Food Poisoning: ವಿಷಪೂರಿತ ಆಹಾರ ಸೇವನೆ, ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

ರೈಲು
Follow us
|

Updated on: Nov 30, 2023 | 9:06 AM

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

ಚೆನ್ನೈನಿಂದ ಗುಜರಾತ್‌ನ ಪಾಲಿಟಾನಾಗೆ ಪ್ರಯಾಣಿಸುತ್ತಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ಪ್ಯಾಕೇಜ್ ರೈಲಿನಲ್ಲಿ ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಅಡುಗೆ ಗುತ್ತಿಗೆದಾರರು ನೀಡಿದ ಭೋಜನವನ್ನು ಸೇವಿಸಿದ ನಂತರ 90 ಮಂದಿಗೆ ಅನಾರೋಗ್ಯ ಕಾಡಿತ್ತು.

ಅನೇಕ ಪ್ರಯಾಣಿಕರು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದರು, ಗುಜರಾತ್‌ನ ಪಾಲಿಟಾನಾಗೆ ಹೋಗುವ ರೈಲು ಪುಣೆ ರೈಲು ನಿಲ್ದಾಣದಲ್ಲಿ ತುರ್ತು ನಿಲುಗಡೆ ಮಾಡಲಾಯಿತು. ರೈಲಿನ ಸ್ನಾನಗೃಹಗಳನ್ನು ಸ್ವಚ್ಛಗೊಳಿಸಲಾಯಿತು. ಕಲ್ಯಾಣ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಬೇಕು ಎಂಬ ಸೂಚನೆಯೊಂದಿಗೆ ರೈಲು ಹೊರಟಿತು.

ರೂಬಿ ಹಾಲ್ ಕ್ಲಿನಿಕ್ ರೈಲ್ವೆ ಆಸ್ಪತ್ರೆ ಮತ್ತು ಸಾಸೂನ್ ಜನರಲ್ ಆಸ್ಪತ್ರೆಯ ವೈದ್ಯರು ಒಟ್ಟು 99 ರೋಗಿಗಳನ್ನು ಪರೀಕ್ಷಿಸಿದರು ಮತ್ತು ಎಲ್ಲಾ ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೈಸೂರು, ಬೆಂಗಳೂರು, ಚೆನ್ನೈ ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ನೈಋತ್ಯ ರೈಲ್ವೆ; ಇಲ್ಲಿದೆ ವಿವರ

50 ನಿಮಿಷಗಳ ನಂತರ ರೈಲು ತನ್ನ ಪ್ರಯಾಣ ಮುಂದುವರೆಸಿತು. ಪ್ರಯಾಣಿಕರು ತಾವೇ ಆಹಾರ ತಂದಿದ್ದರು, ರೈಲ್ವೆ ಸಿಬ್ಬಂದಿ ಪೂರೈಸಿಲ್ಲ ಎಂದು ಹೇಳಲಾಗಿದೆ.

ಎಲ್ಲಾ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ನಂತರ ಸಹಜ ಸ್ಥಿತಿಯಲ್ಲಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, ಅವರೆಲ್ಲರೂ ಅದೇ ರೈಲಿನಲ್ಲಿ ತಮ್ಮ ಪ್ರಯಾಣವನ್ನು ಮುಂದುವರೆಸಿದರು, ಎಂದು ಸೆಂಟ್ರಲ್ ರೈಲ್ವೆ ಸಿಪಿಆರ್‌ಒ ಹೇಳಿಕೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ

ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ

ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ

ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...

ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ

Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ