Bharat Drone Mahotsav 2022: ಭಾರತ ಜಾಗತಿಕ ಡ್ರೋನ್ ಹಬ್ ಆಗುವ ಸಾಮರ್ಥ್ಯ ಹೊಂದಿದೆ; ಅತಿ ದೊಡ್ಡ ಡ್ರೋನ್ ಉತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

| Updated By: ಸುಷ್ಮಾ ಚಕ್ರೆ

Updated on: May 27, 2022 | 11:54 AM

ಈ ಡ್ರೋನ್ ಉತ್ಸವದಲ್ಲಿ ಸರ್ಕಾರಿ ಅಧಿಕಾರಿಗಳು, ವಿದೇಶಿ ರಾಜತಾಂತ್ರಿಕರು, ಸಶಸ್ತ್ರ ಪಡೆಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ಸಾರ್ವಜನಿಕ ವಲಯದ ಉದ್ಯಮಗಳು, ಡ್ರೋನ್ ಸ್ಟಾರ್ಟ್‌ಅಪ್‌ಗಳನ್ನು ಒಳಗೊಂಡ 1,600ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Bharat Drone Mahotsav 2022: ಭಾರತ ಜಾಗತಿಕ ಡ್ರೋನ್ ಹಬ್ ಆಗುವ ಸಾಮರ್ಥ್ಯ ಹೊಂದಿದೆ; ಅತಿ ದೊಡ್ಡ ಡ್ರೋನ್ ಉತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ
ಡ್ರೋನ್ ಉತ್ಸವಕ್ಕೆ ಚಾಲನೆ ನೀಡಿದ ನರೇಂದ್ರ ಮೋದಿ
Image Credit source: ANI
Follow us on

ನವದೆಹಲಿ: ಭಾರತದ ಅತಿದೊಡ್ಡ ಡ್ರೋನ್ ಉತ್ಸವಕ್ಕೆ (Drone Festival) ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಶುಕ್ರವಾರ) ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಮೋದಿ, ಭಾರತ ಸದ್ಯದಲ್ಲೇ ಜಾಗತಿಕ ಡ್ರೋನ್ ಹಬ್ (Drone Hub) ಆಗುವ ಎಲ್ಲ ಸಾಮರ್ಥ್ಯವನ್ನೂ ಹೊಂದಿದೆ. ಈ ಉತ್ಸವ ಕೇವಲ ಡ್ರೋನ್​ಗೆ ಸಂಬಂಧಿಸಿದ್ದಲ್ಲ. ಹೊಸ ತಂತ್ರಜ್ಞಾನ, ಆವಿಷ್ಕಾರಗಳ ಕುರಿತಾದ ಸಕಾರಾತ್ಮಕತೆಯನ್ನು ಈ ಉತ್ಸವದ ಮೂಲಕ ಪಸರಿಸಲಾಗುತ್ತಿದೆ ಎಂದಿದ್ದಾರೆ.

ಡ್ರೋನ್ ಒಂದು ಸ್ಮಾರ್ಟ್ ಸಾಧನವಾಗಿದ್ದು ಇದು ಸಾಮಾನ್ಯ ಭಾರತೀಯರ ಜೀವನದ ಭಾಗವಾಗಿದೆ. ಇದು ಕೃಷಿ ಕ್ಷೇತ್ರ, ಆಟದ ಮೈದಾನ, ಮಾಧ್ಯಮ ಅಥವಾ ಚಲನಚಿತ್ರೋದ್ಯಮದಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಮುಂದಿನ ದಿನಗಳಲ್ಲಿ ತಂತ್ರಜ್ಞಾನದ ಹೆಚ್ಚಿನ ಬಳಕೆಯನ್ನು ನಾವು ನೋಡಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ
Viral Video: 20 ನಿಮಿಷ ಮೊದಲೇ ರೈಲು ನಿಲ್ದಾಣ ತಲುಪಿದ್ದಕ್ಕೆ ಪ್ಲಾಟ್​ಫಾರ್ಮ್​ನಲ್ಲೇ ಡ್ಯಾನ್ಸ್​ ಮಾಡಿದ ಪ್ರಯಾಣಿಕರು; ವಿಡಿಯೋ ವೈರಲ್
ವೇಶ್ಯಾವಾಟಿಕೆಯೂ ಒಂದು ವೃತ್ತಿ, ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸುವಂತಿಲ್ಲ; ಸುಪ್ರೀಂ ಕೋರ್ಟ್​ ಮಹತ್ವದ ಆದೇಶ
Bharat Drone Mahotsav 2022: ಭಾರತದ ಅತಿದೊಡ್ಡ ಡ್ರೋನ್ ಉತ್ಸವಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

ಹಿಂದಿನ ಆಡಳಿತದ ಅವಧಿಯಲ್ಲಿ ತಂತ್ರಜ್ಞಾನವನ್ನು ಸಮಸ್ಯೆಯ ಭಾಗವೆಂದು ಪರಿಗಣಿಸಲಾಗಿತ್ತು. ಅದನ್ನು ಬಡವರ ವಿರೋಧಿ ಎಂದು ಸಾಬೀತುಪಡಿಸಲು ಪ್ರಯತ್ನಗಳನ್ನು ಮಾಡಲಾಯಿತು. ಇದರಿಂದಾಗಿ 2014ರ ಮೊದಲು ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯ ಬಗ್ಗೆ ಅಸಡ್ಡೆಯ ವಾತಾವರಣವಿತ್ತು. ಬಡವರು ಹೆಚ್ಚು ತೊಂದರೆ ಅನುಭವಿಸಿದರು, ವಂಚಿತರು, ಮಧ್ಯಮ ವರ್ಗದವರು ಹೆಚ್ಚು ತೊಂದರೆ ಅನುಭವಿಸಿದರು. ಈ ಕಾರ್ಯಕ್ರಮ ಕೇವಲ ಡ್ರೋನ್‌ಗಳಿಗೆ ಮಾತ್ರವಲ್ಲ, ಭಾರತದಲ್ಲಿ ಹೊಸ ತಂತ್ರಜ್ಞಾನ ಮತ್ತು ಆವಿಷ್ಕಾರದತ್ತ ಸಕಾರಾತ್ಮಕತೆಗಾಗಿಯೂ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಇದನ್ನೂ ಓದಿ: Bharat Drone Mahotsav 2022: ಭಾರತದ ಅತಿದೊಡ್ಡ ಡ್ರೋನ್ ಉತ್ಸವಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದ ಮೊದಲು ಮಾತನಾಡಿದ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ, “2026ರ ವೇಳೆಗೆ ಡ್ರೋನ್ ಉದ್ಯಮವು 15,000 ಕೋಟಿ ರೂ. ವಹಿವಾಟನ್ನು ತಲುಪುತ್ತದೆ ಎಂದು ಅಂದಾಜಿಸಲಾಗಿದೆ. ಇಂದು ಭಾರತದಲ್ಲಿ 270 ಡ್ರೋನ್ ಸ್ಟಾರ್ಟ್‌ಅಪ್‌ಗಳಿವೆ ಎಂದಿದ್ದಾರೆ.

ಈ ಡ್ರೋನ್ ಉತ್ಸವದಲ್ಲಿ ಸರ್ಕಾರಿ ಅಧಿಕಾರಿಗಳು, ವಿದೇಶಿ ರಾಜತಾಂತ್ರಿಕರು, ಸಶಸ್ತ್ರ ಪಡೆಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ಸಾರ್ವಜನಿಕ ವಲಯದ ಉದ್ಯಮಗಳು, ಖಾಸಗಿ ಕಂಪನಿಗಳು ಮತ್ತು ಡ್ರೋನ್ ಸ್ಟಾರ್ಟ್‌ಅಪ್‌ಗಳನ್ನು ಒಳಗೊಂಡ 1,600ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 70ಕ್ಕೂ ಹೆಚ್ಚು ಪ್ರದರ್ಶಕರು ಡ್ರೋನ್‌ಗಳ ವಿವಿಧ ಬಳಕೆಯ ಪ್ರಕರಣಗಳನ್ನು ಪ್ರದರ್ಶಿಸುತ್ತಾರೆ. ಭಾರತ್ ಡ್ರೋನ್ ಮಹೋತ್ಸವ 2022 ದೆಹಲಿಯ ಪ್ರಗತಿ ಮೈದಾನದಲ್ಲಿ ಮೇ 28ರವರೆಗೆ ನಡೆಯಲಿದೆ.

ಈ ಡ್ರೋನ್ ಉತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ವೃತ್ತಿಪರ ಡ್ರೋನ್ ಅನ್ನು ಹಾರಿಸಲಿದ್ದಾರೆ ಎಂದು ವರದಿಯಾಗಿದೆ. ಭಾರತ್ ಡ್ರೋನ್ ಮಹೋತ್ಸವದಲ್ಲಿ ಮೊದಲ ದಿನವಾದ ಇಂದು 100ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸಲಿದ್ದಾರೆ. ಹಾಗೇ, 20ಕ್ಕೂ ಹೆಚ್ಚು ಸಚಿವರು ಭಾಗವಹಿಸುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:49 am, Fri, 27 May 22