ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಒಡಿಶಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಭಕ್ತ ಚರಣ್ ದಾಸ್(Bhakta Charan Das) ರಾಜೀನಾಮೆ ನೀಡಿದ್ದಾರೆ.
ಒಡಿಶಾ ವಿಧಾನಸಭಾ ಚುನಾವಣೆಯ ಫಲಿತಾಂಶ ಹೀಗಿದೆ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅದ್ಭುತ ಸಾಧನೆ ಮಾಡಿತ್ತು. ರಾಜ್ಯದಲ್ಲಿ ಪಕ್ಷ 78 ಸ್ಥಾನಗಳನ್ನು ಗೆದ್ದಿದೆ. ಆಡಳಿತ ಪಕ್ಷ ಬಿಜೆಡಿ 51 ಸ್ಥಾನಗಳನ್ನು ಗೆದ್ದಿದೆ. ಇದನ್ನು ಹೊರತುಪಡಿಸಿದರೆ ಕಾಂಗ್ರೆಸ್ ಕೇವಲ 14 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಇದಲ್ಲದೆ ಇತರೆ ಪಕ್ಷಗಳು ಮತ್ತು ಪಕ್ಷೇತರರು ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ರಾಜ್‌ಗಂಗ್‌ಪುರ, ಬಾಸುದೇವಪುರ, ಭವಾನಿಪಟ್ನಾ, ಜಿ.ಉದಯಗಿರಿ, ಬಾರಾಬತಿ-ಕಟಕ್, ಸನಖೇಮುಂಡಿ, ಮಹಾನಾ, ಗುಣುಪುರ್, ಬಿಸ್ಸಾಮ್ ಕಟಕ್, ರಾಯಗಢ, ಲಕ್ಷ್ಮೀಪುರ, ಜೇಪೋರ್, ಪೊತಂಗಿ ಸ್ಥಾನಗಳನ್ನು ಗೆದ್ದಿತ್ತು.
ಮತ್ತಷ್ಟು ಓದಿ: ಒಡಿಶಾದಲ್ಲಿ ಗೆಲುವಿನತ್ತ ಬಿಜೆಪಿ; ಮೊದಲ ಬಾರಿಗೆ ಮಗಧ ನಾಡಿನಲ್ಲಿ ಕಮಲ ಬಾವುಟ?
ಒಡಿಶಾ ಲೋಕಸಭಾ ಚುನಾವಣೆಯ ಫಲಿತಾಂಶಗಳು
ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇಲ್ಲಿನ 21 ಲೋಕಸಭಾ ಕ್ಷೇತ್ರಗಳ ಪೈಕಿ 20ರಲ್ಲಿ ಬಿಜೆಪಿ ಗೆದ್ದಿದೆ. ಅದೇ ಸಮಯದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕೆ ಸೀಮಿತವಾಗಿತ್ತು. ಆದರೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಡಿ ಖಾತೆ ತೆರೆಯಲೂ ಸಾಧ್ಯವಾಗಿಲ್ಲ.
2019 ಒಡಿಶಾ ಚುನಾವಣಾ ಸ್ಥಿತಿ
2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112 ಸ್ಥಾನಗಳನ್ನು ಪಡೆದಿತ್ತು. ಬಿಜೆಪಿ 23 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ ಒಂಬತ್ತು, ಸಿಪಿಐ(ಎಂ) ಒಂದು ಸ್ಥಾನ ಮತ್ತು ಒಂದು ಸ್ಥಾನ ಸ್ವತಂತ್ರ ಅಭ್ಯರ್ಥಿ ಪಾಲಾಯಿತು. ಈ ಚುನಾವಣೆಯಲ್ಲಿ ಬಿಜೆಡಿ ಶೇ.45ರಷ್ಟು ಮತಗಳನ್ನು ಪಡೆದಿದೆ. ಆದರೆ ಬಿಜೆಪಿ ಶೇ 33ರಷ್ಟು ಮತಗಳನ್ನು ಪಡೆದಿದೆ. ಕಾಂಗ್ರೆಸ್ ಶೇ.16 ಮತಗಳನ್ನು ಪಡೆದರೆ ಇತರರು ಶೇ.6 ಮತಗಳನ್ನು ಪಡೆದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ