ಕೊವಿಡ್​ನಿಂದ ಗುಣಮುಖರಾದವರಿಗೂ ಲಸಿಕೆ ಅಗತ್ಯವಿದೆ: ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ

ಈಗಾಗಲೇ ಕೊವಿಡ್​ಗೆ ಒಳಗಾದವರು ಕೊರೊನಾ ಲಸಿಕೆ ಪಡೆಯುವುದು ಉತ್ತಮ. ಏಕೆಂದರೆ ಒಮ್ಮೆ ಕೊರೊನಾ ಸೋಂಕಿಗೆ ತುತ್ತಾದವರ ದೇಹದಲ್ಲಿ ಟಿ ಸೆಲ್​ಗಳು ಉತ್ತಮವಾಗಿ ಸ್ಪಂದಿಸುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಕೃಷ್ಣಾ ಎಲ್ಲಾ ತಿಳಿಸಿದ್ದಾರೆ.

ಕೊವಿಡ್​ನಿಂದ ಗುಣಮುಖರಾದವರಿಗೂ ಲಸಿಕೆ ಅಗತ್ಯವಿದೆ: ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ
ಸಾಂದರ್ಭಿಕ ಚಿತ್ರ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 23, 2020 | 8:45 PM

ಈಗಾಗಲೇ ಕೊವಿಡ್​ನಿಂದ ಗುಣಮುಖರಾದವರು ಸಹ ಲಸಿಕೆ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಭಾರತ್​ ಬಯೋಟೆಕ್​ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಎಲ್ಲಾ ಅಭಿಪ್ರಾಯಪಟ್ಟಿದ್ದಾರೆ. ಲಸಿಕೆಗೆ ಮೊದಲು ಲಸಿಕೆಯ ನಂತರದ ಅವಧಿಯಲ್ಲಿ (Sero surveillance significance in immunogenicity and safety in pre and post vaccination era) ವಹಿಸಬೇಕಾದ ಎಚ್ಚರಿಕೆಗಳ ಕುರಿತು ಆಯೋಜಿಸಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಕೊರೊನಾ ಲಸಿಕೆ ಹಂಚಿಕೆಗೆ ಸರ್ವ ಸನ್ನದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕೊವಿಡ್​ಗೆ ಒಳಗಾದವರು ಕೊರೊನಾ ಲಸಿಕೆ ಪಡೆಯುವುದು ಉತ್ತಮ. ಏಕೆಂದರೆ ಒಮ್ಮೆ ಕೊರೊನಾ ಸೋಂಕಿಗೆ ತುತ್ತಾದವರ ದೇಹದಲ್ಲಿ ಟಿ ಸೆಲ್​ಗಳು ಉತ್ತಮವಾಗಿ ಸ್ಪಂದಿಸುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಕೃಷ್ಣಾ ಎಲ್ಲಾ ತಿಳಿಸಿದ್ದಾರೆ.

ಭಾರತ್​ ಬಯೋಟೆಕ್​ ಸಂಸ್ಥೆಯ ಕೊರೊನಾ ಲಸಿಕೆ ಭಾರತದಲ್ಲಿ ಒಟ್ಟು 24 ಕಡೆ 3 ಹಂತದಲ್ಲಿ ಪರೀಕ್ಷೆಗೆ ಒಳಪಟ್ಟಿದೆ. ಈ ಮೂಲಕ ನಾವು ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದನ್ನು ಪರೀಕ್ಷಿಸಲಾಗುತ್ತಿದೆ. ಒಮ್ಮೆ ಲಸಿಕೆ ವಿತರಣೆ ಆರಂಭವಾದರೆ ಅದನ್ನು ವ್ಯವಸ್ಥಿತವಾಗಿ ಮಾಡಲು ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಮಾತನಾಡಿದ ಬಯೋಕಾನ್​ ಸಂಸ್ಥೆಯ ಮುಖ್ಯಸ್ಥ ಕಿರಣ್​ ಮಜುಮ್ದಾರ್ ಶಾ, ಕೊವಿಡ್​ ಕುರಿತು ವಿಶ್ವಮಟ್ಟದಲ್ಲಿ ಅನೇಕ ರೀತಿಯ ಲೆಕ್ಕಾಚಾರಗಳು ನಡೆಯುತ್ತಿವೆ. ಭಾರತದಲ್ಲೂ ನಾವು ಅಂತಹ ವಿಭಿನ್ನ ದೃಷ್ಟಿಯಲ್ಲಿ ಯೋಚಿಸಬೇಕು. ಆಗ ಭಾರತದ ಯಾವ ಭಾಗದಲ್ಲಿ ಹರ್ಡ್​ ಇಮ್ಯೂನಿಟಿ ಅಭಿವೃದ್ಧಿಯಾಗಿದೆ. ಯಾವ ಜನರು ಸುಲಭವಾಗಿ ಸಾಮಾನ್ಯ ಜೀವನಕ್ಕೆ ಮರಳಬಹುದು ಎಂಬ ಕುರಿತು ಸ್ಪಷ್ಟ ಮಾಹಿತಿ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್