಾನದಿಂದ ಕೆಳಗಿಳಿಸಲಾಗಿತ್ತು ಎಂದ ಬಾದಲ್; ಆರೋಪ ನಿರಾಕರಿಸಿದ ಎಎಪಿ
ಭಗವಂತ್ ಮಾನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 19, 2022 | 10:16 PM

Share

ಮದ್ಯ ಸೇವಿಸಿದ್ದ ಭಗವಂತ್ ಮಾನ್ (Bhagwant Mann) ಅವರನ್ನು ವಿಮಾನದಿಂದ ಕೆಳಗಿಳಿಸಲಾಗಿತ್ತು ಎಂಬ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ (Sukhbir Singh Badal) ಅವರ ಆರೋಪವನ್ನು ತಳ್ಳಿಹಾಕಿರುವ ಆಮ್ ಆದ್ಮಿ ಪಕ್ಷ (AAP), ಪ್ರತಿಪಕ್ಷಗಳಿಗೆ ಮಾತನಾಡಲು ಬೇರೆ  ಸಂಗತಿಗಳಿಲ್ಲ. ಪಂಜಾಬ್ ಮುಖ್ಯಮಂತ್ರಿಗೆ ಆರೋಗ್ಯ ಸಮಸ್ಯೆಗಳಿವೆ ಎಂದು ಸೋಮವಾರ ಹೇಳಿದೆ. ಮಾಧ್ಯಮ ವರದಿಯನ್ನು ಉಲ್ಲೇಖಿಸಿದ ಬಾದಲ್, ಮಾನ್ ಅವರು ಪಾನಮತ್ತರಾಗಿ ನಡೆಯಲು ಸಾಧ್ಯವಾಗದೇ ಇದ್ದಾಗ ಅವರನ್ನು ವಿಮಾನದಿಂದ ಕೆಳಗಿಳಿಸಲಾಯಿತು . ಇದರಿಂದಾಗಿ ವಿಮಾನ 4 ಗಂಟೆಗಳ ವಿಳಂಬವಾಯಿತು ಎಂದು ಆರೋಪಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ನಡೆಯಲು ಸಾಧ್ಯವಾಗದ ಕಾರಣ ಲುಫ್ಥಾನ್ಸ ವಿಮಾನದಿಂದ ಕೆಳಗಿಳಿಸಲಾಗಿದೆ ಎಂದು ಸಹಪ್ರಯಾಣಿಕರು ಹೇಳಿರುವುದಾಗಿ ಕೆಲವೊಂದು ಮಾಧ್ಯಮಗಳು ವರದಿ ಮಾಡಿವೆ. ಈ ಕಾರಣದಿಂದಾಗಿ ವಿಮಾನ 4 ಗಂಟೆಗಳ ಕಾಲವಿಳಂಬವಾಯಿತು. ಅವರು ಎಎಪಿಯ ರಾಷ್ಟ್ರೀಯ ಸಮಾವೇಶವನ್ನು ಮಿಸ್ ಮಾಡಿಕೊಂಡರು. ಈ ವರದಿಗಳು ಪ್ರಪಂಚದಾದ್ಯಂತದ ಪಂಜಾಬಿಗಳನ್ನು ಮುಜುಗರ ಮತ್ತು ನಾಚಿಕೆಗೀಡುಮಾಡಿದೆ ಎಂದು ಬಾದಲ್ ಟ್ವೀಟ್ ಮಾಡಿದ್ದಾರೆ.

ಮಾನ್ ಸೋಮವಾರಷ್ಟೇ ಜರ್ಮನಿಯಿಂದ ಎಂಟು ದಿನಗಳ ಪ್ರವಾಸದಿಂದ ಮರಳಿದ್ದಾರೆ. ಬಾದಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಎಎಪಿ ನಾಯಕರಾದ ಕುಲದೀಪ್ ಧಲಿವಾಲ್ ಮತ್ತು ಮೀತ್ ಹೇಯರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಯಾರಿಗಾದರೂ ಆರೋಗ್ಯ ಸಮಸ್ಯೆಗಳು ಬರಬಹುದು, ಪ್ರತಿಪಕ್ಷಗಳಿಗೆ ಮಾತನಾಡಲು ಯಾವುದೇ ಸಮಸ್ಯೆಗಳಿಲ್ಲ, ಆದ್ದರಿಂದ ಅವರು ಈ ಸುಳ್ಳು ಮತ್ತು ಅರ್ಥಹೀನ ವಿಷಯವನ್ನು ಹೈಲೈಟ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, ಬಾದಲ್ ಅವರು ಈ ವಿಷಯದ ಬಗ್ಗೆ ಮೌನವಾಗಿರುವುದರ ಬಗ್ಗೆ ಪಂಜಾಬ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಘಟನೆಯ ಬಗ್ಗೆ ಸ್ಪಷ್ಟೀಕರಣವನ್ನು ಕೇಳಿದರು. ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರಿಗೆ ಈ ವಿಷಯದ ಬಗ್ಗೆ ಸ್ಪಷ್ಟ ಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪಂಜಾಬ್ ಸರ್ಕಾರವು ತಮ್ಮ ಸಿಎಂ ಭಗವಂತ್ ಮಾನ್ ಅವರ ಬಗ್ಗೆ ಇರುವ ಈ ವರದಿಗಳ ಬಗ್ಗೆ ಮೌನವಾಗಿದೆ. ಅರವಿಂದ ಕೇಜ್ರಿವಾಲ್ ಈ ವಿಷಯದ ಬಗ್ಗೆ ಸ್ಪಷ್ಟ ಪಡಿಸಬೇಕು. ಇದು ಪಂಜಾಬಿ ಮತ್ತು ರಾಷ್ಟ್ರೀಯ ಹೆಮ್ಮೆಯನ್ನು ಒಳಗೊಂಡಿರುವುದರಿಂದ ಭಾರತ ಸರ್ಕಾರವು ಮಧ್ಯಪ್ರವೇಶಿಸಬೇಕು. ಅವರನ್ನು ವಿಮಾನದಿಂದ ಇಳಿಸಿದ್ದರೆ, ಭಾರತ ಸರ್ಕಾರ ಅದರ ಜರ್ಮನ್ ಅಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಬೇಕು ಎಂದು ಅವರು ಹೇಳಿದ್ದಾರೆ.+

ಇದಕ್ಕೂ ಮುನ್ನ ಆಗಸ್ಟ್ 31 ರಂದು ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಸೇರಿದಂತೆ ನಿಯೋಗವು ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರಿಗೆ ಮನವಿ ಸಲ್ಲಿಸಿತು ಮತ್ತು ರಾಜ್ಯ ಅಬಕಾರಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿತು. ನೀತಿಯಲ್ಲಿ ಹಗರಣ ನಡೆದಿದೆ ಎಂದು ನಿಯೋಗ ಆರೋಪಿಸಿದೆ. “ದೆಹಲಿಯಲ್ಲಿ ನಡೆದಂತೆ ಪಂಜಾಬ್ ಅಬಕಾರಿ ನೀತಿಯಲ್ಲೂ ಹಗರಣ ನಡೆದಿದೆ. ದೆಹಲಿ ಎಲ್‌ಜಿ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಆದೇಶಿಸಿದಂತೆಯೇ, ಪಂಜಾಬ್‌ನಲ್ಲಿ ಸಿಬಿಐ ತನಿಖೆಗೆ ನಾವು ಒತ್ತಾಯಿಸುತ್ತೇವೆ” ಎಂದು ಬಾದಲ್ ಹೇಳಿದ್ದಾರೆ.

Published On - 10:15 pm, Mon, 19 September 22

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ