ನವದೆಹಲಿ: ಕೇಂದ್ರದ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಬುಧವಾರ ಸಂಜೆ 5 ಗಂಟೆಗೆ ಪ್ರತಿಪಕ್ಷಗಳು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಲಿವೆ.
ರಾಹುಲ್ ಗಾಂಧಿ, ಶರದ್ ಪವಾರ್ ಸೇರಿದಂತೆ ವಿಪಕ್ಷಗಳ 5 ಸದಸ್ಯರ ತಂಡ ಕೋವಿಂದ್ ಅವರನ್ನು ಭೇಟಿಯಾಗಲಿದೆ ಎಂದು ಸಿಪಿಐಎಂ ನಾಯಕ ಸೀತಾರಾಂ ಯೆಚೂರಿ ಹೇಳಿದ್ದಾರೆ. ಇಂದು ಸಂಜೆ 7 ಗಂಟೆಗೆ ರೈತರು ಕೇಂದ್ರ ಸಚಿವ ಅಮಿತ್ ಶಾ ಜತೆ ಮಾತುಕತೆ ನಡೆಸಲಿದ್ದಾರೆ. ಭಾರತೀಯ ಕಿಸಾನ್ ಸಂಘಟನೆಯ ವಕ್ತಾರ ರಾಕೇಶ್ ಟಿಕಾಯತ್ ಈ ವಿಷಯವನ್ನು ತಿಳಿಸಿದ್ದಾರೆ.
ಪ್ರತಿಭಟನಾನಿರತ ರೈತರನ್ನು ಸಂಜೆ 7 ಗಂಟೆಗೆ ಮಾತುಕತೆಗೆ ಕರೆದ ಗೃಹ ಸಚಿವ ಅಮಿತ್ ಶಾ
Published On - 5:49 pm, Tue, 8 December 20