AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat bandh ಸೆ. 27 ರಂದು ಭಾರತ್ ಬಂದ್; ರೈತರಿಗೆ ಬೆಂಬಲ ಘೋಷಿಸಿ ಎಸ್‌ಕೆಎಂ ಕರೆ ನೀಡಿದ ಬಂದ್​​ಗೆ 100 ಸಂಘಟನೆಗಳಿಂದ ಬೆಂಬಲ

ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಟನೆಗಳು, ರೈತ ಸಂಘಗಳು, ಯುವಕರು, ಶಿಕ್ಷಕರು, ಕಾರ್ಮಿಕರು ಮತ್ತು ಇತರರು ಸೇರಿದಂತೆ ಸುಮಾರು 100 ಸಂಸ್ಥೆಗಳು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿರುವ ಸೆಪ್ಟೆಂಬರ್ 27 ರ ಭಾರತ್ ಬಂದ್‌ಗೆ ಬೆಂಬಲ ಸೂಚಿಸಿವೆ.

Bharat bandh ಸೆ. 27 ರಂದು ಭಾರತ್ ಬಂದ್; ರೈತರಿಗೆ ಬೆಂಬಲ ಘೋಷಿಸಿ ಎಸ್‌ಕೆಎಂ ಕರೆ ನೀಡಿದ ಬಂದ್​​ಗೆ 100 ಸಂಘಟನೆಗಳಿಂದ ಬೆಂಬಲ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 23, 2021 | 12:07 PM

Share

ದೆಹಲಿ: 27 ಸೆಪ್ಟೆಂಬರ್ 2021ರ ಭಾರತ್ ಬಂದ್ (Bharat Bandh) ಅನ್ನು ಯಶಸ್ವಿಗೊಳಿಸುವ ಸಲುವಾಗಿ ಎಡಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷ (TDP) ಬುಧವಾರ ಆಂಧ್ರಪ್ರದೇಶದ ಕಮ್ಯುನಿಸ್ಟ್ ಪಾರ್ಟಿ ಇಂಡಿಯಾ (CPI) ಕಚೇರಿಯಲ್ಲಿ ಸೇರಿದ್ದರು. ಸಭೆಯಲ್ಲಿ ಸಿಪಿಐ ರಾಜ್ಯ ನಾಯಕ ದೊಣೆಪುಡಿ ಶಂಕರ್, “ದೆಹಲಿಯಲ್ಲಿ ರೈತರು ಒಂಬತ್ತು ತಿಂಗಳಿಂದ ಆಂದೋಲನ ನಡೆಸುತ್ತಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸಲು ಈ ಭಾರತ್ ಬಂದ್ ನಡೆಯಲಿದೆ” ಎಂದು ಹೇಳಿದರು. ಕೇಂದ್ರದ ನೀತಿ ವಿರುದ್ಧ ಮತ್ತಷ್ಟು ವಾಗ್ದಾಳಿ ನಡೆಸಿದ ಅವರು “ಕೇಂದ್ರ ಸರ್ಕಾರದ ಮೂರು ಕಪ್ಪು ಕಾನೂನುಗಳು ರೈತರನ್ನು ಬಿಕ್ಕಟ್ಟಿಗೆ ಸಿಲುಕಿಸಿವೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ನಗದೀಕರಣ ಯೋಜನೆ (National Monetisation Pipeline) ಹೆಸರಿನಲ್ಲಿ ರೈಲ್ವೆ ನಿಲ್ದಾಣಗಳು, ರೈಲ್ವೆ ಮಾರ್ಗಗಳು, ಟೆಲಿಕಾಂ, ತೈಲ, ಅನಿಲ, ವಿಮೆ, ಬ್ಯಾಂಕುಗಳು, ವಿಮಾನ ನಿಲ್ದಾಣ ಮತ್ತು ಬಂದರುಗಳನ್ನು ಮಾರಾಟ ಮಾಡುತ್ತಿದೆ ಎಂದಿದ್ದಾರೆ. ಇದಲ್ಲದೆ ಸರ್ಕಾರವು ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಯೋಜಿಸಿದೆ ಎಂದು ಹೇಳಿದರು.

ಕೇಂದ್ರವು 75 ಲಕ್ಷ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಆಸ್ತಿಗಳನ್ನು ಬೇಕಾಬಿಟ್ಟಿ  ಬೆಲೆಯಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದೆ. ಅದು ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಅನ್ನು ನಷ್ಟದಲ್ಲಿ ಖಾಸಗೀಕರಣಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದರು. “ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳು ಸಹ ಹೆಚ್ಚಾಗಿದೆ. ಶಂಕರ್ ಅವರು ‘ಭಾರತ್ ಬಂದ್’ ನಲ್ಲಿ ಭಾಗವಹಿಸುವಂತೆ ಸಾಮಾನ್ಯ ಜನರು, ರಾಜಕೀಯ ಪಕ್ಷಗಳು, ಸಮೂಹ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳಿಗೆ ಕರೆ ನೀಡಿದರು.

ಭಾರತ್ ಬಂದ್​​ಗೆ ಬೆಂಬಲ ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಟನೆಗಳು, ರೈತ ಸಂಘಗಳು, ಯುವಕರು, ಶಿಕ್ಷಕರು, ಕಾರ್ಮಿಕರು ಮತ್ತು ಇತರರು ಸೇರಿದಂತೆ ಸುಮಾರು 100 ಸಂಸ್ಥೆಗಳು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿರುವ ಸೆಪ್ಟೆಂಬರ್ 27 ರ ಭಾರತ್ ಬಂದ್‌ಗೆ ಬೆಂಬಲ ಸೂಚಿಸಿವೆ.

ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷ ಡಾ.ಅಶೋಕ್ ಧವಲೆ ಅವರು ಸೋಮವಾರ ಮುಂಬೈನಲ್ಲಿ ನಡೆದ ಎಐಟಿಯುಸಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಭಾಲಚಂದ್ರ ಕಾಂಗೋ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಗುಂಪುಗಳ ರಾಜ್ಯ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಸುಮಾರು 100 ಸಂಘಟನೆಗಳ 200 ಕ್ಕೂ ಹೆಚ್ಚು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಭಾಷಣಕಾರರು ನಡೆಯುತ್ತಿರುವ ರೈತರು ಮತ್ತು ಕಾರ್ಮಿಕರ ಹೋರಾಟಗಳ ಮೇಲೆ ಕೇಂದ್ರೀಕರಿಸಿದರು ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಆಡಳಿತದ “ದಿವಾಳಿತನ ನೀತಿಗಳ” ವಿರುದ್ಧ ‘ಭಾರತ್ ಬಂದ್’ನ ಮಹತ್ವದ ಬಗ್ಗೆ ಗಮನ ಹರಿಸಿದರು.

ಸಭೆಯಲ್ಲಿ  ಮಹಾರಾಷ್ಟ್ರ ಮತ್ತು ಇತರೆಡೆ ಎಲ್ಲ ಸಂಘಟನೆಗಳು ಬೆಂಬಲಿಗರನ್ನು ಒಟ್ಟುಗೂಡಿಸಲು ಮತ್ತು ‘ಭಾರತ್ ಬಂದ್’ ಯಶಸ್ವಿಯಾಗುವಂತೆ ಮಾಡಲು ಪ್ರೋತ್ಸಾಹಿಸಲಾಯಿತು. ಕರ್ನಾಟಕ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘವು ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ನೀಡಿದ ರಾಷ್ಟ್ರವ್ಯಾಪಿ ಬಂದ್ ಕರೆಗೆ ಅನುಮೋದನೆ ನೀಡಿದೆ.

ಇದನ್ನೂ ಓದಿ: Narendra Modi US visit ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ನ್ನು ಇಂದು ಭೇಟಿಯಾಗಲಿದ್ದಾರೆ ನರೇಂದ್ರ ಮೋದಿ

(Bharat Bandh on 27 September Around 100 organisation supports Bandh called by the Samyukta Kisan Morcha)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ