Bharat Bandh: ಇಂದು ಭಾರತ್ ಬಂದ್; ಏನು ತೆರೆದಿರುತ್ತದೆ? ಯಾವ ಸೇವೆ ಲಭ್ಯವಿರುವುದಿಲ್ಲ?
ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಇಂದು ದಿನವಿಡೀ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾರುಕಟ್ಟೆಗಳನ್ನು ಮುಚ್ಚುವಂತೆ ಎಲ್ಲಾ ವ್ಯಾಪಾರ ಸಂಸ್ಥೆಗಳಿಗೆ ಒತ್ತಾಯಿಸಿದೆ. ಸುಪ್ರೀಂ ಕೋರ್ಟ್ ತೀರ್ಪು ಎಸ್‌ಸಿ/ಎಸ್‌ಟಿ ಗುಂಪುಗಳಲ್ಲಿ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿತು. ಹೆಚ್ಚು ಅಗತ್ಯವಿರುವವರಿಗೆ ಆದ್ಯತೆ ನೀಡಿತು. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 21) ಭಾರತ್ ಬಂದ್‌ಗೆ ಕರೆ ನೀಡಿತು.
ನವದೆಹಲಿ: ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಇಂದು (ಆಗಸ್ಟ್ 21) ಭಾರತ್ ಬಂದ್‌ಗೆ ಕರೆ ನೀಡಿದೆ. ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮೀಸಲಾತಿಗಳ ಕುರಿತ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ವಿರೋಧಿಸಿ ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯಿಂದ ಬಂದ್‌ಗೆ ಕರೆ ನೀಡಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪು SC/ST ಗುಂಪುಗಳೊಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿತು. ಹೆಚ್ಚು ಅಗತ್ಯವಿರುವವರಿಗೆ ಆದ್ಯತೆ ನೀಡುತ್ತದೆ. ವಿವರಗಳನ್ನು ಪಡೆಯಲು ಸುಪ್ರೀಂ ಕೋರ್ಟ್ ತೀರ್ಪು SC/ST ಗುಂಪುಗಳಲ್ಲಿ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿತು. ಇದು ಹೆಚ್ಚು ಅಗತ್ಯವಿರುವವರಿಗೆ ಆದ್ಯತೆ ನೀಡುತ್ತದೆ. ಈ ನಿರ್ಧಾರವು ರಾಜಸ್ಥಾನದ ಎಸ್‌ಸಿ/ಎಸ್‌ಟಿ ಗುಂಪುಗಳಲ್ಲಿ ವ್ಯಾಪಕ ಅಸಮಾಧಾನವನ್ನು ಹುಟ್ಟುಹಾಕಿತು.
ಯಾವ ಸೇವೆಗಳು ತೆರೆದಿರುತ್ತದೆ?:
ತುರ್ತು ಸೇವೆಗಳು: ಆ್ಯಂಬುಲೆನ್ಸ್ ಸೇವೆಗಳು, ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳು ಕಾರ್ಯನಿರ್ವಹಿಸುತ್ತವೆ.
ಪೊಲೀಸ್ ಸೇವೆಗಳು: ಪೊಲೀಸ್ ಸೇವೆಗಳ ಕಾರ್ಯಾಚರಣೆ ಎಂದಿನಂತೆ ಮುಂದುವರಿಯುತ್ತದೆ.
ಔಷಧಾಲಯಗಳು: ಅಗತ್ಯ ವೈದ್ಯಕೀಯ ಸೇವೆಗಳು ಮತ್ತು ಔಷಧಿ ಅಂಗಡಿಗಳು ತೆರೆದಿರುತ್ತವೆ.
ಇದನ್ನೂ ಓದಿ: ಆಗಸ್ಟ್ 21-22ರಂದು ಪೋಲೆಂಡ್ಗೆ, ಆಗಸ್ಟ್ 23ರಂದು ಉಕ್ರೇನ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಬ್ಯಾಂಕ್‌ಗಳು, ಶಾಲೆಗಳು ಮತ್ತು ಕಾಲೇಜುಗಳು: ಎಲ್ಲಾ ವಾಣಿಜ್ಯ ಬ್ಯಾಂಕ್‌ಗಳು, ಶಾಲೆಗಳು ಬಂದ್‌ನ ಹೊರತಾಗಿಯೂ ಸಾಮಾನ್ಯವಾಗಿ ಕಾರ್ಯ ನಿರ್ವಹಿಸುವ ನಿರೀಕ್ಷೆಯಿದೆ.
ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಇಂದು ಒಂದು ದಿನದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಸಲುವಾಗಿ ಭಾರತ್ ಬಂದ್‌ಗೆ ಕರೆ ನೀಡಿದೆ. ಎಸ್‌ಸಿ/ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿಗೆ ಪ್ರತಿಕ್ರಿಯೆಯಾಗಿ ಬಂದ್‌ಗೆ ಕರೆ ನೀಡಲಾಗಿದೆ. ಹಲವು ರಾಜ್ಯಗಳ ಹಲವಾರು ಎಸ್‌ಸಿ/ಎಸ್‌ಟಿ ಗುಂಪುಗಳು ಬಂದ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿವೆ.
ಭಾರತ ಬಂದ್‌ಗೆ ಕಾರಣವೇನು?:
ಎಸ್‌ಸಿ ಮತ್ತು ಎಸ್‌ಟಿ ಗುಂಪಿನೊಳಗೆ ಉಪವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ ತೀರ್ಪು ಹಲವಾರು ಗುಂಪುಗಳ ನಡುವೆ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ. ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಉನ್ನತ ನ್ಯಾಯಾಲಯದ ತೀರ್ಪು ಒತ್ತಿಹೇಳಿದೆ. ಈ ನಿರ್ಧಾರವು ವಿವಿಧ ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳಿಂದ ವಿರೋಧವನ್ನು ಎದುರಿಸಿತು. ಇದು ಮೀಸಲಾತಿಯ ತತ್ವಗಳನ್ನು ದುರ್ಬಲಗೊಳಿಸುತ್ತದೆ ಎಂದು ವಾದಿಸುತ್ತದೆ. ಈ ತೀರ್ಪನ್ನು ಪ್ರಶ್ನಿಸಿ ಮತ್ತು ಹಿಂಪಡೆಯುವಂತೆ ಒತ್ತಾಯಿಸಿ ಭಾರತ್ ಬಂದ್‌ಗೆ ಕರೆ ನೀಡಲಾಗಿದೆ.
ಇದನ್ನೂ ಓದಿ: ರಾಖಿಯಲ್ಲಿ ದಾಖಲಾಯ್ತು ತಾಯಿ-ಮಗನ ಆಪ್ತ ಕ್ಷಣ; ಮೋದಿಗೆ ವಿಶೇಷ ರಾಖಿ ಕಟ್ಟಿದ ಬಾಲಕಿ
ಭಾರತ್ ಬಂದ್‌ಗೆ ಕರೆ ನೀಡಿದ್ದರೂ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಶಾಲೆಗಳು, ಕಾಲೇಜುಗಳು, ಪೆಟ್ರೋಲ್ ಪಂಪ್‌ಗಳು ಕಾರ್ಯನಿರ್ವಹಿಸಲಿವೆ ಎಂದು ವರದಿಗಳು ಸೂಚಿಸುತ್ತವೆ. ಇದಲ್ಲದೆ, ತುರ್ತು ಸೇವೆಗಳಾದ ವೈದ್ಯಕೀಯ, ಕುಡಿಯುವ ನೀರು, ಸಾರ್ವಜನಿಕ ಸಾರಿಗೆ, ರೈಲು ಸೇವೆಗಳು ಮತ್ತು ವಿದ್ಯುತ್ ಸೇವೆಗಳು ತೆರೆದಿರುತ್ತವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ