AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಸರ್ಕಾರಿ ನೌಕರರು ಮುಷ್ಕರದಲ್ಲಿ ಭಾಗವಹಿಸಬಾರದು ಎಂದು ಹೈಕೋರ್ಟ್ ಹೇಳಿದ್ದರೂ, ಕೇರಳದ ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಕಡಿಮೆ

ಅಂಗಡಿ, ವ್ಯಾಪಾರ ಕೇಂದ್ರಗಳು ಮುಚ್ಚಿದ್ದು ಹಲವಡೆ ಬಲವಂತವಾಗಿ ಮುಚ್ಚಿಸಲಾಗಿದೆ. ಸಾರ್ವತ್ರಿಕ ಮುಷ್ಕರದ ಸಮಯದಲ್ಲಿ ನೌಕರರು ಮತ್ತು ಶಿಕ್ಷಕರ ಅನಧಿಕೃತ ಗೈರುಹಾಜರಿಯನ್ನು ಗೈರು ಹಾಜರಿ ಎಂದೇ ಎಂದು ಪರಿಗಣಿಸಬೇಕು ಎಂದು ಕೇರಳ ಹೈಕೋರ್ಟ್ ಸರ್ಕಾರಕ್ಕೆ ಹೇಳಿದೆ.

Bharat Bandh: ಸರ್ಕಾರಿ ನೌಕರರು ಮುಷ್ಕರದಲ್ಲಿ ಭಾಗವಹಿಸಬಾರದು ಎಂದು ಹೈಕೋರ್ಟ್ ಹೇಳಿದ್ದರೂ, ಕೇರಳದ ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಕಡಿಮೆ
ಕೇರಳದ ತಿರುವನಂತಪುರಂನಲ್ಲಿ ಭಾರತ್ ಬಂದ್​​ಗೆ ಬೆಂಬಲ ಘೋಷಿಸಿ ನಡೆದ ಕಾರ್ಮಿಕರ ಜಾಥಾImage Credit source: ಪಿಟಿಐ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 29, 2022 | 3:51 PM

Share

ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ 48 ಗಂಟೆಗಳ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರದ(Bharat Bandh) ಎರಡನೇ ದಿನವಾದ ಮಂಗಳವಾರ ಕೇರಳದ ಸರ್ಕಾರಿ ಕಚೇರಿಗಳಲ್ಲಿ ಕಡಿಮೆ ಹಾಜರಾತಿ ವರದಿಯಾಗಿದೆ. ಮುಷ್ಕರದಲ್ಲಿ ಭಾಗವಹಿಸುವ ನೌಕರರ ಗೈರುಹಾಜರಿಯನ್ನು ರಜೆ ಎಂದು ಪರಿಗಣಿಸುವ ಬದಲು ಗೈರು ಹಾಜರಿ ಎಂದೇ ಪರಿಗಣಿಸಿ ವೇತನ ಕಡಿತ ಮಾಡಲಾಗುವುದು ಎಂದು ಕೇರಳ ಹೈಕೋರ್ಟ್ (Kerala High Court) ಸೋಮವಾರ ಹೇಳಿದೆ. ಕೇರಳದಲ್ಲಿ (Kerala) ಮುಷ್ಕರದ ಎರಡನೇ ದಿನವಾದ ಮಂಗಳವಾರವೂ ಬಸ್ ರಸ್ತೆಗಿಳಿದಿಲ್ಲ. ಅಂಗಡಿ, ವ್ಯಾಪಾರ ಕೇಂದ್ರಗಳು ಮುಚ್ಚಿದ್ದು ಹಲವಡೆ ಬಲವಂತವಾಗಿ ಮುಚ್ಚಿಸಲಾಗಿದೆ. ಸಾರ್ವತ್ರಿಕ ಮುಷ್ಕರದ ಸಮಯದಲ್ಲಿ ನೌಕರರು ಮತ್ತು ಶಿಕ್ಷಕರ ಅನಧಿಕೃತ ಗೈರುಹಾಜರಿಯನ್ನು ಗೈರು ಹಾಜರಿ ಎಂದೇ ಎಂದು ಪರಿಗಣಿಸಬೇಕು ಎಂದು ಕೇರಳ ಹೈಕೋರ್ಟ್ ಸರ್ಕಾರಕ್ಕೆ ಹೇಳಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್ ಮಣಿಕುಮಾರ್ ಅವರ ವಿಭಾಗೀಯ ಪೀಠ, ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ನೌಕರರು ಸಾರ್ವತ್ರಿಕ ಮುಷ್ಕರದಲ್ಲಿ ತೊಡಗುವುದನ್ನು ತಡೆಯಲು ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಮುಷ್ಕರ ನಡೆಯುತ್ತಿರುವ ದಿನಗಳ ವೇತನವನ್ನು ಮುಂದಿನ ತಿಂಗಳ ವೇತನದಿಂದ ತಡೆಹಿಡಿಯಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಮುಷ್ಕರದ ದಿನಗಳಲ್ಲಿ ಅನಿವಾರ್ಯ ಕಾರಣಗಳನ್ನು ಹೊರತುಪಡಿಸಿ ನೌಕರರಿಗೆ ಮತ್ತು ಶಿಕ್ಷಕರಿಗೆ ಯಾವುದೇ ರಜೆ ನೀಡಲಾಗುವುದಿಲ್ಲ.ಮುಷ್ಕರದ ದಿನಗಳಲ್ಲಿ ಹಿಂಸಾಚಾರದಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅದು ಹೇಳಿದೆ. ಮುಷ್ಕರದ ಸಮಯದಲ್ಲಿ ಕರ್ತವ್ಯದಿಂದ ದೂರವಿರುವ ತಾತ್ಕಾಲಿಕ ನೇಮಕಾತಿಗಳನ್ನು ಸೇವೆಯಿಂದ ತೆಗೆದುಹಾಕಲಾಗುತ್ತದೆ. ನೌಕರರು ಕಚೇರಿಗಳನ್ನು ತಲುಪಲು ಅನುಕೂಲವಾಗುವಂತೆ ಸೇವೆಯನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸಾರಿಗೆ ನಿಗಮಕ್ಕೆ ಆದೇಶದಲ್ಲಿ ಸೂಚಿಸಲಾಗಿದೆ.

ಆದರೆ ಈ ಆದೇಶವು ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಖಾತ್ರಿಪಡಿಸಿಕೊಳ್ಳುವಲ್ಲಿ ಹೆಚ್ಚಿನ ಪರಿಣಾಮ ಬೀರಿಲ್ಲ. 4,800 ಸಿಬ್ಬಂದಿ ಇರುವ ವಿಧಾನಸಭಾ ಕಚೇರಿಯಲ್ಲಿ 200 ಕ್ಕಿಂತ ಕಡಿಮೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರು. ಇತರ ಹಲವು ಸರ್ಕಾರಿ ಕಚೇರಿಗಳಲ್ಲಿ ಆಡಳಿತಾರೂಢ ಎಲ್‌ಡಿಎಫ್ ಮತ್ತು ವಿರೋಧ ಪಕ್ಷ ಯುಡಿಎಫ್ ಎರಡಕ್ಕೂ ಸೇರಿದ ನೌಕರರು ಇತರರನ್ನು ಕರ್ತವ್ಯಕ್ಕೆ ಹಾಜರಾಗದಂತೆ ತಡೆದಿದ್ದಾರೆ.

ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಅಂಗಡಿಗಳು ಮತ್ತು ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಮುಷ್ಕರ ನಿರತರು ಟ್ರಕ್‌ಗಳು ಮತ್ತು ಖಾಸಗಿ ವಾಹನಗಳನ್ನು ನಿಲ್ಲಿಸಿದರು ಎಂದು ಆರೋಪಿಸಲಾಗಿದೆ. ರಾಜ್ಯ ಸಾರಿಗೆ ನಿಗಮವು ಮುಷ್ಕರದ ಎರಡನೇ ದಿನ ಕೆಲವು ಸೇವೆಗಳನ್ನು ಮಾತ್ರ ನಿರ್ವಹಿಸಿದೆ.

ಟ್ರೇಡ್ ಯೂನಿಯನ್ಸ್ ಕಾಯಿದೆ ಅಡಿಯಲ್ಲಿರುವ ಶಾಸನಬದ್ಧ ನಿಬಂಧನೆಗಳಿಗೆ ಸಂಬಂಧಿಸಿದ ಟ್ರೇಡ್ ಯೂನಿಯನ್ ಚಟುವಟಿಕೆಗಳನ್ನು ಆಡಳಿತಕ್ಕೆ ಅಡ್ಡಿಪಡಿಸಲು ಅನುಮತಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದ್ದರೂ, ಆಡಳಿತಾರೂಢ ಸಿಪಿಐ(ಎಂ) ನಾಯಕರು ಹೈಕೋರ್ಟ್ ನಿರ್ದೇಶನದ ವಿರುದ್ಧ ಹರಿಹಾಯ್ದಿದ್ದಾರೆ. ಪಕ್ಷದ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ “ಬಾಯಿ ಮುಚ್ಚಿಕೊಂಡು ನಿಮ್ಮ ಕೆಲಸ ಮಾಡಿ” ಎಂದು ನ್ಯಾಯಾಲಯ ಹೇಳಿದಂತಿದೆ ಎಂದಿದ್ದಾರೆ. “ಉದ್ಯೋಗಿಗಳು ಎರಡು ದಿನಗಳ ಕಾಲ ತಮ್ಮ ಸಂಬಳವನ್ನು ತ್ಯಜಿಸಿ ಮುಷ್ಕರಕ್ಕೆ ಸಿದ್ಧರಾಗಿರಬೇಕು. ನ್ಯಾಯಾಲಯದ ಮಧ್ಯಪ್ರವೇಶ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸವಾಲಾಗಿದೆ. ಆದರೆ ಮುಷ್ಕರಕ್ಕೆ ಸರ್ಕಾರದ ಪ್ರಾಯೋಜಕತ್ವವಿಲ್ಲ’’ ಎಂದರು.

ಸಿಪಿಐ(ಎಂ) ಕಣ್ಣೂರು ಜಿಲ್ಲಾ ಕಾರ್ಯದರ್ಶಿ ಎಂ.ವಿ.ಜಯರಾಜನ್ ಮಾತನಾಡಿ, ನ್ಯಾಯಾಂಗದ ಮೇಲೆ ಬ್ರಿಟಿಷರ ಕಾಲದ ಭೂತ ಹಿಡಿದಿದೆ. “ನ್ಯಾಯಾಲಯದ ಮಾತುಗಳ ಮೂಲಕ ಬಂದದ್ದು ತುರ್ತು ಪರಿಸ್ಥಿತಿಯ ಧ್ವನಿಯಾಗಿದೆ” ಎಂದು ಅವರು ಹೇಳಿದರು.

ಏತನ್ಮಧ್ಯೆ, ಸಿಪಿಐ(ಎಂ) ನಾಯಕರು ಜನ ಸಂಚಾರಕ್ಕೆ ತಡೆಯೊಡ್ಡಿದ್ದು ಹಲವಾರು ಸ್ಥಳಗಳಲ್ಲಿ ಕಚೇರಿಗಳನ್ನು ಬಲವಂತವಾಗಿ ಮುಚ್ಚಿಸಿದ್ದಾರೆ. ಆದರೆ ಮುಂದಿನ ತಿಂಗಳು ನಡೆಯಲಿರುವ ಪಾರ್ಟಿ ಕಾಂಗ್ರೆಸ್ (ಪಕ್ಷದ ಸಮ್ಮೇಳನಕ್ಕೆ) ಸಂಬಂಧಿಸಿದ ಕೆಲಸಗಳು ಕಣ್ಣೂರಿನಲ್ಲಿ ಮುಂದುವರಿಯುವಂತೆ ನೋಡಿಕೊಂಡರು. ”ಸಣ್ಣಪುಟ್ಟ ಕಾಮಗಾರಿಗಳು ಮಾತ್ರ ನಡೆಯುತ್ತಿವೆ. ಬಹುತೇಕ ಕೆಲಸ ಮುಗಿದಿದೆ. ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ ಎಂದು ಜಯರಾಜನ್ ಹೇಳಿದರು.

ಇದನ್ನೂ ಓದಿ: Bharat bandh ಸರ್ಕಾರಿ ನೌಕರರಿಗೆ ಮುಷ್ಕರದಲ್ಲಿ ಭಾಗವಹಿಸುವ ಹಕ್ಕಿಲ್ಲ: ಕೇರಳ ಹೈಕೋರ್ಟ್

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್