Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan CM Oath Taking: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕಾರ

ರಾಜಸ್ಥಾನ(Rajasthan)ದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ(Bhajan Lal Sharma) ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಬಳಿಕ ಭಜನ್‌ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿತ್ತು. ಭಜನ್ ಲಾಲ್ ಹೊರತಾಗಿ ಬಿಜೆಪಿ ರಾಜಸ್ಥಾನದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳ ಸೂತ್ರವನ್ನು ಹೆಣೆದಿತ್ತು.

Rajasthan CM Oath Taking: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕಾರ
ಭಜನ್​ಲಾಲ್ ಶರ್ಮಾ
Follow us
ನಯನಾ ರಾಜೀವ್
|

Updated on:Dec 15, 2023 | 1:47 PM

ಹುಟ್ಟುಹಬ್ಬದ ದಿನದಂದೇ ರಾಜಸ್ಥಾನ(Rajasthan)ದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ(Bhajan Lal Sharma) ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಬಳಿಕ ಭಜನ್‌ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿತ್ತು. ಭಜನ್ ಲಾಲ್ ಹೊರತಾಗಿ ಬಿಜೆಪಿ ರಾಜಸ್ಥಾನದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳ ಸೂತ್ರವನ್ನು ಹೆಣೆದಿತ್ತು.

ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಮೂವರೂ ಶುಕ್ರವಾರ ಅಂದರೆ ಡಿಸೆಂಬರ್ 15 ರಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ರಾಜ್ಯದ ನೂತನ ಮುಖ್ಯಮಂತ್ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್​ ಸಿಂಗ್, ಏಕನಾಥ್ ಶಿಂಧೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ರಾಜಸ್ಥಾನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಮತ್ತಷ್ಟು ಓದಿ: Rajasthan CM Oath Taking: ರಾಜಸ್ಥಾನದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಭಜನ್​ ಲಾಲ್ ಶರ್ಮಾ

ರಾಮ್ ನಿವಾಸ್ ಬಾಗ್‌ನಲ್ಲಿರುವ ಆಲ್ಬರ್ಟ್ ಹಾಲ್‌ನ ಹೊರಗೆ ನಡೆಯಿತು. ಬಿಜೆಪಿಯ ರಾಜ್ಯ ಪದಾಧಿಕಾರಿಗಳಿಗೆ ಈ ಎಲ್ಲ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಬೇರೆ ಬೇರೆ ಜವಾಬ್ದಾರಿಗಳನ್ನು ವಹಿಸಲಾಗಿದೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ಅನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ 115 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಕಾಂಗ್ರೆಸ್ ಪಕ್ಷಕ್ಕೆ ಕೇವಲ 69 ಸ್ಥಾನಗಳು ಲಭಿಸಿವೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮವಾಗಿ ಭಜನ್‌ಲಾಲ್ ಶರ್ಮಾ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:06 pm, Fri, 15 December 23

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ