ಚುನಾವಣೆಗಳಲ್ಲಿ ಕಳಪೆ ಸಾಧನೆ, ನೈತಿಕ ಹೊಣೆಹೊತ್ತು ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ​ ದಾಸ್ ರಾಜೀನಾಮೆ

ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಭಕ್ತ ಚರಣ್ ದಾಸ್ ಸೋಮವಾರ ರಾಜೀನಾಮೆ ನೀಡಿದ್ದಾರೆ. ಒಡಿಶಾದಲ್ಲಿ ವಿಧಾನಸಭೆ ಮತ್ತು ಸಂಸತ್ ಚುನಾವಣೆಗಳಲ್ಲಿ ನಿರೀಕ್ಷಿತ ಸಂಖ್ಯೆಯ ಸ್ಥಾನಗಳನ್ನು ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಭಕ್ತ ಚರಣ್ ದಾಸ್ ರಾಜೀನಾಮೆ ನೀಡಿದ್ದಾರೆ.

ಚುನಾವಣೆಗಳಲ್ಲಿ ಕಳಪೆ ಸಾಧನೆ, ನೈತಿಕ ಹೊಣೆಹೊತ್ತು ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ​ ದಾಸ್ ರಾಜೀನಾಮೆ
ಭಕ್ತ ಚರಣ್​ ದಾಸ್
Follow us
ನಯನಾ ರಾಜೀವ್
|

Updated on: Jun 11, 2024 | 8:24 AM

ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಭಕ್ತ ಚರಣ್ ದಾಸ್(Bhakta Charan Das) ರಾಜೀನಾಮೆ ನೀಡಿದ್ದಾರೆ.

ಒಡಿಶಾ ವಿಧಾನಸಭಾ ಚುನಾವಣೆಯ ಫಲಿತಾಂಶ ಹೀಗಿದೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅದ್ಭುತ ಸಾಧನೆ ಮಾಡಿತ್ತು. ರಾಜ್ಯದಲ್ಲಿ ಪಕ್ಷ 78 ಸ್ಥಾನಗಳನ್ನು ಗೆದ್ದಿದೆ. ಆಡಳಿತ ಪಕ್ಷ ಬಿಜೆಡಿ 51 ಸ್ಥಾನಗಳನ್ನು ಗೆದ್ದಿದೆ. ಇದನ್ನು ಹೊರತುಪಡಿಸಿದರೆ ಕಾಂಗ್ರೆಸ್ ಕೇವಲ 14 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಇದಲ್ಲದೆ ಇತರೆ ಪಕ್ಷಗಳು ಮತ್ತು ಪಕ್ಷೇತರರು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ರಾಜ್‌ಗಂಗ್‌ಪುರ, ಬಾಸುದೇವಪುರ, ಭವಾನಿಪಟ್ನಾ, ಜಿ.ಉದಯಗಿರಿ, ಬಾರಾಬತಿ-ಕಟಕ್, ಸನಖೇಮುಂಡಿ, ಮಹಾನಾ, ಗುಣುಪುರ್, ಬಿಸ್ಸಾಮ್ ಕಟಕ್, ರಾಯಗಢ, ಲಕ್ಷ್ಮೀಪುರ, ಜೇಪೋರ್, ಪೊತಂಗಿ ಸ್ಥಾನಗಳನ್ನು ಗೆದ್ದಿತ್ತು.

ಮತ್ತಷ್ಟು ಓದಿ: ಒಡಿಶಾದಲ್ಲಿ ಗೆಲುವಿನತ್ತ ಬಿಜೆಪಿ; ಮೊದಲ ಬಾರಿಗೆ ಮಗಧ ನಾಡಿನಲ್ಲಿ ಕಮಲ ಬಾವುಟ?

ಒಡಿಶಾ ಲೋಕಸಭಾ ಚುನಾವಣೆಯ ಫಲಿತಾಂಶಗಳು ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇಲ್ಲಿನ 21 ಲೋಕಸಭಾ ಕ್ಷೇತ್ರಗಳ ಪೈಕಿ 20ರಲ್ಲಿ ಬಿಜೆಪಿ ಗೆದ್ದಿದೆ. ಅದೇ ಸಮಯದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕೆ ಸೀಮಿತವಾಗಿತ್ತು. ಆದರೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಡಿ ಖಾತೆ ತೆರೆಯಲೂ ಸಾಧ್ಯವಾಗಿಲ್ಲ.

2019 ಒಡಿಶಾ ಚುನಾವಣಾ ಸ್ಥಿತಿ 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112 ಸ್ಥಾನಗಳನ್ನು ಪಡೆದಿತ್ತು. ಬಿಜೆಪಿ 23 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ ಒಂಬತ್ತು, ಸಿಪಿಐ(ಎಂ) ಒಂದು ಸ್ಥಾನ ಮತ್ತು ಒಂದು ಸ್ಥಾನ ಸ್ವತಂತ್ರ ಅಭ್ಯರ್ಥಿ ಪಾಲಾಯಿತು. ಈ ಚುನಾವಣೆಯಲ್ಲಿ ಬಿಜೆಡಿ ಶೇ.45ರಷ್ಟು ಮತಗಳನ್ನು ಪಡೆದಿದೆ. ಆದರೆ ಬಿಜೆಪಿ ಶೇ 33ರಷ್ಟು ಮತಗಳನ್ನು ಪಡೆದಿದೆ. ಕಾಂಗ್ರೆಸ್ ಶೇ.16 ಮತಗಳನ್ನು ಪಡೆದರೆ ಇತರರು ಶೇ.6 ಮತಗಳನ್ನು ಪಡೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ