Bharat Bandh Today LIVE: ಕೇಂದ್ರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್
Farmers Protest Bharat Bandh Today LIVE Updates: 119 ದಿನಗಳಿಂದ ದೆಹಲಿಯಲ್ಲಿ ಹೋರಾಟ ನಡೆಸ್ತಿರುವ ರೈತರ ಹೋರಾಟಕ್ಕೆ ಇಂದು 4 ತಿಂಗಳು ತುಂಬಿದ ಹಿನ್ನೆಲೆಯಲ್ಲಿ ಭಾರತ್ ಬಂದ್‌ಗೆ ರೈತ ಸಂಘಟನೆಗಳು ಕರೆ ನೀಡಿವೆ.
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ಆಗ್ರಹಿಸಿ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಭಾರತ್ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ಕರೆ ನೀಡಲಾಗಿದೆ. 119 ದಿನಗಳಿಂದ ದೆಹಲಿಯಲ್ಲಿ ಹೋರಾಟ ನಡೆಸ್ತಿರುವ ರೈತರ ಹೋರಾಟಕ್ಕೆ ಇಂದು 4 ತಿಂಗಳು ತುಂಬಿದ ಹಿನ್ನೆಲೆಯಲ್ಲಿ ಭಾರತ್ ಬಂದ್‌ಗೆ ರೈತ ಸಂಘಟನೆಗಳು ಕರೆ ನೀಡಿವೆ. ಈ ಹೋರಾಟಕ್ಕೆ ರಾಜ್ಯ ರೈತ ಸಂಘಗಳು, ಸಂಯುಕ್ತ ಹೋರಾಟ-ಕರ್ನಾಟಕ ಸಮಿತಿ ಸೇರಿದಂತೆ ಕೆಲ ಸಂಘಟನೆಗಳು ಬೆಂಬಲ ನೀಡಿವೆ.
LIVE NEWS & UPDATES
-
50 ರನ್ ಪೂರೈಸಿದ ಭಾರತ
ಆರಂಭಿಕರನ್ನು ಕಳೆದುಕೊಂಡಿರು ಟೀಂ ಇಂಡಿಯಾ ಪ್ರಮುಖ 2 ವಿಕೆಟ್ ಕಳೆದುಕೊಂಡು ಬರೋಬ್ಬರಿ 13 ಓವರ್ಗಳ ನಂತರ 50 ರನ್ ಪೂರೈಸಿದೆ. ನಾಯಕ ಕೊಹ್ಲಿ ಹಾಗೂ ಕನ್ನಡಿಗ ರಾಹುಲ್ ಬ್ಯಾಟಿಂಗ್ ಮಾಡುತ್ತಿದ್ದಾರೆ.
-
ಬಾಗಲಕೋಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
ಭಾರತ್ ಬಂದ್ ಬೆಂಬಲಿಸಿ ಬಾಗಲಕೋಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೀಳಗಿ ಕ್ರಾಸ್ ಬಳಿಯ ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
-
ಅಮೃತಸರ್-ದೆಹಲಿ ರೈಲ್ವೆ ಮಾರ್ಗ ಬಂದ್ ಮಾಡಿ ಪ್ರತಿಭಟನೆ
ಸಂಯುಕ್ತ ಕಿಸಾನ್ ಮೋರ್ಚಾದಿಂದ ಕರೆಕೊಟ್ಟ ಭಾರತ್ ಬಂದ್ ಹಿನ್ನೆಲೆಯಲ್ಲಿ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರತಿಭಟನಾಕಾರರು ಅಮೃತಸರ್-ದೆಹಲಿ ರೈಲ್ವೆ ಮಾರ್ಗವನ್ನು ಬಂದ್ ಮಾಡಿ ಅಮೃತಸರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
Punjab: Kisan Mazdoor Sangharsh committee members block Amritsar-Delhi railway track in Amritsar, during the 12 hour long ‘Bharat Bandh' called by Samyukt Kisan Morcha pic.twitter.com/is8yrF5ZTR
— ANI (@ANI) March 26, 2021
ಪೊಲೀಸರ ವಶದಲ್ಲಿ ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟನೆಗೆ ಬಂದ ಕರ್ನಾಟಕ ರಾಜ್ಯ ರೈತರ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ಮಾಡದಂತೆ ಮನವಿ ಮಾಡಿ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ನಲ್ಲಿ ಕರೆದುಕೊಂಡು ಹೋಗಿದ್ದಾರೆ.
ಪ್ರತಿಭಟನೆಯನ್ನ ಹತ್ತಿಕ್ಕುವುದೇ ಸರ್ಕಾರದ ಕೆಲಸ -ಕೋಡಿಹಳ್ಳಿ ಚಂದ್ರಶೇಖರ್
ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿಭಟನಾಕಾರರನ್ನ ತಡೆಯುತ್ತಿರುವುದು, ಪ್ರತಿಭಟನೆಗೆ ಅಡ್ಡಿಮಾಡುತ್ತಿರುವುದು ನಾಚಿಕೆಗೇಡಿನ ಕೆಲಸ. ಪ್ರಜಾಪ್ರಭುತ್ವ ಉಳಿಸಲು ನಮ್ಮ ಹೋರಾಟ ಮುಂದುವರೆಯುತ್ತಿದೆ. ಚಳುವಳಿಯ ಒತ್ತಡಕ್ಕೆ ಪೆಟ್ರೋಲ್ ಬೆಲೆ ಇಳಿಸುವ ನಾಟಕವಾಡ್ತಾಯಿದೆ. ಸರ್ಕಾರ ಎಲ್ಲವನ್ನೂ ಬ್ಯಾಲೆನ್ಸ್ ಮಾಡಲು ಪ್ರಯತ್ನ ಮಾಡುತ್ತಿದೆ. ರಾಜ್ಯಾದ್ಯಂತ ಇಂದು ಪ್ರತಿಭಟನೆ ನಡೆಯುತ್ತಿದೆ. ಸಿಎಂ ಯಡಿಯೂರಪ್ಪನವರು ಈ ಧೋರಣೆಯನ್ನ ಮುಂದುವರಿಸುವುದು ಸರಿಯಲ್ಲ. ಸರ್ಕಾರದ ಈ ನೀತಿಗೆ ನಮ್ಮ ದಿಕ್ಕಾರ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ಹೊರ ಹಾಕಿದ್ದಾರೆ.
3 ಕೃಷಿ ಕಾಯ್ದೆಗಳ ಅಣಕು ಶವಯಾತ್ರೆ ಮಾಡಿ ಪ್ರತಿಭಟನಾಕಾರರ ಆಕ್ರೋಶ
ಕೇಂದ್ರದ ಹೊಸ ಕೃಷಿ ಕಾಯ್ದೆ ಖಂಡಿಸಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಗನ್‌ಹೌಸ್ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ರೈತ ಮುಖಂಡ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ 3 ಕೃಷಿ ಕಾಯ್ದೆಗಳ ಅಣಕು ಶವಯಾತ್ರೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಪ್ರತಿಭಟನೆಗೂ ಮುನ್ನವೇ ಪ್ರತಿಭಟನಾ ನಿರತರ ಬಂಧನ
ಸರ್ವಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಮತ್ತು ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ಬಳಿ ಧರಣಿ ನಡೆಸಲು ಮುಂದಾದ ಕಾರಣ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆಗೆ ಅನುಮತಿ ಇಲ್ಲ. ಹೀಗಾಗಿ ಪ್ರತಿಭಟನಾ ನಿರತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆ -ಡಿ.ಕೆ.ಶಿವಕುಮಾರ್
ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರೈತ ಮುಖಂಡರ ವಿರುದ್ಧ ನಿನ್ನೆ ಪ್ರಕರಣ ದಾಖಲಿಸಿದ್ದಾರೆ. ಕೊರೊನಾ ವೇಳೆ ಬಿಜೆಪಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಆಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿರಲಿಲ್ಲ. ಈಗ ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಹೀಗೆ ಮಾಡುವುದಕ್ಕೆ ಸರ್ಕಾರಕ್ಕೆ ಕಾಮನ್‌ಸೆನ್ಸ್ ಇರಬೇಕು. ಹೋರಾಟಗಾರರನ್ನು ಕುಗ್ಗಿಸುವಂತಹ ಕೆಲಸ ಮಾಡಬಾರದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ರು.
ರೈತರ ಪ್ರತಿಭಟನೆಗೆ ರಾಹುಲ್ ಗಾಂಧಿ ಬೆಂಬಲ
ಕೇಂದ್ರ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ.
भारत का इतिहास गवाह है कि सत्याग्रह से ही अत्याचार, अन्याय व अहंकार का अंत होता है।
आंदोलन देशहित में हो और शांतिपूर्ण हो!#आज_भारत_बंद_है
— Rahul Gandhi (@RahulGandhi) March 26, 2021
32 ಕಡೆ ರೈಲು ಸಂಚಾರದಲ್ಲಿ ವ್ಯತ್ಯಾಸ
ಕೇಂದ್ರ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಿಂದ 32 ಕಡೆ ರೈಲು ಸಂಚಾರದಲ್ಲಿ ವ್ಯತ್ಯಾಸ, 4 ಶತಾಬ್ದಿ ರೈಲುಗಳು ಕ್ಯಾನ್ಸಲ್ ಆಗಿವೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ
ಭಾರತ್ ಬಂದ್ ಪ್ರತಿಭಟನೆಗೆ ಇಲ್ಲಾ ಯಾವುದೇ ಅನುಮತಿ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ. ಆದ್ರೆ ಪ್ರತಿಭಟನೆ ಮಾಡಿದರೆ ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚಿಸಿದ್ದಾರೆ. ಈಗಾಗಲೇ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಮೂವರು ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ಮಾಡಿದರೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗುತ್ತೆ. ಟೌನ್ ಹಾಲ್, ಮೈಸೂರು ಬ್ಯಾಂಕ್ ವೃತ್ತ ಹೀಗೆ ಎಲ್ಲೂ ಕೂಡ ಪ್ರತಿಭಟನೆ, ರ‍್ಯಾಲಿಗೆ ಅನುಮತಿ ಇಲ್ಲ.
ಪ್ರತಿಭಟನಾ ನಿರತರನ್ನು ಬಂಧಿಸಿದ ಪೊಲೀಸ್
ಭಾರತ್ ಬಂದ್ ಬೆಂಬಲಿಸಿ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಕೆಲ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಆದ್ರೆ ಬಂದ್‌ಗೆ ಪೊಲೀಸರು ಪರವಾನಗಿ ನೀಡದ ಹಿನ್ನೆಲೆಯಲ್ಲಿ ಸದ್ಯ ಕೇಂದ್ರ ಬಸ್ ನಿಲ್ದಾಣದ ಮುಂದೆ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದರು. ಆದ್ರೆ ಪ್ರತಿಭಟನಾ ನಿರತರನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಾಜಿಪುರ್ ಗಡಿ ಬಳಿ ಹಾಡುತ್ತ ನೃತ್ಯ ಮಾಡುತ್ತ ಪ್ರತಿಭಟನೆ
ಸಂಯುಕ್ತ್ ಕಿಸಾನ್ ಮೋರ್ಚಾದಿಂದ ಕರೆಕೊಟ್ಟಿರುವ 12 ಗಂಟೆಗಳ ಭಾರತ್ ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ಗುಂಪೊಂದು ಗಾಜಿಪುರ್ ಗಡಿ ಬಳಿ ಹಾಡುತ್ತ ನೃತ್ಯ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದೆ.
#WATCH A group of protesters sing and dance at Ghazipur border (Delhi-UP) during 12-hour 'Bharat Bandh' called by Samyukt Kisan Morcha against Centre's Farm Laws pic.twitter.com/gkPWwKnTiP
— ANI (@ANI) March 26, 2021
ರೈಲು ಹಳಿಗಳ ಮೇಲೆ ಕೂತು ಪ್ರತಿಭಟನೆ
ಸಂಯುಕ್ತ್ ಕಿಸಾನ್ ಮೋರ್ಚಾದಿಂದ ಕರೆಕೊಟ್ಟಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು ಅಮೃತಸರದಲ್ಲಿ ರೈಲ್ವೆ ಹಳಿಗಳ ಮೇಲೆ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ.
Punjab: Protestors block railway track in Amritsar as a mark of protest against the three agricultural laws during 'Bharat Bandh' called by Samyukt Kisan Morcha pic.twitter.com/dAZgfXa3yw
— ANI (@ANI) March 26, 2021
ಆಂಧ್ರ ಪ್ರದೇಶದಲ್ಲಿ ಬಂದ್‌ಗೆ ವ್ಯಾಪಕ ಬೆಂಬಲ
ಆಂಧ್ರ ಪ್ರದೇಶದಲ್ಲಿ ಭಾರತ್ ಬಂದ್‌ಗೆ ವ್ಯಾಪಕ ಬೆಂಬಲ ಸಿಕ್ಕಿದೆ. ಆಂಧ್ರ ಪ್ರದೇಶದ ಗುಂಟೂರು, ವಿಜಯನಗರಂ, ಕರ್ನೂಲು, ಶ್ರೀಕಾಕುಳಂ, ವಿಶಾಖಪಟ್ಟಣಂ ಸೇರಿ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಬಸ್ ನಿಲ್ದಾಣಗಳಿಗೆ ಬಸ್ಗಳು ಸೀಮಿತವಾಗಿದ್ದು ರಸ್ತೆಗಳು ಬಿಕೋ ಎನ್ನುತ್ತಿವೆ. ಕೆಲ ಸಂಘಟನೆಗಳು ಪ್ರತಿಭಟನೆ ಸಹ ನಡೆಸುತ್ತಿವೆ.
ತುಮಕೂರಿನಲ್ಲಿ ಭಾರತ್ ಬಂದ್ಗಿಲ್ಲ ಬೆಂಬಲ
ತುಮಕೂರಿನಲ್ಲಿ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ. ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಬೆಳಿಗ್ಗೆ10 ಗಂಟೆ ಬಳಿಕ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಪ್ರತಿಭಟನೆ ಹೊರತುಪಡಿಸಿ ಯಾವುದೇ ಬಂದ್ ಇಲ್ಲ.
ಕರ್ನಾಟಕದಲ್ಲಿ ಭಾರತ್ ಬಂದ್ ಹಿನ್ನೆಲೆ ಬಿಗಿ ಪೊಲೀಸ್ ಬಂದೋ ಬಸ್ತ್
ರೈತರ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ. 3 ಎಸಿಪಿ, 8 ಇನ್ಸ್ಪೆಕ್ಟರ್, 20 ಸಬ್ ಇನ್ಸ್ಪೆಕ್ಟರ್, ಸೇರಿದಂತೆ 350 ಪೊಲೀಸರಿಂದ ಕಣ್ಗಾವಲು. ಜೊತೆಗೆ 4 ಕೆಎಸ್‌ಆರ್‌ಪಿ ತುಕಡಿ ಜೊತೆಗೆ 20 ಬಿಎಂಟಿಸಿ ಬಸ್ ನಿಯೋಜನೆ ಮಾಡಲಾಗಿದೆ. 10 ಗಂಟೆಗೆ ಟೌನ್ ಹಾಲ್ ಮುಂದೆ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುತ್ತೆ. ನಂತರ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಅನ್ನದಾತರು ಶವಯಾತ್ರೆ ನಡೆಸಲಿದ್ದಾರೆ.
Published On - Mar 26,2021 2:38 PM