ಕೊವಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ Volunteers ಬೇಕಾಗಿದ್ದಾರೆ.. ಯಾರೆಲ್ಲಾ ಪಾಲ್ಗೊಳ್ಳಬಹುದು?

ಕೋವಿಡ್-19 ಲಸಿಕೆಗಳನ್ನು ಜನ ಬಳಕೆಗೆ ಶೀಘ್ರವಾಗಿ ಲಭ್ಯವಾಗುವಂತೆ ಮಾಡಬೇಕೆನ್ನುವ ಪ್ರಯತ್ನಕ್ಕೆ ಹೊಸ ವೇಗ ದೊರೆತಿದೆ. ಯೂರೋಪಿನ ಹಲವು ದೇಶಗಳಲ್ಲಿ ಕೊರೊನಾ ವೈರಸ್​ನ 2ನೇ ಅಲೆ ಪ್ರಬಲವಾಗುತ್ತಿರುವ ಭೀತಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯೋಗದ ಅಂತಿಮ ಹಂತಕ್ಕೆ ಬಂದಿರುವ ಲಸಿಕೆಗಳು ಹೊಸ ಭರವಸೆ ಮೂಡಿಸಿವೆ. ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ ಬೇಕಾಗಿದ್ದಾರೆ..  ಲಸಿಕೆ ತಯಾರಿಕೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿರುವ ಭಾರತ್ ಬಯೋಟೆಕ್ ಕಂಪನಿಯು ಕೊವಾಕ್ಸಿನ್ ಲಸಿಕೆಯ 3ನೇ ಹಂತದ ಪ್ರಯೋಗಕ್ಕೆ ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ […]

ಕೊವಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ Volunteers ಬೇಕಾಗಿದ್ದಾರೆ.. ಯಾರೆಲ್ಲಾ ಪಾಲ್ಗೊಳ್ಳಬಹುದು?
ಕೊವ್ಯಾಕ್ಸಿನ್ ಲಸಿಕೆ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on:Nov 21, 2020 | 3:51 PM

ಕೋವಿಡ್-19 ಲಸಿಕೆಗಳನ್ನು ಜನ ಬಳಕೆಗೆ ಶೀಘ್ರವಾಗಿ ಲಭ್ಯವಾಗುವಂತೆ ಮಾಡಬೇಕೆನ್ನುವ ಪ್ರಯತ್ನಕ್ಕೆ ಹೊಸ ವೇಗ ದೊರೆತಿದೆ. ಯೂರೋಪಿನ ಹಲವು ದೇಶಗಳಲ್ಲಿ ಕೊರೊನಾ ವೈರಸ್​ನ 2ನೇ ಅಲೆ ಪ್ರಬಲವಾಗುತ್ತಿರುವ ಭೀತಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯೋಗದ ಅಂತಿಮ ಹಂತಕ್ಕೆ ಬಂದಿರುವ ಲಸಿಕೆಗಳು ಹೊಸ ಭರವಸೆ ಮೂಡಿಸಿವೆ.

ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ ಬೇಕಾಗಿದ್ದಾರೆ..  ಲಸಿಕೆ ತಯಾರಿಕೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿರುವ ಭಾರತ್ ಬಯೋಟೆಕ್ ಕಂಪನಿಯು ಕೊವಾಕ್ಸಿನ್ ಲಸಿಕೆಯ 3ನೇ ಹಂತದ ಪ್ರಯೋಗಕ್ಕೆ ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೊಲ್ಕತ್ತಾ ಮಹಾನಗರಗಳಲ್ಲಿ ತಲಾ 2000 ಆಸಕ್ತರನ್ನು ನೋಂದಾಯಿಸಲು ಮುಂದಾಗಿದೆ.

ಅಮೆರಿಕದ ಫೈಜರ್ ಮತ್ತು ಜರ್ಮನಿಯ ಬಯೋಎನ್ಟೆಕ್ ಕಂಪನಿಗಳು ಜಂಟಿಯಾಗಿ ಅಭಿವೃದ್ಧಿಪಡಿಸಿರುವ BNT162b2 ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಅಮೆರಿಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿವೆ.

ಕೋವಿಡ್-19 ಲಸಿಕೆಗೆ ಸಂಬಂಧಿಸಿದಂತೆ ನಡೆದಿರುವ ಬೆಳವಣಿಗೆಗಳು 1. ಕೋವಿಡ್-19 ನಿಯಂತ್ರಣಕ್ಕೆ ಕೊವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿರುವ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು, ಲಸಿಕೆಯ ಪ್ರಯೋಗದಲ್ಲಿ ಪಾಲ್ಗೊಳ್ಳಲು ಆಸಕ್ತರನ್ನು ಸ್ವಾಗತಿಸಿದೆ. 18 ವರ್ಷಕ್ಕಿಂತ ಕಡಿಮೆ ಇರುವವರು ಮತ್ತು ಈ ಹಿಂದೆ ಕೋವಿಡ್-19 ಪಾಸಿಟಿವ್ ಆಗಿದ್ದವರು ಪ್ರಯೋಗದಲ್ಲಿ ಪಾಲ್ಗೊಳ್ಳುವಂತಿಲ್ಲ.

ಇದು ಭಾರತದಲ್ಲಿ ಈವರೆಗಿನ ಅತಿದೊಡ್ಡ ಲಸಿಕೆ ಪ್ರಯೋಗ ಎನಿಸಿಕೊಂಡಿದೆ. ‘ಬ್ರೆಜಿಲ್ ದೇಶದ ಸರ್ಕಾರದೊಂದಿಗೂ ಕಂಪನಿ ಸಂಪರ್ಕದಲ್ಲಿದ್ದು, ಅಲ್ಲಿಯೂ ಪ್ರಯೋಗ ನಡೆಸಲು ಮುಂದಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಾಯಿ ಪ್ರಸಾದ್ ಅವರು ತಿಳಿಸಿದ್ದಾರೆ.

2. ಫೈಜರ್ ಮತ್ತು ಬಯೊಎನ್ಟೆಕ್ ಕಂಪನಿಗಳು ಅಭಿವೃದ್ಧಿಪಡಿಸಿರುವ BNT162b2 ಲಸಿಕೆ ಕೊರೊನಾ ನಿಯಂತ್ರಣಕ್ಕೆ ಶೇ 95ರಷ್ಟು ಪರಿಣಾಮಕಾರಿ ಎಂದು ಸಾಬೀತಾಗಿದೆ. ಸುರಕ್ಷೆಗೆ ಸಂಬಂಧಿಸಿದಂತೆಯೂ ಯಾವುದೇ ಗಣನೀಯ ಆತಂಕಗಳು ವರದಿಯಾಗಿಲ್ಲ. ಔಷಧಿಯ ತುರ್ತು ಬಳಕೆಗೆ ಅನುಮತಿ ಕೋರಿ ‘ಅಮೆರಿಕದ ಆಹಾರ ಮತ್ತು ಔಷಧ ನಿಯಂತ್ರಣಾ ಸಂಸ್ಥೆ‘ಗೆ (FDA – United States Food and Drug Administration) ಅರ್ಜಿ ಸಲ್ಲಿಸಿರುವುದಾಗಿ ಫೈಜರ್ ಸಿಇಒ ಆಲ್ಬರ್ಟ್ ಬೌರ್ಲಾ ತಿಳಿಸಿದ್ದಾರೆ.

3. ದೀರ್ಘಕಾಲ ಸಕ್ರಿಯವಾಗಿರುವ ಮೊನೊಕ್ಲೋನಲ್ ಪ್ರತಿಕಾಯದ (ಆ್ಯಂಟಿಬಾಡಿ) ಸಂಯೋಜನೆಯಿಂದ AZD7442 ಔಷಧಿಯನ್ನು ಅಭಿವೃದ್ಧಿಪಡಿಸಿರುವ ಬ್ರಿಟನ್ ಮೂಲದ ಆಸ್ಟ್ರಾಜೆನೆಕಾ ಕಂಪನಿ ಇಂದಿನಿಂದ (ನ.21) ಅಂತಿಮ ಹಂತದ ಪ್ರಯೋಗ ಆರಂಭಿಸಿದೆ. ನಿರ್ದಿಷ್ಟ ಬಿಳಿ ರಕ್ತಕಣಗಳಿಂದ ಪ್ರತ್ಯೇಕಿಸಿರುವ ಪ್ರತಿಕಾಯದಿಂದ ಅಭಿವೃದ್ಧಿಪಡಿಸಿರುವ ಈ ಔಷಧಿಯನ್ನು ತೆಗೆದುಕೊಂಡ ನಂತರದ 12 ತಿಂಗಳು ಕೊರೊನಾ ಸೋಂಕಿನ ಭೀತಿ ಇರುವುದಿಲ್ಲ.

ಯೂರೋಪಿನ ವಿವಿಧ ದೇಶಗಳು ಮತ್ತು ಅಮೆರಿಕದಿಂದ ಒಟ್ಟು 5000 ಮಂದಿಯನ್ನು ಪ್ರಯೋಗ ನಡೆಸಲು ಸಂಸ್ಥೆ ಆಯ್ಕೆ ಮಾಡಿದೆ. ಲಸಿಕೆಗೂ ಈ ಔಷಧಿಯ ಕಾರ್ಯವೈಖರಿಗೂ ಬಹಳ ವ್ಯತ್ಯಾಸವಿದೆ. ಲಸಿಕೆಗಳು ದೇಹದಲ್ಲಿ ಪ್ರತಿಕಾಯಗಳನ್ನು ಬೆಳೆಸುವ ಮೂಲಕ ಸೋಂಕು ತಡೆಗಟ್ಟುತ್ತದೆ, ಈ ಔಷಧಿಯು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಮೂಲಕ ಸೋಂಕಿನಿಂದ ರಕ್ಷಿಸುತ್ತದೆ.

Published On - 3:49 pm, Sat, 21 November 20

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?